Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ
Latest News Politics

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

Sub EditorBy Sub EditorSeptember 19, 20261 Comment2 Mins Read
Share WhatsApp Facebook Twitter Telegram
ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ
Share
WhatsApp Facebook Twitter Telegram

ರಾಮನಗರ (ಸಂಭ್ರಮ ಪ್ರಭ ನ್ಯೂಸ್ ಡೆಸ್ಕ್): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಕೇವಲ ಅಧಿಕಾರಕ್ಕಾಗಿ ಕರಿಬೇವು ಸೊಪ್ಪಿನಂತೆ ಬಳಸಿಕೊಂಡು ಈಗ ಮೂಲೆಗುಂಪು ಮಾಡಿದೆ. ಅವರಿಗೆ ಪಕ್ಷ ‘ರೆಸ್ಟ್ ಗ್ಯಾರಂಟಿ’ ಕೊಟ್ಟಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.

ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಆರ್ಥಿಕ ಸ್ಥಿತಿ ಹಾಗೂ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಕುರಿತು ತೀವ್ರ ಅಸಮಾಧಾನ ಹೊರಹಾಕಿದರು.

ಕರಿಬೇವು ಸೊಪ್ಪಿನಂತೆ ಸಿದ್ದರಾಮಯ್ಯ ಬಳಕೆ!

ಸಿದ್ದರಾಮಯ್ಯ ಅವರ ರಾಜಕೀಯ ಪರಿಸ್ಥಿತಿಯನ್ನು ಪ್ರಸ್ತಾಪಿಸಿದ ಆರ್. ಅಶೋಕ್, “ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರನ್ನು ಒಗ್ಗರಣೆಗೆ ಬಳಸುವ ಕರಿಬೇವು ಸೊಪ್ಪಿನಂತೆ ಉಪಯೋಗಿಸಿ ಪಕ್ಕಕ್ಕಿಟ್ಟಿದೆ. ಅವರ ಬಾಯಿ ಮುಚ್ಚಿಸಿ, ಮೈಸೂರಿನ ಮನೆಯಲ್ಲಿ ವಿಶ್ರಾಂತಿ ಪಡೆಯುವ ಸ್ಥಿತಿಗೆ ತರಲಾಗಿದೆ. ಡಿ.ಕೆ. ಶಿವಕುಮಾರ್ ಅವರ ಮುಖ ನೋಡಿ ಒಕ್ಕಲಿಗರು ಮತ ಹಾಕುವುದಿಲ್ಲ ಎಂದು ಅವರದೇ ಪಕ್ಷದ ನಾಯಕ ಕೆ.ಎನ್. ರಾಜಣ್ಣ ಈಗಾಗಲೇ ಬಹಿರಂಗವಾಗಿ ಹೇಳಿದ್ದಾರೆ” ಎಂದು ಕುಟುಕಿದರು.

ಮಂಗಳೂರಿನಲ್ಲಿ ‘ರೆಸಾರ್ಟ್ ಕ್ಯಾಬಿನೆಟ್’: ಜನರ ಮೂಗಿಗೆ ತುಪ್ಪ!

ಸರ್ಕಾರ ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಾಲದ ಸುಳಿಗೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ಹೊಸ ಯೋಜನೆಗಳ ಘೋಷಣೆಗೆ ಹಣ ಎಲ್ಲಿಂದ ತರುತ್ತಾರೆ? ಮಂಗಳೂರಿನ ರೆಸಾರ್ಟ್‌ನಲ್ಲಿ ಮೀನು, ಏಡಿಕಾಯಿ ಊಟ ಮಾಡಿಕೊಂಡು ಕ್ಯಾಬಿನೆಟ್ ಮೀಟಿಂಗ್ ನಡೆಸಿ, ಕರಾವಳಿ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

3 ವರ್ಷದಲ್ಲಿ 1.5 ಲಕ್ಷ ಕೋಟಿ ಸಾಲ: ಸಿಎಂಗೆ ಸವಾಲು

ರಾಜ್ಯದ ಆರ್ಥಿಕ ಪರಿಸ್ಥಿತಿಯ ಅಂಕಿ-ಅಂಶಗಳನ್ನು ತೆರೆದಿಟ್ಟ ಅಶೋಕ್, ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿದರು:

  • ಸಾಲದ ಹೊರೆ: ಕಾಂಗ್ರೆಸ್ ಸರ್ಕಾರ ಕೇವಲ ಮೂರು ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂ. ಸಾಲ ಮಾಡಲು ಹೊರಟಿದೆ.

  • ಭಾರಿ ಬಡ್ಡಿ: ಪ್ರಸ್ತುತ ವರ್ಷಕ್ಕೆ 35,000 ದಿಂದ 40,000 ಕೋಟಿ ರೂ. ಬಡ್ಡಿ ಕಟ್ಟುವ ದಯನೀಯ ಪರಿಸ್ಥಿತಿ ಬಂದೊದಗಿದೆ.

  • ಸಿಎಂಗೆ ಸವಾಲು: “ಹಿಂದಿನ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಉಳಿತಾಯದ ಬಜೆಟ್ ನೀಡಿತ್ತು. ಆದರೆ ಈಗಿನ ಸರ್ಕಾರ ದಿವಾಳಿ ಬಜೆಟ್ ನೀಡಿದೆ. ತಾಕತ್ತಿದ್ದರೆ ಸಾಲ ಮಾಡದೇ ಬಜೆಟ್ ಮಂಡಿಸಿ ತೋರಿಸಲಿ” ಎಂದು ಮುಖ್ಯಮಂತ್ರಿಗೆ ಸವಾಲು ಹಾಕಿದರು.

ಸಾರಿಗೆ ಸ್ಥಗಿತ, ಅಭಿವೃದ್ಧಿ ಶೂನ್ಯ: ಪ್ರಮುಖ ಆರೋಪಗಳು

ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಸ್ತಬ್ಧವಾಗಿವೆ ಎಂದು ದೂರಿದ ವಿಪಕ್ಷ ನಾಯಕರು ಹಲವು ವೈಫಲ್ಯಗಳನ್ನು ಪಟ್ಟಿ ಮಾಡಿದರು:

  1. ಕೆಎಸ್‌ಆರ್‌ಟಿಸಿ ಬಿಕ್ಕಟ್ಟು: ಕೆಎಸ್‌ಆರ್‌ಟಿಸಿಗೆ ಸರ್ಕಾರದಿಂದ 5,000 ಕೋಟಿ ರೂ. ಬಾಕಿ ಉಳಿಸಿಕೊಳ್ಳಲಾಗಿದೆ. ಸಿಬ್ಬಂದಿಗೆ ವೇತನ ನೀಡಲು ಮತ್ತು ಬಸ್‌ಗಳಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲದಂತಾಗಿದೆ.

  2. ರಸ್ತೆ ಕಾಮಗಾರಿ ಸ್ಥಗಿತ: ಕಲ್ಲು ಕ್ರಷರ್‌ಗಳಿಂದ ವಾರ್ಷಿಕ 1 ಕೋಟಿ ರೂ. ಕಮಿಷನ್ ಬೇಡಿಕೆ ಇಡಲಾಗಿದೆ. ಇದರಿಂದ ಜೆಲ್ಲಿ ಹಾಗೂ ಎಂ-ಸ್ಯಾಂಡ್ ಸಿಗದೆ ರಾಜ್ಯಾದ್ಯಂತ ರಸ್ತೆ ಕಾಮಗಾರಿಗಳು ನಿಂತಿವೆ.

  3. ಜನಸಾಮಾನ್ಯರ ಸಂಕಷ್ಟ: ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆಯಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಳವಾಗಿಲ್ಲ ಮತ್ತು ಬರಪೀಡಿತ ರೈತರಿಗೆ ಸೂಕ್ತ ಪರಿಹಾರ ತಲುಪಿಲ್ಲ.

ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಹಳಿ ತಪ್ಪಿದ್ದು, ಗ್ಯಾರಂಟಿಗಳ ನೆಪದಲ್ಲಿ ಅಭಿವೃದ್ಧಿಗೆ ಎಳ್ಳುನೀರು ಬಿಡಲಾಗಿದೆ ಎಂದು ಆರ್. ಅಶೋಕ್ ವಾಗ್ದಾಳಿ ನಡೆಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Sambrama Prabha ಆರ್ ಅಶೋಕ್ ಕರ್ನಾಟಕ ರಾಜಕೀಯ. ಡಿ.ಕೆ.ಶಿವಕುಮಾರ್ ಮಂಗಳೂರು ಸಂಪುಟ ಸಭೆ ಸಿದ್ದರಾಮಯ್ಯ
Add as Preferred on Google Follow on Google News
Share. WhatsApp Facebook Twitter Telegram
Previous Articleಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?
Next Article ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?
Sub Editor
  • Website

Related Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

September 13, 2026

1 Comment

  1. Pingback: ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನ

Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.