ರಾಜಕೀಯರಾಜ್ಯ

ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ಕುತೂಹಲ ಹೆಚ್ಚಾಗಿದ್ದು, ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರಾ

There is a lot of curiosity about who will be the next chief minister of the state, will Siddaramaiah be the CM again

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ (Karnataka Chief Minister) ಯಾರಾಗ್ತಾರೆ ಎಂಬುದು ಭಾರಿ ಕುತೂಹಲ ಮೂಡಿಸಿದ್ದು, ಇದೀಗ ವಿಚಾರ ಇದೀಗ ರಾಷ್ಟ್ರ ರಾಜಧಾನಿ ದೆಹಲಿಯ (Delhi) ಅಂಗಳಕ್ಕೆ ತಲುಪಿದೆ.
ರಾಜ್ಯದ ಮುಖ್ಯಮಂತ್ರಿ ರೇಸ್‌ನಲ್ಲಿ ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಇದ್ದು, ಇಂದು (ಮೇ 15, ಸೋಮವಾರ) ಸಂಜೆಯೊಳಗೆ ಇಬ್ಬರು ನಾಯಕರನ್ನು ದೆಹಲಿಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ.

ನಿನ್ನೆ ನಡೆದಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ನಿರ್ಧಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡುವ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಸಂಜೆಯೊಳಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ.

ಎಲ್ಲವೂ ಅಂದುಕೊಂಡರೆ ನಡೆದರೆ ಮೇ 18ಕ್ಕೆ ರಾಜ್ಯದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾನಮನಸ್ಕ ಪಕ್ಷಗಳ ನಾಯಕರನ್ನ ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದಾರೆ.

ಕರ್ನಾಟಕ ಸಿಎಂ ಚೆಂಡು ದೆಹಲಿ ಅಂಗಳಕ್ಕೆ ತಲುಪಿರುವ ಸೇರಿದಂತೆ 10 ಪ್ರಮುಖ ಅಂಶಗಳು ಹೀಗಿವೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ 62ನೇ ವರ್ಷದ ಜನ್ಮದಿನ ಹಿನ್ನೆಲೆಯಲ್ಲಿ ನಿನ್ನೆ (ಮೇ 15, ಭಾನುವಾರ) ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಪ್ರಮುಖರು ಡಿಕೆಶಿ ಅವರನ್ನು ಭೇಟಿ ಮಾಡಿ ಕೇಕ್ ಕತ್ತರಿಸಿ ಜನ್ಮದಿನ ಆಚರಿಸಿದ್ದಾರೆ. ಡಿಕೆಶಿ ಶಿವಕುಮಾರ್ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ದೆಹಲಿಯಲ್ಲಿಂದು ಕರ್ನಾಟಕ ಸಿಎಂ ವಿಚಾರವಾಗಿ ಚರ್ಚೆಗೆ ನಡೆಯಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ರಾಜ್ಯದ ಪ್ರಮುಖ ನಾಯಕರು ಭೇಟಿಯಾಗುವ ಸಾಧ್ಯತೆ ಇದೆ.
ಬೆಂಗಳೂರಿನ ಖಾಸಗಿ ಹೆೋಟೆಲ್‌ನಲ್ಲಿ ಭಾನುವಾರ (ಮೇ 15) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸೇರಿದ್ದ ನಾಯಕರು ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ತಮ್ಮ ನಾಯಕರೇ ನಿರ್ಧರಿಸಲಿ ಅಂತ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಪೂರ್ಣ ಅಧಿಕಾರವನ್ನು ನೀಡುವ ನಿರ್ಣಯವನ್ನು ಅಂಗೀಕರಿಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಅತಿ ಶೀಘ್ರದಲ್ಲೇ ಕರ್ನಾಟಕ ಮುಖ್ಯಮಂತ್ರಿಯ ಹೆಸರನ್ನು ಘೋಷಣೆ ಮಾಡಲಾಗುತ್ತದೆ ಎಂದು ಸಿಎಲ್‌ಪಿ ಸಭೆಯ ನಂತರ ಎಐಸಿಸಿ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಸಭೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ 135 ಶಾಸಕರು ಭಾಗವಹಿಸಿದ್ದರು.
ದೆಹಲಿಯಿಂದ ವೀಕ್ಷಕರಾಗಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ, ಪಕ್ಷದ ಹಿರಿಯ ನಾಯಕರಾದ ಜಿತೇಂದ್ರ ಸಿಂಗ್, ದೀಪಕ್ ಬಬಾರಿಯಾ ಭಾಗವಹಿಸಿದ್ದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕೆಸಿ ವೇಣುಗೋಪಾಲ್, ಜೈರಾಮ್ ರಮೇಶ್ ಉಪಸ್ಥಿತರಿದ್ದರು. ವೀಕ್ಷಕರ ತಂಡ ದೆಹಲಿಗೆ ತೆರಳಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಿದೆ ಎಂದು ವರದಿಯಾಗಿದೆ
ಸಿದ್ದರಾಮಯ್ಯ ಅವರಿಗೆ ಸಿಹಿ ಸುದ್ದಿ ಸಿಗುತ್ತಾ ಅಥವಾ ಡಿಕೆ ಶಿವಕುಮಾರ್ ಅವರಿಗೆ ಜನ್ಮದಿನ ವಿಶೇಷ ಗಿಫ್ಟ್ ನೀಡಲಾಗುತ್ತಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸುರ್ಜೇವಾಲ, ಈ ವಿಷಯವನ್ನು ಚರ್ಚಿಸಲು ನಾನು ಪಕ್ಷವಲ್ಲ, ಪ್ರಧಾನ ಕಾರ್ಯದರ್ಶಿ ಅಷ್ಟೆ. ನಾವೆಲ್ಲಾ ಒಟ್ಟಿಗೆ ಕುಳಿತು ಕರ್ನಾಟಕದ ಭವಿಷ್ಯದ ಬಗ್ಗೆ ಪ್ಲಾನ್ ಮಾಡುತ್ತಿದ್ದೇವೆ. ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬವನ್ನು ಒಟ್ಟಿಗೆ ಆಚರಿಸಿದ್ದೇವೆ ಎಂದು ಹೇಳಿದ್ದಾರೆ.
ಇದಕ್ಕೂ ಮುನ್ನ ಅಂದರೆ ಭಾನುವಾರ ಸಂಜೆ ಡಿಕೆ ಶಿವಕುಮಾರ್ ಅವರನ ಿವಾಸದ ಬಳಿ ಜಮಾಯಿಸಿದ್ದ ಅಪಾರ ಸಂಖ್ಯೆಯ ಬೆಂಬಲಿಗರು ನಮಗೆ ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಘೋಷಣೆಗಳನ್ನು ಕೂಗಿದ್ದಾರೆ.
ಸುಶೀಲ್ ಕುಮಾರ್ ಶಿಂಧೆ ಹಾಗೂ ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ವೀಕ್ಷಕರಾಗಿ ಸಭೆಯಲ್ಲಿ ಭಾಗವಹಿಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ದೆಹಲಿ ನಾಯಕರಿಗೆ ವರದಿ ನೀಡಿದ್ದು, ಆ ಬಗ್ಗೆ ಇಂದು ರಾಷ್ಟ್ರ ರಾಜಧಾನಿಯಲ್ಲಿ ಚರ್ಚೆ ಆಗಲಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಐದು ವರ್ಷಗಳ ಅವಧಿಯನ್ನು ಹಂಚುವ ವಿಚಾರ ಸೇರಿದಂತೆ ಹಲವು ಸೂತ್ರಗಳು ಮಂಡನೆಯಾಗಿದ್ದರೂ ಸಭೆಯಲ್ಲಿ ಇಂತಹ ವಿಷಯ ಪ್ರಸ್ತಾಪಿಸಲಾಗಿಲ್ಲ ಎಂದು ಶಾಸಕರೊಬ್ಬರು ಎಚ್‌ಟಿಗೆ ತಿಳಿಸಿದ್ದಾರೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10 ರಂದು ಚುನಾವಣೆ ನಡೆದಿತ್ತು. ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತದ ಭರ್ಜರಿ ಗೆಲುವು ಸಾಧಿಸಿದೆ. ಆಡಳಿತಾರೂಢ ಬಿಜೆಪಿ 66 ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ಗೆ ಕೇವಲ 19 ಸ್ಥಾನಗಳು ಸಿಕ್ಕಿವೆ.

ಇದನ್ನೂ ಓದಿ...

Back to top button
>