• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮಾಲೂರು ಕ್ಷೇತ್ರ: ಮರು ಮತ ಎಣಿಕೆ, ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

Sambrama Prabha News by Sambrama Prabha News
February 5, 2026
in Politics
0
ಮಾಲೂರು ಕ್ಷೇತ್ರ: ಮರು ಮತ ಎಣಿಕೆ, ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

Updated By: Priyalachhi

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ ಕೋಲಾರ ಜಿಲ್ಲೆ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರೇ ಗೆಲುವು ಸಾಧಿಸಿದ್ದಾರೆ.

ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ನಂಜೇಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಬಿಜೆಪಿಯ ಪ್ರತಿಸ್ಪರ್ಧಿ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಅವರಿಗಿಂತ 250 ಹೆಚ್ಚಿನ ಮತಗಳನ್ನು ಪಡೆದಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದ್ದು, ಹೈಕೋರ್ಟ್ ಆದೇಶವನ್ನು ವಜಾಗೊಳಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ನಂಜೇಗೌಡ ಕೇವಲ 248 ಮತಗಳಿಂದ ಗೆಲುವು ಸಾಧಿಸಿದ್ದರು. ಅವರು 50, 955 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಮಂಜುನಾಥ ಗೌಡ 50, 707 ಮತ ಗಳಿಸಿದ್ದರು. ನಂತರ ಮಂಜುನಾಥ ಗೌಡ ನ್ಯಾಯಾಲಯದಲ್ಲಿ ತಕಾರರು ಅರ್ಜಿ ಸಲ್ಲಿಸಿದ್ದರು. ಮತಗಳ ಮರು ಎಣಿಕೆ ಮತ್ತು ಫಲಿತಾಂಶಗಳನ್ನು ಹೊಸದಾಗಿ ಘೋಷಿಸಲು ಹೈಕೋರ್ಟ್ ಆದೇಶಿಸಿತು.

Tags: ಮಾಲೂರು ಕ್ಷೇತ್ರ
Previous Post

ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ

Next Post

ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ: ಪ್ರಧಾನಿ ಮೋದಿ

Next Post
ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ: ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸುತ್ತಾ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ: ಪ್ರಧಾನಿ ಮೋದಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.