Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ
Latest News Exclusive

‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ

Sambrama Prabha NewsBy Sambrama Prabha NewsJuly 11, 2026No Comments2 Mins Read
Share WhatsApp Facebook Twitter Telegram
kr-puram-bcm-hostel-cm-office-order-impact
Share
WhatsApp Facebook Twitter Telegram
  • ‘ಸಂಭ್ರಮ ಪ್ರಭ’ ದಿನಪತ್ರಿಕೆಯಲ್ಲಿ ಜುಲೈ 9 ರಂದು ಪ್ರಕಟವಾದ ವರದಿಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳ ಸಚಿವಾಲಯ.
  • ವಾಸ್ತವಾಂಶ ಪರಿಶೀಲಿಸಿ, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಕಾರ್ಯದರ್ಶಿಗೆ ಸೂಚನೆ.
  • ಅತಿ ಜರೂರಾಗಿ ಅನುಪಾಲನಾ ವರದಿ (Compliance Report) ಸಲ್ಲಿಸುವಂತೆ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ವೈಷ್ಣವಿ ಆದೇಶ.
  • ಸೂಕ್ತ ಕ್ರಮಕ್ಕಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೂ ಪತ್ರದ ಪ್ರತಿ ರವಾನೆ; ಬಡ ವಿದ್ಯಾರ್ಥಿಗಳಿಗೆ ಶೀಘ್ರವೇ ನ್ಯಾಯ ಸಿಗುವ ಭರವಸೆ.

ಬೆಂಗಳೂರು (ಕೆ.ಆರ್. ಪುರಂ):ಕೆ.ಆರ್. ಪುರಂ ತಾಲೂಕಿನ ಅವಲಹಳ್ಳಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ಇರುವ ಕಟ್ಟಡದಲ್ಲೇ ನಡೆಯುತ್ತಿದ್ದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (ಬಿಸಿಎಂ) ಬಾಲಕರ ವಿದ್ಯಾರ್ಥಿ ನಿಲಯದ ದಾರುಣ ಸ್ಥಿತಿ ಹಾಗೂ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರದಾಟದ ಕುರಿತು ‘ಸಂಭ್ರಮ ಪ್ರಭ’ ದಿನಪತ್ರಿಕೆ ಎಳೆಎಳೆಯಾಗಿ ಬಿಚ್ಚಿಟ್ಟಿತ್ತು. ಈ ವರದಿಗೆ ಇದೀಗ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಸಚಿವಾಲಯ ತಕ್ಷಣವೇ ಸ್ಪಂದಿಸಿದೆ.

ಜುಲೈ 09, 2026 ರಂದು ‘ಸಂಭ್ರಮ ಪ್ರಭ’ ಪತ್ರಿಕೆಯಲ್ಲಿ ಪ್ರಕಟವಾದ “ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್” ಎಂಬ ವಿಶೇಷ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ (Officer on Special Duty to CM) ಡಾ. ಕೆ. ವೈಷ್ಣವಿ ಅವರು, ಈ ಬಗ್ಗೆ ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರಿ ಕಾರ್ಯದರ್ಶಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸಿಎಂ ಕಾರ್ಯಾಲಯದ ಪತ್ರದಲ್ಲಿ ಏನಿದೆ?

ಮುಖ್ಯಮಂತ್ರಿಗಳ ಸಚಿವಾಲಯದಿಂದ ಬಿಡುಗಡೆಯಾದ ಅಧಿಕೃತ ಪತ್ರದಲ್ಲಿ ‘ಸಂಭ್ರಮ ಪ್ರಭ’ ಪತ್ರಿಕೆಯ ವರದಿಯ ಸಾಲುಗಳನ್ನು ಯಥಾವತ್ತಾಗಿ ಉಲ್ಲೇಖಿಸಲಾಗಿದೆ. “ಬೆಂಗಳೂರು (ಕೆ.ಆರ್. ಪುರಂ): ಒಂದೆಡೆ ಜ್ಞಾನಾರ್ಜನೆಗಾಗಿ ಹಗಲಿರುಳು ಶ್ರಮಿಸುತ್ತಿರುವ ನೂರಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳು, ಮತ್ತೊಂದೆಡೆ ಅದೇ ಕಟ್ಟಡದಲ್ಲಿ ಹಗಲು-ರಾತ್ರಿ ಎನ್ನದೆ ತೂರಾಡುವ ಮದ್ಯವ್ಯಸನಿಗಳ ಆರ್ಭಟ… ಕಳೆದ ಎರಡು ವರ್ಷಗಳಿಂದ ಈ ವಿದ್ಯಾರ್ಥಿ ನಿಲಯ ಇದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದೆ” ಎಂಬುದಾಗಿ ದಿನಾಂಕ 09.07.2026 ರಂದು ಪ್ರಕಟವಾದ ಸುದ್ದಿಯನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

“ಸದರಿ ವಿಷಯದ ವಾಸ್ತವಾಂಶದ ಬಗ್ಗೆ ಆದ್ಯತೆಯ ಮೇರೆಗೆ ನಿಯಾಮಾನುಸಾರ ಪರಿಶೀಲಿಸಿ, ತಕ್ಷಣವೇ ಅಗತ್ಯ ಕ್ರಮ ಕೈಗೊಂಡು, ಅನುಪಾಲನಾ ವರದಿಯನ್ನು ಅತಿ ಜರೂರಾಗಿ ಈ ಕಚೇರಿ (ವಿಧಾನಸೌಧದ ಕೊಠಡಿ ಸಂಖ್ಯೆ: 241) ಗೆ ಸಲ್ಲಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಮಾನ್ಯ ಮುಖ್ಯಮಂತ್ರಿಯವರಿಂದ ನಿರ್ದೇಶಿತಳಾಗಿದ್ದೇನೆ” ಎಂದು ಡಾ. ಕೆ. ವೈಷ್ಣವಿ ಅವರು ಸ್ಪಷ್ಟವಾಗಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳಿಗೂ ಸೂಚನೆ:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೆ ಮಾತ್ರವಲ್ಲದೆ, ಈ ಪತ್ರದ ಪ್ರತಿಯನ್ನು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ (DC) ಕಳುಹಿಸಲಾಗಿದ್ದು, ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳಲ್ಲಿ ಮೂಡಿದ ಭರವಸೆ:

ಹಾಸ್ಟೆಲ್‌ನಲ್ಲಿದ್ದರೂ ನೆಮ್ಮದಿಯಾಗಿ ಓದಲು ಹಾಗೂ ನಿದ್ದೆ ಮಾಡಲು ಸಾಧ್ಯವಾಗದೆ ಹಗಲಿರುಳು ಕುಡುಕರ ಕಿರುಚಾಟಕ್ಕೆ ಬೇಸತ್ತಿದ್ದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದೀಗ ‘ಸಂಭ್ರಮ ಪ್ರಭ’ದ ವರದಿಯಿಂದಾಗಿ ಮುಖ್ಯಮಂತ್ರಿಗಳ ಕಚೇರಿಯೇ ನೇರವಾಗಿ ಎಚ್ಚೆತ್ತುಕೊಂಡಿರುವುದು ವಿದ್ಯಾರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ. ಬಡ ವಿದ್ಯಾರ್ಥಿಗಳನ್ನು ಈ ಕೂಡಲೇ ಸುರಕ್ಷಿತ ಕಟ್ಟಡಕ್ಕೆ ಸ್ಥಳಾಂತರ ಮಾಡುವವರೆಗೂ ‘ಸಂಭ್ರಮ ಪ್ರಭ’ ಈ ಪ್ರಕರಣದ ಬೆನ್ನುಬಿಡದೆ ಕಣ್ಗಾವಲಿಡಲಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
BCM Hostel KR Puram CM Office Order Karnataka Govt Sambrama Prabha Impact ಅವಲಹಳ್ಳಿ ಕೆ.ಆರ್. ಪುರಂ ನಿರೂಪಮ ಮೌಳಿ ಬಾರ್ ಅಂಡ್ ರೆಸ್ಟೋರೆಂಟ್ ಬಿಸಿಎಂ ಹಾಸ್ಟೆಲ್ ಮುಖ್ಯಮಂತ್ರಿ ಸಚಿವಾಲಯ ವಿದ್ಯಾರ್ಥಿ ನಿಲಯ ಸಂಭ್ರಮ ಪ್ರಭ ಇಂಪ್ಯಾಕ್ಟ್ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
Add as Preferred on Google Follow on Google News
Share. WhatsApp Facebook Twitter Telegram
Previous Articleಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್
Next Article ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.