Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods
international Latest News Nation News

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Sambrama Prabha NewsBy Sambrama Prabha NewsAugust 26, 2026No Comments2 Mins Read
Share Facebook Twitter Pinterest Copy Link Telegram LinkedIn Tumblr Email
nepal-floods-caused-by-earthquake-avalanche
Share
Facebook Twitter LinkedIn Pinterest Email

ಖಾಟ್ಮಂಡು (ಸಂಭ್ರಮಪ್ರಭ ನ್ಯೂಸ್): ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ರಸುವಾ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಿಗ್ಗೆ ದಿಢೀರ್‌ ಸಂಭವಿಸಿದ ಭೀಕರ ಪ್ರವಾಹ ಅಪಾರ ಹಾನಿ ಸೃಷ್ಟಿಸಿದೆ. ನೋಡನೋಡುತ್ತಿದ್ದಂತೆಯೇ ಕಟ್ಟಡಗಳು, ನೂರಾರು ಮನೆಗಳು, ರಸ್ತೆಗಳು ನೀರಿನ ರಭಸಕ್ಕೆ ಕೊಚ್ಚಿಹೋಗಿವೆ. ಈ ದಿಢೀರ್ ಪ್ರವಾಹಕ್ಕೆ ಭೂಕಂಪ ಹಾಗೂ ಹಿಮಪಾತವೇ ಪ್ರಮುಖ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಭಾರತೀಯರು ಸೇರಿದಂತೆ 400ರ ಸಮೀಪ ಯಾತ್ರಾರ್ಥಿಗಳು ನಾಪತ್ತೆಯಾಗಿದ್ದು, ತೀವ್ರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಪ್ರವಾಹಕ್ಕೆ ಅಸಲಿ ಕಾರಣವೇನು? ಹಿಮದ ಕಟ್ಟೆ ಒಡೆದಿದ್ದೇಗೆ?

ನೇಪಾಳದ ವಿದೇಶಾಂಗ ಸಚಿವ ಶಿಶಿರ್ ಖಾನಾಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿರುವ ವರದಿಗಳ ಪ್ರಕಾರ, ಟಿಬೆಟ್ ಭಾಗದಲ್ಲಿ ಸಂಭವಿಸಿದ ಭೂಕಂಪನವು ದೊಡ್ಡ ಮಟ್ಟದ ಹಿಮಪಾತಕ್ಕೆ (Avalanche) ಕಾರಣವಾಯಿತು. ಇದೇ ಭೀಕರ ಪ್ರವಾಹವನ್ನು ಸೃಷ್ಟಿಸಿದೆ. ಅಮೆರಿಕದ ಜಿಯೋಲಾಜಿಕಲ್ ಸರ್ವೆ (USGS) ಮಾಹಿತಿ ಪ್ರಕಾರ, ಟಿಬೆಟ್ ಗಡಿಯ ಗೋಸಾಯ್‌ಕುಂಡದಿಂದ 47 ಕಿ.ಮೀ ಉತ್ತರಕ್ಕೆ ಬೆಳಿಗ್ಗೆ 8:37ರ ಸುಮಾರಿಗೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಕಂಪನದ ಬೆನ್ನಲ್ಲೇ ಉಂಟಾದ ಭಾರೀ ಹಿಮಪಾತವು ‘ಲ್ಹೆಂಡೆ’ (Lhende) ನದಿಯ ಹರಿವನ್ನು ತಡೆಹಿಡಿದಿದೆ. ಇದರಿಂದ ಅಪಾರ ಪ್ರಮಾಣದ ನೀರು ಒಂದೆಡೆ ಶೇಖರಣೆಯಾಗಿ, ಮಂಜುಗಡ್ಡೆಗಳ ಆ ಕಟ್ಟೆ ಏಕಾಏಕಿ ಒಡೆದಿದೆ. ಪರಿಣಾಮ, ಭಾರೀ ಪ್ರಮಾಣದ ನೀರು ದಿಢೀರನೆ ‘ಭೋಟೆಕೋಶಿ’ (Bhotekoshi) ನದಿಗೆ ನುಗ್ಗಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಭೋಟೆಕೋಶಿ ನದಿಯಲ್ಲಿ ಉಂಟಾದ ಈ ದಿಢೀರ್ ಜಲಪ್ರಳಯ ರಸುವಾ, ಧಾದಿಂಗ್ ಹಾಗೂ ಖಾಟ್ಮಂಡು ನೈಋತ್ಯ ಭಾಗದ ನುವಾಕೋಟ್ ಜಿಲ್ಲೆಗಳಲ್ಲಿ ನುಗ್ಗಿ ಹಾಹಾಕಾರ ಸೃಷ್ಟಿಸಿದೆ ಎಂದು ಖಾಟ್ಮಂಡು ವಿವಿಯ ಹವಾಮಾನ ಸಂಶೋಧಕ ಹಾಗೂ ಪ್ರೊಫೆಸರ್ ರಿಜನ್ ಭಕ್ತ ಕಾಯಸ್ಥ ವಿವರಿಸಿದ್ದಾರೆ.

ನಾಪತ್ತೆಯಾದ 400 ಯಾತ್ರಾರ್ಥಿಗಳು!

ಕೈಲಾಸ ಮಾನಸಸರೋವರ ಯಾತ್ರೆಗೆ ತೆರಳಿದ್ದ ನೂರಾರು ಭಕ್ತರು ಈ ಪ್ರವಾಹದ ಭೀಕರತೆಗೆ ಸಿಲುಕಿದ್ದಾರೆ. ಬುಧವಾರ ಬೆಳಿಗ್ಗೆ ರಸುವಾಗಢಿ ಚೆಕ್‌ಪೋಸ್ಟ್ ಮೂಲಕ ಗಡಿ ದಾಟಬೇಕಿದ್ದ 384 ಯಾತ್ರಾರ್ಥಿಗಳು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ನೇಪಾಳ ಪ್ರವಾಸೋದ್ಯಮ ಮಂಡಳಿಯ ಪ್ರಾಥಮಿಕ ಅಂಕಿ-ಅಂಶಗಳು ತಿಳಿಸಿವೆ.

ನಾಪತ್ತೆಯಾಗಿರುವವರ ಪೈಕಿ 105 ಭಾರತೀಯರು, 37 ಅನಿವಾಸಿ ಭಾರತೀಯರು (NRIs) ಹಾಗೂ 93 ನೇಪಾಳಿ ನಾಗರಿಕರು ಸೇರಿದ್ದಾರೆ. ವಿವಿಧ ಟ್ರಾವೆಲ್ ಏಜೆನ್ಸಿಗಳ ಮೂಲಕ ತೆರಳಿದ್ದ ಈ ಯಾತ್ರಾರ್ಥಿಗಳಿಗಾಗಿ ಶೋಧ ಕಾರ್ಯ ತೀವ್ರಗೊಂಡಿದೆ. ಕೆಲವೇ ಕೆಲವು ಮಂದಿ ಮಾತ್ರ ರಕ್ಷಣಾ ಪಡೆಗಳ ಸಂಪರ್ಕಕ್ಕೆ ಸಿಕ್ಕಿದ್ದಾರೆ.

ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ನೇಪಾಳದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ನೇಪಾಳದ ನಾಯಕ ಬಾಲೇನ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಹಾಗೂ ಸಂತ್ರಸ್ತರ ಪರಿಹಾರ ಕಾರ್ಯಗಳಿಗೆ ಭಾರತದಿಂದ ಎಲ್ಲ ರೀತಿಯ ಮಾನವೀಯ ನೆರವು ಹಾಗೂ ಬೆಂಬಲ ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.

ಭಾರತೀಯ ರಾಯಭಾರ ಕಚೇರಿಯಿಂದ ತುರ್ತು ಸಹಾಯವಾಣಿ ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರವಾಹದಲ್ಲಿ ಸಿಲುಕಿರುವ ಭಾರತೀಯರ ನೆರವಿಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಿದೆ. ಸಂತ್ರಸ್ತರು ಅಥವಾ ಅವರ ಕುಟುಂಬಸ್ಥರು ವಾಟ್ಸಾಪ್‌ ಮೂಲಕವೂ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ:

  • +977 985 131 6807

  • +977 970 910 7500

ದಿಢೀರ್ ಅಪ್ಪಳಿಸಿದ ಜಲಪ್ರಳಯದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ದೈತ್ಯ ಅಲೆಗಳು ಅಪ್ಪಳಿಸಿ, ಕ್ಷಣಾರ್ಧದಲ್ಲಿ ಕಟ್ಟಡಗಳು ಹಾಗೂ ವಾಹನಗಳು ಪ್ರವಾಹಕ್ಕೆ ಕೊಚ್ಚಿ ಹೋಗುವ ದೃಶ್ಯಗಳು ಎದೆಗುಂದಿಸುವಂತಿವೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Avalanche Bhotekoshi River Earthquake in Nepal Kailash Mansarovar Yatra Kannada News Missing Indians Nepal Floods PM Modi Sambramaprabha ನೇಪಾಳ ಪ್ರವಾಹ ಭೂಕಂಪ ಮಾನಸಸರೋವರ ಯಾತ್ರೆ
Add as Preferred on Google Follow on Google News Follow on Flipboard
Share. Facebook Twitter Pinterest LinkedIn Tumblr Email Copy Link
Previous Articleನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ
Next Article ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.