ರಾಜಕೀಯರಾಜ್ಯ

ಕರ್ನಾಟಕ ಚುನಾವಣೆಗೆ ಎರಡೇ ದಿನ ಬಾಕಿ;ಅಭ್ಯರ್ಥಿಗಳಿಂದ ಮನೆ ಮನೆ ಪ್ರಚಾರ ಜೋರು

Karnataka elections are two days away; candidates are campaigning from house to house

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ (Karnataka Assembly Election 2023) ರಣಕಣ ಅಂತಿಮ ಘಟಕ್ಕೆ ಬಂದಿದ್ದು, ಮತದಾನಕ್ಕೆ ಇನ್ನ ಎರಡು ದಿನಗಳು ಮಾತ್ರ ಬಾಕಿ ಉಳಿದಿದೆ.
ರಾಜಕೀಯ ಪಕ್ಷಗಳು ಇಂದು (ಮೇ 7 ಭಾನುವಾರ) ಮತ್ತು ನಾಳೆ (ಮೇ 8 ಸೋಮವಾರ) ಮಾತ್ರ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಅವಕಾಶವಿದ್ದು, ನಾಳೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿದೆ.

ಆ ಬಳಿಕ ಕ್ಷೇತ್ರಗಳಲ್ಲಿ ಆಯಾ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರೂ ಇರುವಂತಿಲ್ಲ. ಅಂದರೆ ಹೊರಗಡೆಯಿಂದ ಬಂದಿರುವ ಸ್ಟಾರ್ ಪ್ರಚಾರಕರು ಕ್ಷೇತ್ರಗಳನ್ನ ತೊರೆಯಬೇಕಾಗುತ್ತದೆ. ಮತದಾನಕ್ಕೆ 48 ಗಂಟೆಗಳು ಬಾಕಿ ಸಮಯವನ್ನು ಶೂನ್ಯ ಅವಧಿ ಎಂದು ಇಸಿ ಪರಿಗಣಿಸುತ್ತದೆ. ಮೇ 9 ರಂದು ಅಭ್ಯರ್ಥಿಗಳ ತಮ್ಮ ಕ್ಷೇತ್ರಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಬಹುದಾಗಿದೆ.

ಕಾಂಗ್ರೆಸ್, ಬಿಜೆಪಿ, ಹಾಗೂ ಎಎಪಿ ಪಕ್ಷಗಳು ತಮ್ಮ ರಾಷ್ಟ್ರೀಯ ನಾಯಕರನ್ನು ಕರೆಸಿ ದೊಡ್ಡ ದೊಡ್ಡ ರೋಡ್ ಶೋಗಳು, ರಾಲಿಗಳು ಹಾಗೂ ಸಾರ್ವಜನಿಕ ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿವೆ. ಆದರೆ ಸ್ಥಳೀಯರ ಪ್ರಾದೇಶಿಕ ಪಕ್ಷ ಜೆಡಿಎಸ್‌ನಲ್ಲಿ ಮಾತ್ರ ಪ್ರಧಾನಿ ಪ್ರಧಾನಿ ಹೆಚ್‌ ಡಿ ದೇವೇಗೌಡರು, ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರೇ ಸ್ಟಾರ್ ಕ್ಯಾಂಪೇನರ್‌ಗಳಾಗಿದ್ದಾರೆ.

ಬಿಜೆಪಿಯಲ್ಲಿ ಅಂತೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಸೇರಿದಂತೆ ದೊಡ್ಡ ದಂಡೇ ರಾಜ್ಯಕ್ಕೆ ಆಗಮಿಸಿದ ಕೇಸರಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡ್ತಿದ್ದಾರೆ. ಕಿಚ್ಚ ಸುದೀಪ್ ಸೇರಿದಂತೆ ಹಲವು ಸಿಟಿ ನಟ-ನಟಿಯರು ಅಬ್ಬರದ ಪ್ರಚಾರದಲ್ಲಿ ಭಾಗವಹಿಸಿದ್ದಾರೆ.
ಪ್ರಧಾನಿ ಮೋದಿ ಅವರು ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಿ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿದ್ದಾರೆ. ಸಾರ್ವಜನಿಕ ಸಮಾವೇಶಗಳಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಅಭಿವೃದ್ಧಿ ಮಾಡಿಲ್ಲ, ಕುಟುಂಬ ರಾಜಕಾರಣ, ಭ್ರಷ್ಟಾಚಾರ ಅಂತ ವಾಗ್ದಾಳಿ ನಡೆಸುತ್ತಿದ್ದಾರೆ.

ಇತ್ತ ಕಾಂಗ್ರೆಸ್‌ ಕೂಡ ಬಿಜೆಪಿಗಿಂತ ತಾವೇನು ಕಡಿಮೆ ಇಲ್ಲ ಎಂಬಂತೆ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಪಕ್ಷದ ಅಧಿ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿ ಹೀಗೆ ಬಲಿಷ್ಠ ಪಡೆಯನ್ನೇ ಕರೆಸಿ ಪ್ರಚಾರ ನಡೆಸುತ್ತಿದೆ.

40 ಪರ್ಸೆಂಟ್ ಕಮಿಷನ್, ನೇಮಕಾತಿ ಹಗರಣಗಳು, ಅಕ್ರಮ ಹಣ ಪತ್ತೆ, ನಿರುದ್ಯೋಗ ಹೀಗೆ ಹಲವು ವಿಚಾರಗಳನ್ನು ಇಟ್ಟುಕೊಂಡು ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ಡಬಲ್ ಇಂಜಿನ್ ಸರ್ಕಾರದ ವೈಫಲ್ಯಗಳ ಬಗ್ಗೆ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಇತ್ತ ಜೆಡಿಎಸ್‌ ಕೂಡ ತಮ್ಮಲ್ಲಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಹಳೇ ಮೈಸೂರು ಭಾಗ ಸೇರಿದಂತೆ ಗೆಲ್ಲಬಹುದಾದ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ಮಾಡಿದ್ದು, ಕಾಂಗ್ರೆಸ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ ಅವರೇ ಜೆಡಿಎಸ್‌ನ ಸ್ಟಾರ್ ಪ್ರಚಾರಕರಾಗಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಚುನಾವಣೆಗೆ ಏಪ್ರಿಲ್ 13 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆಗೆ ಎರಡೇ ದಿನ ಬಾಕಿ; ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಆರ್ ಅಶೋಕ್ ಪರ ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ

ಇದನ್ನೂ ಓದಿ...

Back to top button
>