ರಾಜಕೀಯರಾಜ್ಯ

5 ಗ್ಯಾರಂಟಿ ಯೋಜನೆ ಜಾರಿ ಖಚಿತ: ಡಿ.ಕೆ.ಶಿವಕುಮಾರ್

Implementation of 5 guarantee scheme is certain: D.K.Sivakumar

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿನಿತ್ಯ ಚರ್ಚೆಯಾಗುತ್ತಿದ್ದು, ಈ ಸಂಬಂಧ ಗಾಬರಿಯಾಗುವುದು ಬೇಡ. ಊಹಾಪೋಹಗಳಿಗೆ ಜನತೆ ಕಿವಿಗೊಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದರು.

ಯಾರು ಗಾಬರಿ ಆಗೋದು ಬೇಡ, ಊಹಾಪೋಹಗಳಿಗೆ ಕಿವಿಗೊಡೋದು ಬೇಡ. ನಾವು ಹೇಳಿದ್ದನ್ನೇ ಮಾಡುತ್ತೇವೆಂದು ಭರವಸೆ ನೀಡಿದರು.

ಯಾರು ಬೇಕಾದರೂ ಚರ್ಚೆ ಮಾಡಲಿ. ಬೈಯೋರು ಬೈಯಲಿ. ಎಲ್ಲರಿಗೂ ಮಾತಾಡೋಕೆ ವಾಕ್ ಸ್ವಾತಂತ್ರ್ಯ ಇದೆ ಎಂದು ಹೇಳಿದರು.

ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯನ್ನು ಕಾಂಗ್ರೆಸ್‍ನವರು 5 ಗ್ಯಾರಂಟಿಗಳನ್ನು ಘೋಷಿಸಿದ್ದರು. ಆದರೆ, ಚುನಾವಣೆ ಮುಗಿದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇಷ್ಟು ದಿನವಾದರೂ ಯಾವುದೇ ಗ್ಯಾಂಟಿಗಳನ್ನು ಜಾರಿಗೆ ತಂದಿಲ್ಲ.

ಈ ಮಧ್ಯೆ ಹಳ್ಳಿಗಳಲ್ಲಿನ ಜನತೆ ಕರೆಂಟ್ ಬಿಲ್ ಕಟ್ಟಲ್ಲವುದಿಲ್ಲವೆಂದು ಹಠಕ್ಕೆ ಬಿದ್ದಿದ್ದಾರೆ. ಅಲ್ಲದೆ ಬಿಲ್ ಕೇಳಲು ಹೋದ ಸಿಬ್ಬಂದಿ ಮೇಲೆ ಹಲ್ಲೆಯನ್ನೂ ಮಾಡುತ್ತಿದ್ದಾರೆ.

ಇತ್ತ ಮಹಿಳೆಯರು ಬಸ್ ಪ್ರಯಾಣ ಉಚಿತವೆಂದು ಕಾಂಗ್ರೆಸ್‍ನವರು ಹೇಳಿದ್ದಾರೆ. ಹೀಗಾಗಿ ಟಿಕೆಟ್ ತೆಗೆದುಕೊಳ್ಳಲ್ಲ ಎಂದು ನಿರ್ವಾಕರ ಮುಂದೆ ಜಗಳವಾಡುತ್ತಿರುವುದು ಕಂಡು ಬರುತ್ತಿದೆ.

ಇದನ್ನೂ ಓದಿ...

Back to top button
>