ಹಿರಿಯ ನಟ ಶರತ್ ಬಾಬು ಇನ್ನಿಲ್ಲ; ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅಮೃತವರ್ಷಿಣಿ ಸಿನಿಮಾ ನಾಯಕ
Veteran actor Sarath Babu is no more; Amritvarshini is a film hero who suffered from multiple organ failure
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಹುಭಾಷಾ ನಟ ಶರತ್ ಬಾಬು ಇಂದು ನಿಧನರಾಗಿದ್ದಾರೆ. ಶರತ್ ಬಾಬು ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಇಂದು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಶರತ್ ಬಾಬು ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಳೆದ ತಿಂಗಳು ಶರತ್ ಬಾಬು, ಹೈದರಾಬಾದ್ ಆಸ್ಪತ್ರೆಯೊಂಕ್ಕೆ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಬಹಳ ಗಂಭೀರವಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶರತ್ ಬಾಬು ಅವರಿಗೆ ವೆಂಟಿಲೇಟರ್ ನೀಡಿ ಚಿಕಿತ್ಸೆ ನೀಡಲಾಗಿತ್ತು. ಇದಕ್ಕೂ ಮುನ್ನ ಶರತ್ ಬಾಬು ಅವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದ ಕೆಲವು ದಿನಗಳಲ್ಲಿ ಅವರ ಆರೋಗ್ಯ ಪರಿಸ್ಥಿತಿ ಮತ್ತೆ ಕ್ಷೀಣಿಸಿದ್ದರಿಂದ ಹೈದರಾಬಾದ್‌ಗೆ ಕರೆತರಲಾಗಿತ್ತು. ಶರತ್ ಬಾಬು ನಿಧನರಾಗಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಸುದ್ದಿಯಾಗಿತ್ತು. ಆದರೆ ಅವರು ಸತ್ತಿಲ್ಲ, ಆಸ್ಪತ್ರೆಯಲ್ಲಿ ಚಿಕತ್ಸೆ ನೀಡಲಾಗುತ್ತಿದೆ ಎಂದು ಶರತ್ ಬಾಬು ಕುಟುಂಬದವರು ಸ್ಪಷ್ಟಪಡಿಸಿದ್ದರು.
.