Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ ನಿಧನ
Latest News Politics

ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ ನಿಧನ

Sambrama Prabha NewsBy Sambrama Prabha NewsNovember 4, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬಾಗಲಕೋಟೆ/ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ (79) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.‌

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹೆಚ್.ವೈ. ಮೇಟಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಮೇಟಿ ಅವರನ್ನು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇದೀಗ ಮೇಟಿ ಕೊನೆಯುಸಿರೆಳೆದಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಎಕ್ಸ್ ಪೋಸ್ಟ್ ಮೂಲಕ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ. ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

ಗುಳೇದಗುಡ್ಡ ಕ್ಷೇತ್ರದಿಂದ ಎರಡು ಬಾರಿ, ಬಾಗಲಕೋಟೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಹೆಚ್.ವೈ. ಮೇಟಿ ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು‌. ಹೆಚ್.ವೈ. ಮೇಟಿ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹುಲ್ಲಪ್ಪ ಯಮನಪ್ಪ ಮೇಟಿ ಬಾಗಲಕೋಟೆ ಕಾಂಗ್ರೆಸ್ ಹಾಲಿ ಶಾಸಕರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ತಿಮ್ಮಾಪುರದಲ್ಲಿ 9-10-1946 ರಲ್ಲಿ ಜನಿಸಿದ್ದರು.‌

ಹೆಚ್.ವೈ. ಮೇಟಿ ನಡೆದು ಬಂದ ಹಾದಿ: ಹೆಚ್. ವೈ. ಮೇಟಿ ಗುಳೇದಗುಡ್ಡದಿಂದ ಜೆಡಿಎಸ್ ಪಕ್ಷದಿಂದ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಳಿಕ 1994 ರಲ್ಲಿ ಮತ್ತೊಮ್ಮೆ ಗುಳೇದಗುಡ್ಡದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಪಡೆದಿದ್ದರು. 1994ರಲ್ಲಿ ಹೆಚ್.ಡಿ. ದೇವೇಗೌಡ ಸಂಪುಟದಲ್ಲಿ ಅರಣ್ಯ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಮೇಟಿ ಅವರು ಜೆಡಿಎಸ್ ನಿಂದ ಬಾಗಲಕೋಟೆ ಸಂಸದರಾಗಿ ಚುನಾಯಿತರಾಗಿದ್ದರು. 1998 ರಲ್ಲಿ ಸಂಸದ ಸ್ಥಾನಕ್ಕೆ ಸೋಲು ಕಂಡಿದ್ದರು. 2004ರಲ್ಲಿ ಮತ್ತೆ ಗುಳೇದಗುಡ್ಡದಿಂದ ಗೆಲುವು ಸಾಧಿಸಿದ್ದರು.‌

ಮೇಟಿಯವರು ಜನತಾ ಪರಿವಾರದಿಂದ ಬೆಳೆದು ಬಂದ ರಾಜಕಾರಣಿ. ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾದ ಮೇಟಿ ಸಿದ್ದರಾಮಯ್ಯ ಜನತಾ ದಳ ತೊರೆದಾಗ ಅವರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಕಾಲಿಟ್ಟರು. ಸದ್ಯ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು. 2013ರಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
MLA H.Y. Matee ಕಾಂಗ್ರೆಸ್ ಹೆಚ್.ವೈ. ಮೇಟಿ ನಿಧನ
Add as Preferred on Google Follow on Google News
Share. WhatsApp Facebook Twitter Telegram
Previous Articleನಿಮ್ಮ ಪ್ಯಾನ್​ ಕಾರ್ಡ್​ಗೆ ಆಧಾರ್​ ಲಿಂಕ್​ ಆಗಿಲ್ಲವೇ? ಹಾಗಾದ್ರೆ ಪ್ಯಾನ್​ ಕ್ಯಾನ್ಸಲ್​ ಆಗೋದು ಖಚಿತ!!
Next Article ಮೈ ಬೆಹೆನ್​ ಮಾನ್ ಯೋಜನೆಯಡಿ ಮಹಿಳೆಯರ ಖಾತೆಗೆ ₹30 ಸಾವಿರ ಹಣ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.