• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಅಪರಾಧಿ, ಕೋರ್ಟ್ ತೀರ್ಪು!

Sambrama Prabha News by Sambrama Prabha News
April 15, 2026
in Home, Politics
0
BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಅಪರಾಧಿ, ಕೋರ್ಟ್ ತೀರ್ಪು!

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 19 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಮಾಣ ಕುರಿತಂತೆ ವಾದ ಮಂಡನೆ ನಡೆಯಲಿದೆ.

2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.

ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು.

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ವಿನಯ್ ಕುಲಕರ್ಣಿ ಎ15 ಆರೋಪಿಯಾಗಿದ್ದು ಒಳಸಂಚು ಹಿನ್ನೆಲೆಯಲ್ಲಿ ಅಪರಾಧಿ ಎಂದು ಘೋಷಿಸಲಾಗಿದೆ.

Tags: ಯೋಗೇಶ್ ಗೌಡವಿನಯ್ ಕುಲಕರ್ಣಿ
Previous Post

Blood sugar ನಿಯಂತ್ರಣದಲ್ಲಿಲ್ಲವೇ? ನಿರ್ಲಕ್ಷಿಸಿದರೆ ಕಣ್ಣಿನ ದೃಷ್ಟಿ ಕಳೆದುಕೊಳ್ಳುತ್ತೀರಾ ಹುಷಾರ್..!

Next Post

ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ

Next Post
ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ

ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ಪ್ರಮಾಣದ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.