ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ಬೀದರ್: ಬೀದರ್–ಬೆಂಗಳೂರು ನಡುವೆ ಸ್ಟಾರ್ ಏರ್ ಸಂಸ್ಥೆಯು ಜೂನ್ 1ರಿಂದ ವಿಮಾನ ಸೇವೆ ಆರಂಭಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ವಿಮಾನ ವೇಳಾಪಟ್ಟಿ ಪ್ರಕಾರ, ಬೆಂಗಳೂರಿನಿಂದ ಬೆಳಿಗ್ಗೆ 6.30ಕ್ಕೆ ಹೊರಡುವ ವಿಮಾನ 7.45ಕ್ಕೆ ಬೀದರ್ ತಲುಪಲಿದೆ. ಅದೇ ರೀತಿ ಬೀದರ್‌ನಿಂದ ಬೆಳಿಗ್ಗೆ 8.15ಕ್ಕೆ ಹೊರಡುವ ವಿಮಾನ 9.30ಕ್ಕೆ ಬೆಂಗಳೂರು ತಲುಪಲಿದೆ.
ಈ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳು, ಕೆಕೆಆರ್‌ಡಿಬಿ, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.



