ರಾಜ್ಯ

11 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

Transfer of 11 IAS officers

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಆಡಳಿತಕ್ಕೆ ಚುರುಕು ಮುಟ್ಟಿಸಲು ರಾಜ್ಯ ಸರ್ಕಾರ ವಾರದ ಹಿಂದಷ್ಟೇ ಪೊಲೀಸ್‌ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿತ್ತು. ಇದೀಗ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಇಂದು ಆದೇಶ ಹೊರಡಿಸಿದೆ.

ಬೆಂಗಳೂರು : ರಾಜ್ಯ ಸರ್ಕಾರ ಹನ್ನೊಂದು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿದ್ದು ಅಧಿಕಾರಿಗಳ ಹೆಸರು ಹಾಗು ಅವರ ಹೊಸ ಹೊಣೆಗಾರಿಕೆಗಳು ಹೀಗಿವೆ..

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್ ಅವರಿಗೆ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಹೊಣೆಗಾರಿಕೆ.

ಉಮಾಶಂಕರ್ ಎಸ್.ಆರ್. – ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಬೆಂಗಳೂರು.
ಮಂಜುನಾಥ್ ಪ್ರಸಾದ್ ಎನ್. – ಪ್ರದಾನ ಕಾರ್ಯದರ್ಶಿ, ಸಹಕಾರ ಇಲಾಖೆ ಬೆಂಗಳೂರು.
ವಿ.ಅನ್ಬುಕುಮಾರ್ – ಕಾರ್ಯದರ್ಶಿ, ಕೃಷಿ ಇಲಾಖೆ ಬೆಂಗಳೂರು.
ಮೋಹನ್ ರಾಜ್ ಕೆ.ಪಿ. – ಕಾರ್ಯದರ್ಶಿ, ತೋಟಗಾರಿಕೆ ಮತ್ತು ರೇಷ್ಮೆ ಕೃಷಿ ಇಲಾಖೆ ಬೆಂಗಳೂರು.
ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ – ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆ ಬೆಂಗಳೂರು.
ಗಿರೀಶ್ ಆರ್ – ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಬೆಂಗಳೂರು.
ಕರೀಗೌಡ – ನಿರ್ದೇಶಕರು, ಅಟಲ್ ಜನ ಸ್ನೇಹಿ ಕೇಂದ್ರ (ಎಜೆಎಸ್ ಕೆ) ಬೆಂಗಳೂರು.
ಪಾಟೀಲ್ ಯಲಗೌಡ ಶಿವನಗೌಡ – ಆಯುಕ್ತರು, ಕೃಷಿ ಇಲಾಖೆ ಬೆಂಗಳೂರು.
ಜಗದೀಶ್ ಜಿ. – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಬೆಂಗಳೂರು.
ಡಾ. ಮಹೇಶ್ ಎಂ. – ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಕಾರ್ಯ ನಿರ್ವಾಹಕ ಸದಸ್ಯ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಬೆಂಗಳೂರು.

ಇತ್ತೀಚೆಗೆ ಪೊಲೀಸ್‌ ಇಲಾಖೆಗೆ ಸರ್ಜರಿ ಮಾಡಿದ್ದ ಹೊಸ ಸರ್ಕಾರ, ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಆಗಿ ಸಿ.ಹೆಚ್. ಪ್ರತಾಪ್​ ರೆಡ್ಡಿ ಅವರನ್ನು ನೇಮಕ ಮಾಡಿತ್ತು. ಎಂ.ಎ.ಸಲೀಂ ಅವರನ್ನು ಸಿಐಡಿ ಡಿಜಿಪಿ ಆಗಿ ವರ್ಗಾವಣೆ ಮಾಡಿದರೆ, ಬಿ.ದಯಾನಂದ್ ಅವರನ್ನು ಬೆಂಗಳೂರು ಪೊಲೀಸ್​ ಆಯುಕ್ತರನ್ನಾಗಿ ಸರ್ಕಾರ ನೇಮಿಸಿತ್ತು. ಕೆ.ವಿ.ಶರತ್​ ಚಂದ್ರ ಅವರನ್ನು ಗುಪ್ತಚರ ಎಡಿಜಿಪಿ ಆಗಿ ವರ್ಗಾಯಿಲಾಗಿತ್ತು.

ಇದಕ್ಕೂ ಮುನ್ನ ಸಿ.ಹೆಚ್.ಪ್ರತಾಪ್​ ರೆಡ್ಡಿ ಅವರು ಬೆಂಗಳೂರು ಪೊಲೀಸ್​ ಆಯುಕ್ತರಾಗಿಯೂ, ಎಂ.ಎ.ಸಲೀಂ ಬೆಂಗಳೂರು ಸಂಚಾರ ವಿಭಾಗದ ವಿಶೇಷ ಆಯುಕ್ತರಾಗಿಯೂ, ಬಿ.ದಯಾನಂದ್‌ ಅವರು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅದೇ ರೀತಿ, ಕೆ.ವಿ.ಶರತ್‌ಚಂದ್ರ ಸಿಐಡಿ ಎಡಿಜಿಪಿಯಾಗಿದ್ದರು. ಭದ್ರತಾ ವಿಭಾಗದ ಡಿಜಿಪಿ ಹುದ್ದೆಗೆ ಸಿಐಡಿ ಡಿಜಿಪಿ ಕೇಡರ್​ ಹುದ್ದೆಯ ಸ್ಥಾನಮಾನ ಮತ್ತು ಜವಾಬ್ದಾರಿಯನ್ನು ವಹಿಸಲಾಗಿದೆ. ಎಡಿಜಿಪಿ ಆಗಿದ್ದ ಸಲೀಂ ಅವರಿಗೆ ಡಿಜಿಪಿ ಹುದ್ದೆಗೆ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.

ಅದಕ್ಕೂ ಮುನ್ನ ಹಿರಿಯ ಐಪಿಎಸ್ ಅಧಿಕಾರಿ ಡಾ.ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆಯಾಗಿ ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ​ ಪ್ರವೀಣ್ ಸೂದ್ ಅವರು ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ನೇಮಕಗೊಂಡ ಕಾರಣ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ಇದನ್ನೂ ಓದಿ...

Back to top button
>