ರಾಜಕೀಯರಾಜ್ಯ

‘ರಾಜ್ಯ ಸರ್ಕಾರ’ದಿಂದ ‘ಗೃಹ ಜ್ಯೋತಿ ಯೋಜನೆ’ ಜಾರಿಗೊಳಿಸಿ ಅಧಿಕೃತ ಆದೇಶ

Official order to implement 'Griha Jyoti Yojana' by 'State Govt.'

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಇಂದು ಐದು ಗ್ಯಾರಂಟಿಗಳಲ್ಲಿ ಇದುವರೆಗೆ ನಾಲ್ಕು ಗ್ಯಾರಂಟಿಗಳಿಗೆ ಅಧಿಕೃತ ಆದೇಶ ಹೊರಡಿಸಿದೆ. ಇಂದು ಶಕ್ತಿ ಯೋಜನೆಯ ಬೆನ್ನಲ್ಲೇ, ಗೃಹ ಜ್ಯೋತಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ.

ಈ ಸಂಬಂಧ ಇಂದು ಇಂಧನ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ದಿನಾಂಕ 02-06-2023ರಂದು ನಡೆದ ಸಂಪುಟ ಸಭೆಯಲ್ಲಿ ಗೃಹ ಜ್ಯೋತಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯ ಮಂಡನೆಯಾಗಿರುತ್ತದೆ. ಗೃಹ ಜ್ಯೋತಿ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಯ್ ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ( ಆರ್ಥಿಕ ವರ್ಷ2022-23ರ ಬಳಕೆಯ ಆಧಾರದನ್ವಯ) ಯೂನಿಟ್ ಗಳ ಮೇಲೆ ಶೇಕಡ 10ರಷ್ಟು ಹೆಚ್ಚಿನ ವಿದ್ಯುತ್ ಬಳಕೆ ಮಿತಿಯನ್ನು ಅನುಮಿತಿಸಿ, ಅದಕ್ಕನುಗುಣವಾಗಿ ವಿದ್ಯುತ್ ಬಿಲ್ಲಿನ ಮೊತ್ತವನ್ನು ಉಚಿತವಾಗಿ ಒದಗಿಸಲು ಹಾಗೂ 200 ಯೂನಿಟ್ ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸಂಪುಟ ಅನುಮೋದಿಸಿದೆ ಎಂದಿದ್ದಾರೆ. ಅದನ್ನು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.

ಈ ಯೋಜನೆಯನ್ನು ಜುಲೈ 2023ರ ತಿಂಗಳ ವಿದ್ಯುತ್ ಬಳಕೆಗೆ ಆಗಸ್ಟ್ 2023ರ ತಿಂಗಳಿನಿಂದ ನೀಡುವ ಬಿಲ್ಲಿಗೆ ಅನ್ವಯವಾಗುವಂತೆ ಈ ಕೆಳಕಂಡ ಷರತ್ತುಗಳನ್ನು ವಿದಿಸಿ, ಜಾರಿಗೆ ತರಲು ಆದೇಶಿಸಿದ್ದಾರೆ.

ಹೀಗಿವೆ ಗೃಹ ಜ್ಯೋತಿ ಯೋಜನೆಯ ಷರತ್ತುಗಳು

ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ನ್ವಯವಾಗುತ್ತದೆ. ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ
ಪ್ರತಿ ತಿಂಗಳ ಮೀಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್ ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ ನೆಟ್ ಬಿಲ್ ನೀಡುವುದು. ಗ್ರಾಹಕರು ನೆಟ್ ಬಿಲ್ ಅನ್ನು ಪಾವತಿಸುವುದು.
ಅರ್ಹ ಯೂನಿಟ್ ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ ಅನ್ನು ನೀಡಲಾಗುವುದು.
ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಚಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
ಪ್ರತಿ ಫಲಾನುಭವಿಯು ತನ್ನ ಕಸ್ಟಮರ್ ಐಡಿ, ಅಕೌಂಟ್ ಐಡಿಯನ್ನು ಆಧಾರ್ ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.
ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
ದಿನಾಂಕ 30-06-2023ರ ಅಂತ್ಯಕ್ಕೆ ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು. ಬಾಕಿ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು. ಮಾರಕ ಓದುವುದು ಕಡ್ಡಾಯವಾಗಿರುತ್ತದೆ.
ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿ ಸೌಲಭ್ಯಕ್ಕೆ ಅರ್ಹರಾಗುವರು.

ಇದನ್ನೂ ಓದಿ...

Back to top button
>