ರಾಜಕೀಯರಾಜ್ಯ

ರಾಜ್ಯ ಆರ್ಥಿಕ ದಿವಾಳಿಯಾಗದಂತೆ ನೋಡಿಕೊಂಡು 5 ಗ್ಯಾರಂಟಿಗಳು ಜಾರಿ ಮಾಡ್ತೇವೆ

We have implemented 5 guarantees to ensure that the state does not become financially bankrupt

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ ಅವರು, ಐದು ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು, ತಾತ್ವಿಕವಾಗಿ ಒಪ್ಪಿಗೆ ನೀಡಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಗೃಹ ಜ್ಯೋತಿ ಯೋಜನೆನಯಡಿ 200 ಯುನಿಟ್ ವರೆಗೆ ವಿದ್ಯುತ್ ಉಚಿತವಾಗಿ ನೀಡುತ್ತೇವೆ. ಇದರಿಂದ ತಿಂಗಳಿಗೆ 1,200 ಕೋಟಿ ರೂಪಾಯಿ ಸರ್ಕಾರಕ್ಕೆ ಹೊರೆಯಾಗಬಹುದು ಎಂದು ವಿವವರಿಸಿದ್ದಾರೆ.

ಇನ್ನು ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಒಡತಿ ಅಥವಾ ಯಜಮಾನಿಗೆ 2,000 ರೂಪಾಯಿ ಅವರ ಖಾತೆಗೆ ಹಾಕುತ್ತೇವೆ. ಅನ್ನಭಾಗ್ಯ ಯೋಜನೆಯಲ್ಲಿ ಬಿಪಿಎಲ್ ಕಾರ್ಡ್‌ ಹೊಂದಿರುವ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುತ್ತೇವೆ.

ಯುವನಿಧಿ ಯೋಜನೆಯ ಅಡಿಯಲ್ಲಿ ಈ ವರ್ಷ ಪದವಿ ಶಿಕ್ಷಣ ಮುಗಿಸಿ ಯಾರು ನಿರುದ್ಯೋಗಿಗಳು ಆಗಿರುತ್ತಾರೋ ಅವರಿಗೆ ಪ್ರತಿ ತಿಂಗಳು 3,000 ರೂಪಾಯಿಗಳನ್ನು ನೀಡುತ್ತೇವೆ. ಎರಡು ವರ್ಷದವರೆಗೆ ನೀಡುತ್ತೇವೆ. ಇದರ ನಡುವೆಯೇ ಅವರಿಗೆ ಖಾಸಗಿ ಅಥವಾ ಸರ್ಕಾರಿ ಕೆಲಸ ಸಿಕ್ಕರೆ ಈ ಹಣವನ್ನು ನೀಡುವುದಿಲ್ಲ ಎಂದಿದ್ದಾರೆ.

ಇನ್ನು ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪಾಸ್‌ ನೀಡುವುದಾಗಿಯೂ ಹೇಳಿದ್ದಾರೆ. ಆದರೆ ಈ ಐದು ಯೋಜನೆಗಳನ್ನು ಮುಂದಿನ ಸಚಿವ ಸಂಪುಟದಲ್ಲಿ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಜಾರಿಗೆ ತರುವುದಾಗಿ ಹೇಳಿದ್ದಾರೆ.

ಕರ್ನಾಟಕ 4 ಲಕ್ಷ ಕೋಟಿ ರೂಪಾಯಿಗಳ ತೆರಿಗೆ ಕಟ್ಟುತ್ತಿದ್ದು, ಜಿಎಸ್‌ಟಿ ಮೂಲಕ ಹೆಚ್ಚು ತೆರಿಗೆ ಇಲ್ಲಿಂದ ಹೋಗುತ್ತದೆ. ಆದರೆ ನಮಗೆ ಸಿಗಬೇಕಾದ ತೆರಿಗೆ ಹಣ ಸರಿಯಾಗಿ ಸಿಕ್ಕಿಲ್ಲ. 5,496 ಕೋಟಿ ರೂಪಾಯಿ ಕೇಂದ್ರದಿಂದ ಬಾಕಿ ಬರಬೇಕಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಜಾರಿಗೆ ಹಣವನ್ನು ಎಲ್ಲಿಂದ ತರುತ್ತಾರೆ ಎಂದು ಪ್ರಶ್ನಿಸುತ್ತಾರೆ. ಈ ಐದು ಯೋಜನೆಗಳ ಜಾರಿಗೆ 50,000 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ನಮ್ಮ ರಾಜ್ಯದ ಬಜೆಟ್ 3 ಲಕ್ಷ 10 ಸಾವಿರ ಕೋಟಿ ರೂಪಾಯಿ ಆಗಿದ್ದು, ಕಟ್ಟುನಿಟ್ಟಾಗಿ ತೆರಿಗೆ ವಸೂಲಿ ಮಾಡಿದ್ರೆ ಆದಾಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದ್ದಾರೆ.

ಮನಮೋಹನ್ ಸಿಂಗ್ ಅವರು ಅಧಿಕಾರದ ಅವಧಿಯಲ್ಲಿ ದೇಶದಲ್ಲಿ 53 ಲಕ್ಷ 11 ಸಾವಿರ ಕೋಟಿ ರೂಪಾಯಿ ಸಾಲ ಇತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದಾಗಿನಿಂದ ಈವರೆಗೆ 155 ಲಕ್ಷ ಕೋಟಿ ರೂಪಾಯಿಗಳ ಸಾಲ ಮಾಡಿದ್ದಾರೆ. ದೇಶವನ್ನು ಸಾಲಗಾರರನ್ನಾಗಿ ಮಾಡಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ...

Back to top button
>