BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು

Author Picture
Published On: May 18, 2026

—Advertisement—

ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಕರ್ನಾಟಕ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

  • ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದ ನಾಯಕತ್ವ ಗೊಂದಲ
  • ಸಂಪುಟ ಪುನಾರಚನೆ ಚರ್ಚೆಗೆ ಕೇರಳಂನಲ್ಲೇ ಸಿದ್ದರಾಮಯ್ಯ ಮನವಿ..?
  • ತುಮಕೂರು ಸಾಧನಾ ಸಮಾವೇಶದ ಸುತ್ತ ರಾಜಕೀಯ
  • ಜಿ. ಪರಮೇಶ್ವರ್ ಸಿಎಂ ಮಾಡಲು ವೇದಿಕೆ ಸಿದ್ಧತೆ?

ಕೇರಳಂನಲ್ಲಿ ಕರ್ನಾಟಕ ಸಂಪುಟ ಪುನಾರಚನೆ ಚರ್ಚೆ

ಕೇರಳಂನಲ್ಲಿ ಇಡೀ ಹೈಕಮಾಂಡ್ ನಾಯಕರೇ ಬೀಡು ಬಿಟ್ಟಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತು ಅಧಿಕೃತ ಚರ್ಚೆ ನಡೆಸಲು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಬಹಳ ಸಮಯ ಹೈಕಮಾಂಡ್ ನಾಯಕರ ಜೊತೆ ಕಾಲ ಕಳೆದಿರುವುದರಿಂದ ಕೇರಳದಲ್ಲೇ ಕರ್ನಾಟಕದ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿರಬಹುದು ಮಾತುಗಳು ಕೇಳಿಬರುತ್ತಿವೆ.

ಈ ಮಧ್ಯೆ ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನಾ ಸಮಾವೇಶದ ನೆಪದಲ್ಲಿ ಕೈ ನಾಯಕರ ನಡುವೆ ಹೊಸ ಸಮರ ಶುರುವಾಗಿದೆ. ತುಮಕೂರಿನಲ್ಲಿ ನಡೆಯಲಿರುವ ಸಮಾವೇಶದ ಕುರಿತು ಪಕ್ಷದ ಒಳಗೇ ಪರ,ವಿರೋಧದ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಹೌದು..ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಳೆ (ಮೇ 19) ತುಮಕೂರಿನಲ್ಲಿ ಬೃಹತ್ ಸಾಧನಾ ಸಮಾವೇಶ ಆಯೋಜಿಸಲಾಗಿದೆ. ಆದರೆ, ತುಮಕೂರಿನಲ್ಲೇ ಈ ಸಮಾವೇಶ ನಡೆಯುತ್ತಿರುವುದರಿಂದ ಜಿ. ಪರಮೇಶ್ವರ್ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡಲು ವೇದಿಕೆ ಸಜ್ಜುಗೊಳಿಸಲಾಗುತ್ತಿದೆ ಎಂಬ ವ್ಯಾಖ್ಯಾನಗಳು ಶುರುವಾಗಿವೆ. ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಸಿದ್ದರಾಮಯ್ಯ ಬದಲಾವಣೆಯಾದರೆ ಪರಮೇಶ್ವರ್ ಸಿಎಂ ಆಗಲಿ, ನಾವು ಅದನ್ನೇ ಬಯಸುತ್ತೇವೆ ಎಂದು ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಎಂ ಸ್ಥಾನ ಯಾರ ಮನೆ ಆಸ್ತಿಯೂ ಅಲ್ಲ ಎಂದ ರಾಜಣ್ಣ

2013ರಲ್ಲಿ ಜಿ. ಪರಮೇಶ್ವರ್ ಗೆದ್ದಿದ್ದರೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬಿಟ್ಟುಕೊಡುತ್ತಿದ್ದರಾ ಎಂಬ ಪ್ರಶ್ನೆಗೆ ಕೆ.ಎನ್. ರಾಜಣ್ಣ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಬಿಟ್ಟುಕೊಡದೇ ಇರಲು ಸಿದ್ದರಾಮಯ್ಯ ಅವರ ಮನೆ ಆಸ್ತಿ ಅಲ್ಲ, ಅದು ಜನರು ಕೊಡುವ ಭಿಕ್ಷೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನ ಯಾವುದೇ ರಾಜಕಾರಣಿಗಳ ಸ್ವಂತ ಆಸ್ತಿಯಲ್ಲ ಎನ್ನುವ ಮೂಲಕ ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಗಂಭೀರವಾಗಿರುವುದನ್ನು ಒಪ್ಪಿಕೊಂಡಿದ್ದಾರೆ.

ಶಿವಕುಮಾರ್‌ಗೆ ಟಾಂಗ್ ಕೊಟ್ಟ ರಾಜಣ್ಣ

ಇನ್ನು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಈ ಸ್ಪೋಟಕ ಹೇಳಿಕೆಗಳ ಹಿಂದೆ ದೊಡ್ಡ ರಾಜಕೀಯ ತಂತ್ರಗಾರಿಕೆ ಅಡಗಿದೆ. “ಇದ್ದರೆ ಸಿದ್ದರಾಮಯ್ಯ ಇರಲಿ, ಬದಲಾದರೆ ಪರಮೇಶ್ವರ್ ಆಗಲಿ” ಎಂದು ಹೇಳುವ ಮೂಲಕ, ಕೆ.ಎನ್. ರಾಜಣ್ಣ ಅವರು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ತಮಗೆ ಇಷ್ಟವಿಲ್ಲ ಎಂಬುದನ್ನು ಮತ್ತೊಮ್ಮೆ ಬಹಿರಂಗವಾಗಿ ಗಟ್ಟಿಯಾಗಿ ಹೇಳಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷರ ಬಣದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಒಂದು ಕಡೆ ಕೇರಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಜೊತೆ ನಾಯಕತ್ವದ ಕುರಿತು ಪ್ರತ್ಯೇಕ ಚರ್ಚೆ ನಡೆಸುತ್ತಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಪರಮೇಶ್ವರ್ ಪರ ಬ್ಯಾಟಿಂಗ್ ಶುರುವಾಗಿದೆ. ಹೈಕಮಾಂಡ್ ನಾಯಕರ ನಡೆ ಹಾಗೂ ತುಮಕೂರಿನ ಸಾಧನಾ ಸಮಾವೇಶದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಯಾವ ರೀತಿಯ ರಾಜಕೀಯ ಬದಲಾವಣೆಗಳಾಗಲಿವೆ ಎಂಬುದನ್ನು ಕಾದುನೋಡಬೇಕಿದೆ.

ಒಟ್ಟಿನಲ್ಲಿ ಸಂಪುಟ ಪುನಾರಚನೆಗೆ ಏನೋ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಬಹುದು. ಆದ್ರೆ, ಕರ್ನಾಟಕ ಕಾಂಗ್ರೆಸ್​​ನಲ್ಲಿನ ನಾಯಕತ್ವ ಗೊಂದಲ ಇನ್ನೂ ಮುಂದುರೆದಿದ್ದು, ಇದಕ್ಕೆ ಹೈಕಮಾಂಡ್ ಯಾವಾಗ ತೆರೆ ಎಳೆಯಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp