ರಾಜ್ಯ

ಸೆ. 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕ ಕಾರ್ಯಾಚರಣೆ

Sec. All international flights from 1 operate through Terminal 2

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಸೆಪ್ಟೆಂಬರ್​ 1 ರಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳು ಟರ್ಮಿನಲ್ 2 ಮೂಲಕವೇ ಕಾರ್ಯಾಚರಣೆ ನಡೆಸಲಿವೆ.

ಸೆಪ್ಟೆಂಬರ್ 1 ಎಲ್ಲಾ ಅಂತಾರಾಷ್ಟ್ರೀಯ ಕಾರ್ಯಾಚರಣೆಗಳು ಟರ್ಮಿನಲ್ 2ಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ಬೆಂಗಳೂರು ಇಂಟರ್ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್‌ನ ಮೂಲಗಳು ತಿಳಿಸಿವೆ.

ಭಾರತೀಯ ಮೂಲದ ವಿಸ್ತಾರಾ ಮತ್ತು ಇಂಡಿಗೋ ವಿಮಾನಯಾನ ಸಂಸ್ಥೆ ಸೇರಿದಂತೆ 28 ವಿಮಾನಯಾನ ಸಂಸ್ಥೆಗಳು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ(KIA) ಕಾರ್ಯನಿರ್ವಹಿಸುತ್ತಿವೆ. ನಗರದಿಂದ 25 ಅಂತಾರಾಷ್ಟ್ರೀಯ ತಾಣಗಳಿಗೆ ವಿಮಾನ ಸಂಪರ್ಕ ಕಲ್ಪಿಸಲಾಗಿದೆ.

ಇಷ್ಟುದಿನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೇಶಿಯ ವಿಮಾನ ಸೇವೆ ಮತ್ತು ಅಂತಾರಾಷ್ಟ್ರೀಯ ವಿಮಾನ ಸೇವೆ ಎರಡನ್ನೂ ಟರ್ಮಿನಲ್ 1 ಮೂಲಕ ಕಾರ್ಯಾಚರಣೆ ನಡೆಸಿತ್ತು. ಇದೀಗ ಟರ್ಮಿನಲ್ 2 ಅನ್ನು ಅಂತರಾಷ್ಟ್ರೀಯ ಕಾರ್ಯಾಚರಣೆಗೆ ಮೀಸಲಿಡಲಾಗಿದೆ.

ಸುಮಾರು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ಟರ್ಮಿನಲ್ 2 ನಿರ್ಮಿಸಲಾಗಿದ್ದು, ಕಳೆದ ವರ್ಷ ನವೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಉದ್ಘಾಟಿಸಿದ್ದರು.

ಇದನ್ನೂ ಓದಿ...

Back to top button
>