• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ

Sambrama Prabha News by Sambrama Prabha News
May 18, 2026
in Latest News, Nation News, Politics
0
ನರೇಂದ್ರ ಮೋದಿಗೆ ನಾರ್ವೆಯ ಅತ್ಯುನ್ನತ ಪ್ರಶಸ್ತಿ ಪ್ರದಾನ

ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ನವದೆಹಲಿ, ಮೇ 18: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾರ್ವೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ ಗೌರವವನ್ನು ನೀಡಿ ಗೌರವಿಸಲಾಗಿದೆ. ಇದು ಪ್ರಧಾನಿ ಮೋದಿಯವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಡೆದ 32ನೇ ಜಾಗತಿಕ ಗೌರವವಾಗಿದೆ.

ಗ್ರಾಂಡ್ ಕ್ರಾಸ್ ಆಫ್ ದಿ ರಾಯಲ್ ನಾರ್ವೇಜಿಯನ್ ಆರ್ಡರ್’ ನಾರ್ವೆ ದೇಶವು ವಿದೇಶಿ ರಾಷ್ಟ್ರಗಳ ಮುಖ್ಯಸ್ಥರಿಗೆ ಮತ್ತು ಜಾಗತಿಕ ನಾಯಕರಿಗೆ ನೀಡುವ ಅತ್ಯಂತ ಪ್ರತಿಷ್ಠಿತ ಮತ್ತು ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಭಾರತ ಮತ್ತು ನಾರ್ವೆ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಬಲಪಡಿಸಲು, ಹಸಿರು ಇಂಧನ ಕಡಲ ಆರ್ಥಿಕತೆ ಮತ್ತು ಜಾಗತಿಕ ಶಾಂತಿಗಾಗಿ ಪ್ರಧಾನಿ ಮೋದಿ ನೀಡಿದ ಕೊಡುಗೆಯನ್ನು ಶ್ಲಾಘಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ವಿಶ್ವದ ವಿವಿಧ ದೇಶಗಳು ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳು ಪ್ರಧಾನಿ ಮೋದಿಯವರಿಗೆ ನೀಡಿದ ಒಟ್ಟಾರೆ ಜಾಗತಿಕ ಪ್ರಶಸ್ತಿಗಳ ಸಂಖ್ಯೆ ಈಗ 32ಕ್ಕೆ ತಲುಪಿದೆ. ಇವುಗಳಲ್ಲಿ ಹಲವು ಪ್ರಶಸ್ತಿಗಳು ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ಪ್ರಪಂಚದ ವಿವಿಧ ಶಕ್ತಿಶಾಲಿ ದೇಶಗಳ ಅತ್ಯುನ್ನತ ನಾಗರಿಕ ಗೌರವಗಳಾಗಿವೆ.

ಇದು ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಮತ್ತು ಪ್ರಧಾನಿ ಮೋದಿಯವರ ನಾಯಕತ್ವಕ್ಕೆ ಸಿಕ್ಕ ದೊಡ್ಡ ಮನ್ನಣೆ ಇದಾಗಿದೆ. ನಾರ್ವೆ ಸೇರಿದಂತೆ ಉತ್ತರದ ದೇಶಗಳೊಂದಿಗೆ ಭಾರತದ ವ್ಯಾಪಾರ, ಹೂಡಿಕೆ ಮತ್ತು ತಂತ್ರಜ್ಞಾನ ವಿನಿಮಯಕ್ಕೆ ಇದು ಮತ್ತಷ್ಟು ಉತ್ತೇಜನ ನೀಡುತ್ತದೆ. ಇದಕ್ಕೂ ಮುನ್ನ ಭೂತಾನ್, ಗ್ರೀಸ್, ಪಪುವಾ ನ್ಯೂಗಿನಿಯಾ ಮತ್ತು ಫಿಜಿ ದೇಶಗಳು ಕೂಡ ತಮ್ಮ ಅತ್ಯುನ್ನತ ಪ್ರಶಸ್ತಿಗಳನ್ನು ಪ್ರಧಾನಿ ಮೋದಿಯವರಿಗೆ ನೀಡಿ ಗೌರವಿಸಿದ್ದವು.

ಪ್ರಧಾನಿ ಮೋದಿಗೆ ನೀಡಲಾಗಿರುವ ಪ್ರಮುಖ ಪ್ರಶಸ್ತಿಗಳು:

ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ (ರಷ್ಯಾ) – ರಷ್ಯಾದ ಅತ್ಯುನ್ನತ ಗೌರವ.

ಆರ್ಡರ್ ಆಫ್ ದಿ ನೈಲ್ (ಈಜಿಪ್ಟ್) – ಈಜಿಪ್ಟ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ.

ಗ್ರಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ (ಫ್ರಾನ್ಸ್) – ಫ್ರಾನ್ಸ್‌ನ ಅತ್ಯುನ್ನತ ಗೌರವ.

ಲೀಜನ್ ಆಫ್ ಮೆರಿಟ್ (ಅಮೆರಿಕ) – ಅಮೆರಿಕ ಸಶಸ್ತ್ರ ಪಡೆಗಳ ಪ್ರಮುಖ ಗೌರವ.

ಕಿಂಗ್ ಅಬ್ದುಲಜೀಸ್ ಸ್ಯಾಶ್ (ಸೌದಿ ಅರೇಬಿಯಾ) – ಸೌದಿ ಅರೇಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ.

ಆರ್ಡರ್ ಆಫ್ ಜಾಯೆದ್ (ಯುಎಇ) – ಯುನೈಟೆಡ್ ಅರಬ್ ಎಮಿರೇಟ್ಸ್‌ನ ಅತ್ಯುನ್ನತ ನಾಗರಿಕ ಗೌರವ.

Tags: ನರೇಂದ್ರ ಮೋದಿ
Previous Post

ಬೆಂಗಳೂರಿನ ವಿವಿಧೆಡೆ ಗಾಳಿ ಮಳೆ: ವಾಹನ ಸವಾರರ ಪರದಾಟ

Next Post

ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ

Next Post
ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ

ಶಿಕ್ಷಣ ಇಲಾಖೆಯಲ್ಲಿ ಸರ್ಜರಿ: 5 ವರ್ಷ ಮೇಲ್ಪಟ್ಟ ನೌಕರರಿಗೆ ಕಡ್ಡಾಯ ವರ್ಗಾವಣೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.