• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸದನದಿಂದ ಬಿ.ಕೆ.ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಆಗ್ರಹ

Sambrama Prabha News by Sambrama Prabha News
January 23, 2026
in Politics
0
ಸದನದಿಂದ ಬಿ.ಕೆ.ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಆಗ್ರಹ

Updated By: Priyalachhi

ಬೆಂಗಳೂರು: ಚುಟುಕು ಭಾಷಣಕ್ಕೆ ಸೀಮಿತಗೊಳಿಸಿ ಜಂಟಿ ಅಧಿವೇಶನದಿಂದ ಹೊರನಡೆದಿದ್ದ ರಾಜ್ಯಪಾಲರಿಗೆ ತಡೆದು ಅಗೌರವ ಸೂಚಿಸಿರುವ ಕಾಂಗ್ರೆಸ್​ನ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಸದನದಿಂದ ಅಮಾನತು ಮಾಡಬೇಕೆಂದು ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು.

ಜಂಟಿ ಅಧಿವೇಶನದ ಎರಡನೇ ದಿನವಾದ ಶುಕ್ರವಾರ (ಇಂದು) ಕಲಾಪ ಆರಂಭವಾಗುತ್ತಿದ್ದಂತೆ, ಛಲವಾದಿ ನಾರಾಯಣಸ್ವಾಮಿ ಅವರು ಈ ವಿಷಯ ಪ್ರಸ್ತಾಪಿಸಿದರು. ಉಭಯ ಸದನವನ್ನು ಉದ್ದೇಶಿಸಿ ಚುಟುಕು ಭಾಷಣ ಮುಗಿಸಿ ಹೊರ ಹೋಗುತ್ತಿದ್ದ ರಾಜ್ಯಪಾಲರ ಎದುರು ಗೂಂಡಾಗಳ ರೀತಿ ವರ್ತಿಸಿ, ಅವರನ್ನು ತಡೆಯಲು ಪ್ರಯತ್ನಿಸಿದ್ದಾರೆ. ಈ ಮೂಲಕ ಗವರ್ನರ್​​ಗೆ ಅಗೌರವ ಸೂಚಿಸಿದ್ದಾರೆ. ಹೀಗಾಗಿ, ಅವರನ್ನು ಸಸ್ಪೆಂಡ್ ಮಾಡಬೇಕು ಎಂದು ಆಗ್ರಹಿಸಿದರು. ಈ ವೇಳೆ, ದುಂಡಾವರ್ತನೆ ತೋರಿದ ಹರಿಪ್ರಸಾದ್ ವಿರುದ್ಧ ಕ್ರಮ ಆಗಬೇಕು ಎನ್ನುತ್ತ ಒಕ್ಕೋರಲಿನಿಂದ ವಿಪಕ್ಷ ಸದಸ್ಯರು ಎದ್ದು ನಿಂತು ಆಗ್ರಹಿಸಿದರು.

ಛಲವಾದಿ ಮಾತಿಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಶೇಮ್.. ಶೇಮ್ ಎಂದು ಘೋಷಣೆ ಕೂಗುವ ಮೂಲಕ ತಿರುಗೇಟು ನೀಡಿದರು. ಈ ವೇಳೆ ಕ್ರಿಯಾಲೋಪ ಎತ್ತಿದ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಲು ಆರಂಭಿಸುತ್ತಿದ್ದಂತೆ, ವಿಪಕ್ಷ ಸದಸ್ಯರು ಆಕ್ಷೇಪಿಸಿದರು. ಗೂಂಡಾಗಿರಿ ವರ್ತನೆ ತೋರಿದ ಹರಿಪ್ರಸಾದ್ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಪಟ್ಟು ಹಿಡಿದರು.

ಈ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಷ್ಟ್ರಗೀತೆಗೆ ಅವಮಾನ ಮಾಡಿದ ರಾಜ್ಯಪಾಲರಿಗೆ ಏನು ಶಿಕ್ಷೆ ಕೊಡುತ್ತೀರಾ, ಮೊದಲು ಅದು ಹೇಳಿ ಎಂದು ಒತ್ತಾಯಿಸಿದರು.

ಗದ್ದಲದ ನಡುವೆಯೂ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಈ ಹಿಂದೆ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಅವರು ಸಹ ಭಾಷಣ ಮಾಡಿರಲಿಲ್ಲ, ನಾನು ಸರ್ಕಾರದ ಗುಲಾಮನಲ್ಲ ಎಂದು ಹೇಳಿ ಹೋಗಿದ್ದರು. ಕಾನೂನು ಪ್ರಕಾರ ಹೋರಾಟ ಮಾಡಲಿ. ಅದು ಬಿಟ್ಟು ಗೂಂಡಾಗಿರಿ ಮಾಡುವುದು ಸರಿನಾ? ಗೂಂಡಾಗಿರಿ ಮಾಡಿದವರನ್ನು ಸದನದಿಂದ ಅಮಾನತು ಮಾಡಬೇಕು. ರಾಜ್ಯಪಾಲರಿಗೆ ಅಪಮಾನವಾಗಿದೆ ಎಂದರು.

Tags: ಬಿ.ಕೆ.ಹರಿಪ್ರಸಾದ್
Previous Post

ರಾಜ್ಯಪಾಲರ ಭಾಷಣ ವಿಧಾನಸಭೆಯಲ್ಲಿ ಸದ್ದು, ಗದ್ದಲ, ಕೋಲಾಹಲವನ್ನು ಸೃಷ್ಟಿಸಿತು.

Next Post

ದುನಿಯಾ ವಿಜಯ್ ಮುಖ್ಯಭೂಮಿಕೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಇಂದು ಅದ್ಧೂರಿಯಾಗಿ ತೆರೆಕಂಡಿದೆ

Next Post
ದುನಿಯಾ ವಿಜಯ್ ಮುಖ್ಯಭೂಮಿಕೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಇಂದು ಅದ್ಧೂರಿಯಾಗಿ ತೆರೆಕಂಡಿದೆ

ದುನಿಯಾ ವಿಜಯ್ ಮುಖ್ಯಭೂಮಿಕೆಯ 'ಲ್ಯಾಂಡ್​​ಲಾರ್ಡ್' ಸಿನಿಮಾ ಇಂದು ಅದ್ಧೂರಿಯಾಗಿ ತೆರೆಕಂಡಿದೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.