ರಾಜಕೀಯರಾಜ್ಯ

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪ್ರಸ್ತಾವನೆ ಬಂದಿಲ್ಲ: ಸಚಿವ ಹೆಚ್​.ಕೆ.ಪಾಟೀಲ್

Prohibition of Cow Slaughter Act has not been proposed: Minister HK Patil

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟ ಸಚಿವರು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾನೂನು ಮತ್ತು ಇತರೆ ಕಾಯ್ದೆಗಳನ್ನು ಪರಿಶೀಲಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಸರ್ಕಾರದ ಈ ನಿಲುವನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಸಹ ಹಮ್ಮಿಕೊಂಡಿದೆ.

ಈ ಮಧ್ಯೆ ಸಚಿವರಾದ ಹೆಚ್​.ಕೆ. ಪಾಟೀಲ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್​ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲವೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​.ಕೆ. ಪಾಟೀಲ್ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಬಗ್ಗೆ ಈಗಾಗಲೇ ಹೇಳಿದ್ದನ್ನೇ ಪುನರುಚ್ಚರಿಸುವೆ. ಇಲಾಖೆಗೆ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವ ಬಗ್ಗೆ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಮಾತಿನ ಜಟಾಪಟಿ ನಡೆಯುತ್ತಿದೆ. ಈ ಮಧ್ಯೆ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟ ಸುಳಿವು ನೀಡಿ, ಸಚಿವ ಸಂಪುಟದ ಸಹೋದ್ಯೋಗಿಗಳ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇತ್ತ ಸಚಿವ ಹೆಚ್​.ಕೆ. ಪಾಟೀಲ್ ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಕಾನೂನು ಇಲಾಖೆ ಮುಂದೆ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ, ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸುತ್ತಿರುವುದರ ವಿರುದ್ಧ ಬಿಜೆಪಿ ಮುಖಂಡರು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಸರ್ಕಾರವಾಗಿದ್ದು, ಹಿಟ್ಲರ್ ಸರ್ಕಾರ ಆಗಿದೆ ಎಂದು ಬಿಜೆಪಿ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಬಜೆಟ್ ಅಧಿವೇಶನ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿಧಾನಮಂಡಲ ಬಜೆಟ್ ಅಧಿವೇಶನದ ಬಗ್ಗೆ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಗಮನಿಸಿದ್ದೇನೆ. ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಬಹುಶಃ ಈ ಕುರಿತು ಚರ್ಚೆಯಾಗಿ ತೀರ್ಮಾನ ಕೈಗೊಳ್ಳಬಹುದು ಎಂದರು.

ಸದ್ಯ ಕಾಂಗ್ರೆಸ್​ ಸರ್ಕಾರದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟ ಸಚಿವರು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾನೂನು ಮತ್ತು ಇತರೆ ಕಾಯ್ದೆಗಳನ್ನು ಪರಿಶೀಲಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಸರ್ಕಾರದ ಈ ನಿಲುವನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಸಹ ಹಮ್ಮಿಕೊಂಡಿದೆ. ಈ ಮಧ್ಯೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರು, ‘ನಾನು ಮಹಿಳೆಯಾಗಿ ಹೇಳುತ್ತೇನೆ. ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವ ಪ್ರಾಣಿಯ ಹತ್ಯೆಯನ್ನು ನಾನು ಸಹಿಸಲ್ಲ ಎಂದು ಸಹ ಹೇಳಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್​: ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಟ್ವೀಟ್​ಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಅವರು, ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ‌. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದು ದಿನ ಕಳೆದಿಲ್ಲ, ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿದೆ. ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ಈ ತಂತ್ರ 1975ರ ಎಮರ್ಜನ್ಸಿಯನ್ನು ನೆನಪಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಬೊಮ್ಮಾಯಿಯವರೇ, ಯಾವ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದೀರಿ? ತನ್ನ ರಾಜಕೀಯ ವಿರೋಧಿಗಳನ್ನ ಮಟ್ಟ ಹಾಕಲು ತನಿಖಾ ಏಜೇನ್ಸಿಗಳನ್ನು, ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ? ಎಂದು ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ...

Back to top button
>