Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » SSLC ಫಲಿತಂಶ ಬಂದಿದೆ ಟ್ವೀಟ್ ಮಾಡಿ; ಎಲ್ಲಿದ್ದೀರಿ ಮಹಾಜ್ಞಾನಿ ಪ್ರಿಯಾಂಕ್‌ ಖರ್ಗೆ ಅವರೇ?
Politics

SSLC ಫಲಿತಂಶ ಬಂದಿದೆ ಟ್ವೀಟ್ ಮಾಡಿ; ಎಲ್ಲಿದ್ದೀರಿ ಮಹಾಜ್ಞಾನಿ ಪ್ರಿಯಾಂಕ್‌ ಖರ್ಗೆ ಅವರೇ?

Sambrama Prabha NewsBy Sambrama Prabha NewsApril 23, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ ಕಲಬುರಗಿ ಕೊನೆಯ ಸ್ಥಾನ ಪಡೆದಿದೆ.

ಈ ಬಾರಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

ಕಲಬುರಗಿ ಜಿಲ್ಲೆಗೆ ಕೊನೆಯ ಸ್ಥಾನ ಬಂದಿರುವುದಕ್ಕೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿವೆ.

ಸ್ವಂತ ಜಿಲ್ಲೆಯ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಖರ್ಗೆ ಕುಟುಂಬ ವಿಫಲವಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್ ವಾಗ್ದಾಳಿ ನಡೆಸಿವೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, “S.S.L.C ಫಲಿತಾಂಶ ಬಂದಿದೆ ಟ್ವೀಟ್ ಮಾಡಿ, ಎಲ್ಲಿದ್ದೀರಿ ಮಹಾಜ್ಞಾನಿ ಪ್ರಿಯಾಂಕ್‌ ಖರ್ಗೆ ಅವರೇ?” ಎಂದು ಪ್ರಶ್ನಿಸಿದೆ.

​​SSLC ಫಲಿತಾಂಶದಲ್ಲಿ ಕಲಬುರಗಿ 35 ಅಂದರೆ ಕೊನೆಯ ಸ್ಥಾನ ಪಡೆದಿದ್ದು, ಹಿಂದಿನ ಸಾಲಿನಲ್ಲಿಯೂ 34ನೇ ಸ್ಥಾನದಲ್ಲಿತ್ತು. 4-5 ದಶಕಗಳಿಂದ ಕಲಬುರಗಿ ಜಿಲ್ಲೆ ಆಳುತ್ತಿರುವ ಖರ್ಗೆ ಕುಟುಂಬ ಸ್ವಂತ ಜಿಲ್ಲೆಯ ಮಕ್ಕಳ ಭವಿಷ್ಯ ರೂಪಿಸುವಲ್ಲಿ ವಿಫಲವಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಜೆಡಿಎಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಕಲಬುರಗಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣ, ಶಿಕ್ಷಕರ ನೇಮಕ ಸೇರಿದಂತೆ ಶಿಕ್ಷಣದ ಪ್ರಗತಿಗೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದೀರಿ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ JDS ಆಕ್ರೋಶ ವ್ಯಕ್ತಪಡಿಸಿದೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಅವರೇ, ನಿಮ್ಮ ಭಾಷಣದ ‘ಸಾಧನೆ’ಗೆ ಈ ಫಲಿತಾಂಶವನ್ನು ಸೇರಿಸಿಕೊಳ್ಳಿ. ಕಲಬುರಗಿಯನ್ನು ಅಕ್ಷರಶಃ ಶೈಕ್ಷಣಿಕ ಅಂಧಕಾರಕ್ಕೆ ದೂಡಿದ್ದೀರಿ. ಮಾತಿನಲ್ಲಿ ತೋರಿಸುವ ಶೌರ್ಯ ಶಿಕ್ಷಣದ ಸುಧಾರಣೆಯಲ್ಲಿ ತೋರಿಸಿ ಎಂದಿರುವ ಜೆಡಿಎಸ್​​ ಪ್ರಿಯಾಂಕ್ ಖರ್ಗೆಯನ್ನು ನಾಟಿಕೋಳಿ ಮಿನಿಸ್ಟರ್‌ ಎಂದು ವ್ಯಂಗ್ಯವಾಡಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
SSLC ಫಲಿತಂಶ
Add as Preferred on Google Follow on Google News
Share. WhatsApp Facebook Twitter Telegram
Previous Articleಮಂಗಳವಾರದ ಪಂಚಾಂಗ, ದಿನ ಭವಿಷ್ಯ
Next Article ಪ್ರಧಾನಿ ಮೋದಿ ‘ಭಯೋತ್ಪಾದಕ’ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.