• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಇ.ಡಿಯಿಂದ ₹20.85 ಕೋಟಿ ಮೌಲ್ಯದ ಆಸ್ತಿ ತಾತ್ಕಾಲಿಕ ಜಪ್ತಿ

Sambrama Prabha News by Sambrama Prabha News
January 23, 2026
in Latest News
0
ಇ.ಡಿಯಿಂದ ₹20.85 ಕೋಟಿ ಮೌಲ್ಯದ ಆಸ್ತಿ ತಾತ್ಕಾಲಿಕ ಜಪ್ತಿ

Updated By: Priyalachhi

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ), ಬೆಂಗಳೂರು ವಲಯ ಕಚೇರಿ ಅಧಿಕಾರಿಗಳ ತಂಡ 20.85 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿದೆ.

ತಾತ್ಕಾಲಿಕ ಜಪ್ತಿಗೊಂಡ ಆಸ್ತಿಗಳಲ್ಲಿ ಕಾನೂನುಬಾಹಿರವಾಗಿ ಹಂಚಿಕೆಗೊಂಡ 6 ಮುಡಾ ನಿವೇಶನಗಳು, 3 ಇತರೆ ಮಾದರಿ ಆಸ್ತಿಗಳು ಹಾಗೂ ಒಂದು ವಾಣಿಜ್ಯ ಕಟ್ಟಡ ಸೇರಿವೆ. ಜನವರಿ 21ರಂದು ಇ.ಡಿ ದಾಳಿ ನಡೆಸಿದೆ.

ಮೈಸೂರಿನಲ್ಲಿ ದಾಖಲಾಗಿದ್ದ ಮುಡಾ ಪ್ರಕರಣದ ಎಫ್‌ಐಆರ್ ತನಿಖೆಯನ್ನು ಜಾರಿ ನಿರ್ದೇಶನಾಲಯ ಆರಂಭಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ (ಭೂಸ್ವಾಧೀನಕ್ಕೆ ಪರಿಹಾರವಾಗಿ ನಿವೇಶನ ಹಂಚಿಕೆ) ನಿಯಮಗಳು2009 (2015ರ ತಿದ್ದುಪಡಿ ಸಹಿತ) ಹಾಗೂ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ (ಸ್ವಯಂ ಭೂಸರಣಿ ಪ್ರೋತ್ಸಾಹ ಯೋಜನೆ) ನಿಯಮಗಳು 1991ರ ಘೋರ ಉಲ್ಲಂಘನೆಯೊಂದಿಗೆ ನಿವೇಶನಗಳನ್ನು ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ ಎಂದು ಇ.ಡಿ ಹೇಳಿದೆ.

ಇದೇ ವೇಳೆ, ಮುಡಾ ಅಧಿಕಾರಿಗಳು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳ ನಡುವಿನ ಸಂಬಂಧ ಹಾಗೂ ಪರಿಹಾರ ರೂಪದಲ್ಲಿ ನಿವೇಶನ ಹಂಚಿಕೆ ಹಾಗೂ ಲೇಔಟ್ ಅನುಮೋದನೆಗಾಗಿ ನಗದು ಪಾವತಿ ನಡೆದಿರುವುದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಇ.ಡಿ ತಿಳಿಸಿದೆ.

Tags: ₹20.85 ಕೋಟಿ
Previous Post

ಆರ್‌ಟಿಐ ಬಳಕೆದಾರರಿಗೆ ದೊಡ್ಡ ಜಯ: ಸಾರ್ವಜನಿಕ ಸೇವಕನ ವಿವರಗಳು ಇನ್ನು ಮುಂದೆ ರಹಸ್ಯವಲ್ಲ

Next Post

ಬೆಂಗಳೂರಿನಲ್ಲಿ SC/ST/OBC ಮಠಗಳಿಗೆ 40 ಎಕರೆ ಭೂಮಿ

Next Post
ಬೆಂಗಳೂರಿನಲ್ಲಿ SC/ST/OBC ಮಠಗಳಿಗೆ 40 ಎಕರೆ ಭೂಮಿ

ಬೆಂಗಳೂರಿನಲ್ಲಿ SC/ST/OBC ಮಠಗಳಿಗೆ 40 ಎಕರೆ ಭೂಮಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.