BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ಸಿದ್ದರಾಮಯ್ಯ ಇನ್ನೂ ಎರಡು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ

Author Picture
Published On: April 6, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಮುಖ್ಯಮಂತ್ರಿ ಸ್ಥಾನದ ಬದಲಾವಣೆ ಕುರಿತಂತೆ ರಾಜ್ಯ ರಾಜಕೀಯದಲ್ಲಿ ಆಗಾಗ ಕೇಳಿಬರುತ್ತಿರುವ ಊಹಾಪೋಹಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇನ್ನೂ ಎರಡು ವರ್ಷಗಳ ಕಾಲ ತಮ್ಮ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನದ ಕುರಿತಾದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು. “2013ರಲ್ಲಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ತಮ್ಮ ಐದು ವರ್ಷಗಳ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದರು. ಅದೇ ರೀತಿ 2023ರ ಚುನಾವಣೆಯ ನಂತರವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಿಸಿದೆ. ಪ್ರಸ್ತುತ ಸರ್ಕಾರದ ಅಧಿಕಾರದ ಅವಧಿ 2028ರವರೆಗೆ ಇದ್ದು, ಅವರು ಅದನ್ನು ಪೂರ್ಣಗೊಳಿಸಲಿದ್ದಾರೆ. ನೀವೇ ಐದು ವರ್ಷ ಸಿಎಂ ಎಂದು ಹೈಕಮಾಂಡ್‌ ಪದೇ ಪದೇ ಪ್ರತ್ಯೇಕವಾಗಿ ಸ್ಪಷ್ಟೀಕರಣ ನೀಡುವ ಅಗತ್ಯವಿಲ್ಲ,” ಎಂದು ಪ್ರತಿಪಾದಿಸಿದರು.

ನಾಯಕತ್ವ ಬದಲಾವಣೆ ಇಲ್ಲ
ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳನ್ನು ತಳ್ಳಿಹಾಕಿದ ಸಚಿವರು, “ಹೈಕಮಾಂಡ್ ಈ ವಿಚಾರದಲ್ಲಿ ಯಾವುದೇ ಗೊಂದಲವನ್ನು ಸೃಷ್ಟಿಸಿಲ್ಲ. ಸಿದ್ದರಾಮಯ್ಯ ಅವರ ಅಧಿಕಾರದ ಅವಧಿ ಇಂತಿಷ್ಟೇ ಎಂದು ಹೈಕಮಾಂಡ್ ಎಂದಾದರೂ ಹೇಳಿದೆಯೇ? ಅಥವಾ ಬದಲಾವಣೆ ಬಗ್ಗೆ ಮಾತನಾಡಿದೆಯೇ? ಇದರರ್ಥ, ನಾಯಕತ್ವ ಬದಲಾವಣೆಯಂತಹ ಯಾವುದೇ ಬೆಳವಣಿಗೆಗಳು ಸದ್ಯಕ್ಕಿಲ್ಲ ಎಂದೇ ಭಾವಿಸಬೇಕು,” ಎಂದು ಹೇಳಿದರು.

“ಮುಖ್ಯಮಂತ್ರಿ ಸ್ಥಾನವನ್ನು ಬದಲಾವಣೆ ಮಾಡಬೇಕಾಗಿರುವುದು ಕೇವಲ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಚಾರ. ಆ ಬಗ್ಗೆ ಹೈಕಮಾಂಡ್ ಎಂದಾದರೂ ಮಾತನಾಡಿದ್ದರೆ ಮಾತ್ರ ಅದಕ್ಕೊಂದು ಅರ್ಥ ಬರುತ್ತಿತ್ತು. ಅಲ್ಲಿಯವರೆಗೆ ಯಾರೇ ಹೇಳಿಕೆಗಳನ್ನು ನೀಡಿದರೂ, ಅದು ಕೇವಲ ಅವರ ವೈಯಕ್ತಿಕ ಅಭಿಪ್ರಾಯವಷ್ಟೇ ಹೊರತು ಪಕ್ಷದ ನಿಲುವಲ್ಲ,” ಎಂದು ಪರಮೇಶ್ವರ ಖಡಕ್ ಆಗಿ ನುಡಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp