ರಾಜಕೀಯರಾಜ್ಯ

ಗೃಹ ಜ್ಯೋತಿ: 55000 ನೋಂದಣಿ

Griha Jyoti: 55000 registration

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ರಾಜ್ಯದ ಗೃಹ ಬಳಕೆ ಗ್ರಾಹಕರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡಲು ರಾಜ್ಯ ಸರಕಾರ ಜಾರಿಗೆ ತಂದಿರುವ “ಗೃಹ ಜ್ಯೋತಿ’ ಯೋಜನೆಯ ನೋಂದಣಿಯು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆರಂಭವಾಗಿದ್ದು, ರವಿವಾರ ಸಂಜೆ 6 ಗಂಟೆವರೆಗೆ ರಾಜ್ಯದಲ್ಲಿ ಸುಮಾರು 55,000 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.

ನೋಂದಣಿ ಪ್ರಕ್ರಿಯೆ ರಾಜ್ಯದ ಎಲ್ಲ ಕರ್ನಾಟಕ ಒನ್‌, ಗ್ರಾಮ ಒನ್‌ ಹಾಗೂ ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆರಂಭಗೊಂಡಿತು. ನೋಂದಣಿಯನ್ನು ಸೇವಾ ಸಿಂಧು ಪೋರ್ಟಲ್‌
https://sevasindhugs.karnataka.gov.in ಮೂಲಕ ಮಾಡಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗ್ರಾಹಕರು ಯೋಜನೆ ನೋಂದಣಿಗೆ ಯಾವುದೇ ದಾಖಲೆ ಸಲ್ಲಿಸ ಬೇಕಾಗಿಲ್ಲ ಎಂದು ಇಂಧನ ಇಲಾಖೆ ಮತ್ತೂಮ್ಮೆ ಸ್ಪಷ್ಟಪಡಿಸಿದೆ. ಯೋಜನೆ ಕುರಿತು ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್‌ ಕಚೇರಿಯನ್ನು ಅಥವಾ ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಬಹುದು.

ಇದನ್ನೂ ಓದಿ...

Back to top button
>