ರಾಜ್ಯ

ಮೋಡ ಬಿತ್ತನೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡಿಲ್ಲ : ಸಚಿವ ಕೃಷ್ಣಬೈರೇಗೌಡ ಸ್ಪಷ್ಟನೆ

The state government has not thought about cloud seeding: Minister Krishnabyre Gowda clarified

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು : ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ.
ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ. ತಜ್ಞರ ವರದಿ ಪ್ರಕಾರ ಶೇ. 96 ರಿಂದ ಶೇ. 104 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸ್ವಲ್ಪ ಮಳೆ ಸಮಸ್ಯೆಯಾಗಬಹುದು. ಆದರೆ ಜುಲೈನಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ ನಿಂದ ಕಾವೇರಿ-2 ನೋಂದಣಿ ಪ್ರಕ್ರಿಯೆ ಅಳವಡಿಸಲಾಗಿದೆ. 251 ನೋಂದಣಿ ಕಚೇರಿಗಳಲ್ಲಿ ಇಂದು ಸಂಜೆಯೊಳಗೆ ಕಾವೇರಿ-2 ತಂತ್ರಾಂಶ ಜಾರಿಯಾಗಲಿದೆ. ಎಲ್ಲಾ ದಾಖಲೆಗಳನ್ನು ಕಾವೇರಿ-2 ತಂತ್ರಾಂಶದಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ ಕೂಡ ಅನ್ ಲೈನ್ ನಲ್ಲಿ ಮಾಡಬಹುದು. ನೋಂದಣಿ ಶುಲ್ಕವನ್ನು ಆನ್ ಲೈನ್ ನಲ್ಲೇ ಸಲ್ಲಿಕೆ ಮಾಡಬಹುದು. ಇದರಿಂದ ಜಮೀನು ಅಕ್ರಮವನ್ನು ತಡೆಯಬಹುದು. ಯಾರದ್ದೋ ಜಮೀನು ಯಾರಿಗೋ ನೋಂದಣಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ...

Back to top button
>