Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಬಂಧನ
Politics Latest News

ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಬಂಧನ

Sambrama Prabha NewsBy Sambrama Prabha NewsNovember 2, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಪಾಟ್ನಾ (ಬಿಹಾರ): ದುಲಾರ್​ ಚಂದ್​ ಯಾದವ್​ ಹತ್ಯೆಗೆ ಸಂಬಂಧಿಸಿದಂತೆ, ಬಿಹಾರ ಪೊಲೀಸರು ಶನಿವಾರ ತಡರಾತ್ರಿ ಮೋಕಾಮಾದ ರಾಜಕಾರಣಿ ಹಾಗೂ ಜನತಾ ದಳ ಯುನೈಟೆಡ್ (ಜೆಡಿಯು) ಅಭ್ಯರ್ಥಿ ಹಾಗೂ ಮಾಜಿ ಶಾಸಕ ಅನಂತ್ ಸಿಂಗ್ ಮತ್ತು ಅವರ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ.

ಅವರು ಬೆಡ್ನಾ ಗ್ರಾಮದಲ್ಲಿರುವುದನ್ನು ಪತ್ತೆ ಹಚ್ಚಿದ ಪೊಲೀಸರ ತಂಡ, ಗ್ರಾಮವನ್ನು ಸುತ್ತುವರಿದು, ಶನಿವಾರ ತಡರಾತ್ರಿ ಸುಮಾರು 1 ಗಂಟೆ ರಾತ್ರಿಗೆ ಅನಂತ್​ ಸಿಂಗ್​ ಹಾಗೂ ಇಬ್ಬರು ಸಹಚರರನ್ನು ಬಂಧಿಸಿದೆ. ಬಂಧನದ ಬಳಿಕ ಮೋಕಾಮದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡದಂತೆ ತಡೆಯಲು ಬಂಧಿಸಿದ ಕೂಡಲೇ ಅವರನ್ನು ಅಲ್ಲಿಂದ ಬೇರೆಡೆಗೆ ಕರೆದೊಯ್ಯಲಾಯಿತು. ಅನಂತ್​ ಅವರ ಪತ್ನಿ ಮೋಕಾಮಾ ಶಾಸಕಿಯಾಗಿದ್ದಾರೆ. ಅನಂತ್​ ಅವರ ಇಬ್ಬರು ಸೋದರಳಿಯಂದಿರು ಹಾಗೂ ಇಬ್ಬರು ಸಹಚರರು ಯಾದವ್​ ಹತ್ಯೆಯಲ್ಲಿ ಆರೋಪಿಗಳಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಪಾಟ್ನಾದ ಹಿರಿಯ ಪೊಲೀಸ್​ ವರಿಷ್ಠಾಧಿಕಾರಿ (ಎಸ್​ಎಸ್​ಪಿ) ಕಾರ್ತಿಕೇಯ ಆರ್​. ಶರ್ಮಾ, “ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಅನಂತ್​ ಅವರನ್ನು ಬೆಡ್ನಾ ಗ್ರಾಮದಲ್ಲಿ ಬಂಧಿಸಲಾಗಿದೆ. ಯಾದವ್ ಹತ್ಯೆಯ ಸಮಯದಲ್ಲಿ ಅನಂತ್​ ಅವರ ಇಬ್ಬರು ಸಹಚರರಾದ ನಡ್ಮಾ ಗ್ರಾಮದ ಮಣಿಕಾಂತ್ ಠಾಕೂರ್ ಮತ್ತು ಅನಂತ್ ಅವರ ಸ್ಥಳೀಯ ಗ್ರಾಮವಾದ ಲಡ್ಮಾದ ರಂಜಿತ್ ರಾಮ್ ಘಟನಾ ಸ್ಥಳದಲ್ಲಿದ್ದರು” ಎಂದು ತಿಳಿಸಿದರು.

75 ವರ್ಷದ ಯಾದವ್​ ಟಾರ್ಟರ್​ ಗ್ರಾಮದ ಬಳಿ ವಾಹನದೊಳಗೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದ್ದರು. ಯಾದವ್​ ಅವರು ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಾರ್ಟಿ (ಜೆಎಸ್‌ಪಿ) ಅಭ್ಯರ್ಥಿ ಪ್ರಿಯದರ್ಶಿ ಪಿಯೂಷ್ ಅವರನ್ನು ಬೆಂಬಲಿಸುತ್ತಿದ್ದರು. ಅ. 30 ರಂದು ಪಿಯೂಷ್​ ಪರ ಪ್ರಚಾರ ನಡೆಸುತ್ತಿದ್ದ ವೇಳೆ, ಬೆಂಗಾವಲು ಪಡೆಯಲ್ಲಿ ಚಲಿಸುತ್ತಿದ್ದಾಗ, ಅನಂತ್​ ಅವರ ಬೆಂಗಾವಲು ಪಡೆ ವಿರುದ್ಧ ದಿಕ್ಕಿನಿಂದ ಬಂದಿತ್ತು. ಈ ವೇಳೆ ಎರಡೂ ಕಡೆಯವರ ನಡುವೆ ಘರ್ಷಣೆ ಮತ್ತು ಕಲ್ಲು ತೂರಾಟ ನಡೆದು, ಕೆಲವರು ಗಾಯಗೊಂಡಿದ್ದರು. ನಂತರ ಸ್ಥಳೀಯ ಪೊಲೀಸರು ಸ್ಥಳಕ್ಕೆ ಬಂದಾಗ, ವಾಹನದ ಹಿಂದಿನ ಸೀಟಿನಲ್ಲಿ ಯಾದವ್​ ಅವರ ಮೃತದೇಹ ಪತ್ತೆಯಾಗಿದೆ.

ಯಾದವ್ ಅವರ ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ, ಹೃದಯ ಮತ್ತು ಶ್ವಾಸಕೋಶಗಳಿಗೆ ಗಟ್ಟಿಯಾದ ಮತ್ತು ಮೊಂಡಾದ ವಸ್ತುವಿನಿಂದಾದ ಗಾಯದಿಂದಾಗಿ ಅವರು ಹೃದಯ ಮತ್ತು ಉಸಿರಾಟದ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಆದ್ದರಿಂದ, ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪ್ರಾಥಮಿಕ ತನಿಖೆ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಾಗಿದೆ ಎಂದು ಎಸ್‌ಎಸ್‌ಪಿ ಮಾಹಿತಿ ನೀಡಿದರು.

ಎರಡೂ ಕಡೆಯವರು ಪರಸ್ಪರರ ವಿರುದ್ಧ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿವೆ. ಪೊಲೀಸರು ತನಿಖೆ ಆರಂಭಿಸಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿ, ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದ್ದಾರೆ ಮತ್ತು ಸಾಕ್ಷಿಗಳಿಂದ ಹೇಳಿಕೆಗಳನ್ನು ಪಡೆದಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
arrested ಅನಂತ್ ಸಿಂಗ್ ಜೆಡಿಯು
Add as Preferred on Google Follow on Google News
Share. WhatsApp Facebook Twitter Telegram
Previous Articleಇಂದು IND vs SA ವಿಶ್ವಕಪ್​ ಫೈನಲ್​ ಕದನ
Next Article ಇನ್ನು ಸಿಎಂ, ಸಚಿವರ ಭೇಟಿಯಾಗುವುದು ಸುಲಭ…! 
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.