• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ವಿಧಾನಸಭಾ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ; ಸಚಿವ ಚಲುವರಾಯಸ್ವಾಮಿ

Sambrama Prabha News by Sambrama Prabha News
April 9, 2026
in Latest News, Politics
0
ವಿಧಾನಸಭಾ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ; ಸಚಿವ ಚಲುವರಾಯಸ್ವಾಮಿ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಮಂಡ್ಯ: ರಾಜ್ಯದಲ್ಲಿ ಮಹಿಳೆಯರ ಸಬಲೀಕರಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ಯಾರಂಟಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಈಗಾಗಲೇ 1.3 ಲಕ್ಷ ಕೋಟಿ ರೂ.ಕ್ಕಿಂತ ಹೆಚ್ಚು ಹಣವನ್ನು ವಿತರಿಸಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಬುಧವಾರ ಹೇಳಿದರು.

ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬುಧವಾರ ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು,

ಸವಾಲುಗಳು ಜೀವನದ ಒಂದು ಭಾಗವಾಗಿದ್ದರೂ, ಸರ್ಕಾರವು ಒದಗಿಸುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಮುಂದೆ ಸಾಗಬೇಕು ಎಂದು ಹೇಳಿದರು.

ಇದೇ ವೇಳೆ ಸಮಾಜದಲ್ಲಿ ಮಹಿಳೆಯರ ಪಾತ್ರದ ಮಹತ್ವವನ್ನು ಒತ್ತಿಹೇಳಿದ ಅವರು, ಸ್ವಾತಂತ್ರ್ಯಕ್ಕೂ ಮುನ್ನವೇ ಮಹಿಳೆಯರಿಗೆ ಪ್ರತಿನಿಧಿತ್ವ ಮತ್ತು ಮನ್ನಣೆ ದೊರಕಿತ್ತು.. “ಹೆಣ್ಣು ಮಗು ಶಿಕ್ಷಣ ಪಡೆದರೆ ಒಂದು ಶಾಲೆ ತೆರೆದಂತೆಯೇ” ಎಂಬ ಸಂದೇಶದಡಿ ಮಹಿಳಾ ಶಿಕ್ಷಣಕ್ಕೆ ಸರ್ಕಾರ ವಿಶೇಷ ಒತ್ತು ನೀಡುತ್ತಿದೆ. ಶಿಕ್ಷಕರ ನೇಮಕಾತಿಯಲ್ಲಿ ಶೇ.50ರಷ್ಟು ಮೀಸಲಾತಿ ನೀಡಲಾಗಿದೆ. ಜೊತೆಗೆ ಜಿಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಇನ್ನೂ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆಯಲ್ಲಿಯೂ ಮಹಿಳೆಯರಿಗೆ ಮೀಸಲಾತಿ ನೀಡುವ ದಿನ ದೂರವಿಲ್ಲ. ಎಂದೂ ಇದೇ ವೇಳೆ ಹೇಳಿದರು.

ಬಳಿಕ ಮಹಿಳೆಯರ ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದ ಅಗತ್ಯವನ್ನು ಒತ್ತಿ ಹೇಳಿದ ಅವರು, ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಇದಲ್ಲದೆ, ಎನ್‌ಆರ್‌ಎಲ್‌ಎಂ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಘೋಷಿಸಿದರು.

ಈ ಸಂದರ್ಭದಲ್ಲಿ ಶಾಸಕ ಪಿ. ರವಿಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮಹಿಳೆಯರಿಗೆ ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.

Tags: ಸಚಿವ ಚಲುವರಾಯಸ್ವಾಮಿ
Previous Post

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Next Post

ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ, ಅವತ್ತು ಬಕೆಟ್ ಇಟ್ಟಿದ್ದರೇ ತುಂಬೋಗೋದು

Next Post
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ, ಅವತ್ತು ಬಕೆಟ್ ಇಟ್ಟಿದ್ದರೇ ತುಂಬೋಗೋದು

ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ, ಅವತ್ತು ಬಕೆಟ್ ಇಟ್ಟಿದ್ದರೇ ತುಂಬೋಗೋದು

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.