BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ಆತುರದ ನಿರ್ಧಾರ ಕೈಗೊಳ್ಳದೆ, ಕಾದು ನೋಡುವ ತಂತ್ರ ಅಳವಡಿಸಿಕೊಂಡ ‘ಕೈ’ ಕಮಾಂಡ್

Author Picture
Published On: November 4, 2025

—Advertisement—

Updated By: Priyalachhi

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯಗಳು ಸಂಪುಟ ಪುನಾರಚನೆ ಮತ್ತು ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಆತುರದ ನಿರ್ಧಾರವನ್ನು ತೆಗೆದುಕೊಳ್ಳದೆ ಕಾದು ನೋಡುವ ತಂತ್ರ ಅವಳಡಿಸಿಕೊಂಡಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಬಿಹಾರ ವಿಧಾನಸಭಾ ಚುನಾವಣೆ ಹಾಗೂ ಸ್ಥಳೀಯ ಚುನಾವಣೆಗಳು ಹತ್ತಿರ ಬರುತ್ತಿದ್ದು, ಈ ನಡುವೆ ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಕೈ ಹಾಕಿ ಹೊಸ ಬಿಕ್ಕಟ್ಟನ್ನು ಸೃಷ್ಟಿಸುವುದನ್ನು ಕಾಂಗ್ರೆಸ್ ಹೈಕಮಾಂಡ್ ಬಯಸುತ್ತಿಲ್ಲ. ಹೀಗಾಗಿ, ಯಾವುದೇ ಬದಲಾವಣೆಗಳನ್ನು ಮಾಡುವ ಮನಸ್ಥಿತಿಯಲ್ಲಿ ಇಲ್ಲ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಕರ್ನಾಟಕ ರಾಜಕೀಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಮಂಡಿಸುತ್ತೇನೆಂಬ ಎಂಬ ಬಲವಾದ ಸಂದೇಶವನ್ನು ಡಿಕೆ.ಶಿವಕುಮಾರ್ ಪರೋಕ್ಷವಾಗಿ ಹೈಕಮಾಂಡ್’ಗೆ ರವಾನಿಸಿದ್ದಾರೆ.

ಬಿಹಾರ ಚುನಾವಣಾ ಪ್ರಚಾರದಲ್ಲಿ ಕೈಜೋಡಿಸುವ ಮೊದಲು ಭಾನುವಾರ ಸಂಜೆ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಿಹಾರದ ಜನರನ್ನು ಡಿಕೆ.ಶಿವಕುಮಾರ್ ಅವರು ಭೇಟಿ ಮಾಡಿ, ಮಾತುಕತೆ ನಡೆಸಿದರು.

ಬಿಹಾರದಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ, ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲು ಮತ್ತು ಊಹಾಪೋಹಗಳಿಗೆ ಅಂತ್ಯ ಹಾಡಲು ಅದು ಸಹಾಯ ಮಾಡುತ್ತದೆ ಎಂದು ಕಾಂಗ್ರೆಸ್ ಶಾಸಕರೊಬ್ಬರು ತಿಳಿಸಿದ್ದಾರೆ.

ಆದರೆ ಫಲಿತಾಂಶಗಳು ವಿರುದ್ಧವಾಗಿ ಬಂದಿದ್ದೇ ಆದರೆ, ರಾಜ್ಯ ರಾಜಕೀಯದಲ್ಲಿ ಬದಲಾವಣೆಗಳು ವಿಳಂಬವಾಗಬಹುದು. ಸರ್ಕಾರ ಮೂರು ವರ್ಷಗಳನ್ನು ಪೂರೈಸುವ ಮೇ-ಜೂನ್ 2026 ರವರೆಗೆ ವಿಳಂಬವಾಗಬಹುದು ಎಂದು ಹೇಳಿದ್ದಾರೆ.

ಈ ವೇಳೆ ಹೈಕಮಾಂಡ್ ಕರ್ನಾಟಕ ಸರ್ಕಾರದ ಸ್ಥಿರತೆಯ ಮೇಲೆ ಯಾವುದೇ ಪರಿಣಾಮ ಬೀರದ ರೀತಿಯಲ್ಲಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಬದಲಾವಣೆಗಳ ಪರಿಣಾಮಗಳ ಕುರಿತು ಹೈಕಮಾಂಡ್ ಈಗಾಗಲೇ ಕಾಂಗ್ರೆಸ್ ಶಾಸಕರಿಂದ ಪ್ರತಿಕ್ರಿಯೆ ಪಡೆಯಲು ಪ್ರಾರಂಭಿಸಿದೆ. ದೀರ್ಘಾವಧಿಯಲ್ಲಿ ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮತ್ತೊಬ್ಬ ಶಾಸಕರು ತಿಳಿಸಿದ್ದಾರೆ.

ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನಿಲ್ ಕನುಗೋಳ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರಿಗೆ ಕಾಂಗ್ರೆಸ್ ಶಾಸಕರ ಮನಸ್ಥಿತಿಯ ಕುರಿತು ವರದಿಯನ್ನು ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲವೊಂದು ತಿಳಿಸಿದೆ

 

 

 

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp