ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಅವರು ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.
ಅಣ್ಣ, ತಮ್ಮ ಪರಸ್ಪರ ಹೋರಾಟಕ್ಕೆ ನಿಂತಿದ್ದರು. ಸೊರಬ ಕ್ಷೇತ್ರದಲ್ಲಿ ನಡೆಯುತ್ತಿರುವ ಹೋರಾಟ ಸಹೋದರರ ನಡುವೆಯ ಜಟಾಪಟಿಯಾಗಿದೆ. ಮೊದಲ ಸುತ್ತಿನ ಮತ ಏಣಿಕೆಯಿಂದಲೂ ಮುನ್ನಡೆ ಕಾದುಕೊಂಡಿದ್ದ ಮಧು ಬಂಗಾರಪ್ಪ ಅವರು ಗೆಲುವಿನ ನಗು ಬೀರಿದ್ದಾರೆ.
1994ರವರೆಗೆ ಸತತ ಏಳು ಬಾರಿ ಎಸ್ ಬಂಗಾರಪ್ಪ ಅವರು, ಸೊರಬವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ 2008ರಲ್ಲಿ ಒಮ್ಮೆ ಬಂಗಾರಪ್ಪ ಕುಟುಂಬದ ಹೊರತಾಗಿ ಹಾಲಪ್ಪ ಈ ಕ್ಷೇತ್ರದ ಶಾಸಕರಾಗಿದ್ದರು. ಈ ಹಿಂದಿನ ಅಣ್ಣ-ತಮ್ಮಂದಿರ ನಡುವಿನ ಎರಡೂ ಚುನಾವಣೆಯಲ್ಲಿ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರು. ಹಾಗೆಯೇ ಈಗಾಗಲೇ ಮೂರು ಬಾರಿ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಸುಮಾರು 13 ಸಾವಿರ ಮತಗಳಿಂದ ಕುಮಾರ ಬಂಗಾರಪ್ಪ ಗೆಲುವು ಸಾಧಿಸಿದ್ದರೆ, 2004ರಲ್ಲಿ ಸುಮಾರು 12 ಸಾವಿರ ಮತಗಳಿಂದ ವಿಜಯಿಯಾಗಿದ್ದರು.
2018ರ ಫಲಿತಾಂಶ ಏನಿತ್ತು?:
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 37 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 17 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತು.