ರಾಜಕೀಯರಾಜ್ಯ

ಹು-ಧಾ ಮಹಾನಗರ ಪಾಲಿಕೆ ಚುನಾವಣೆ | ನೂತನ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆ

Hu-Dha Metropolitan Corporation Election | BJP's Veena Bhardwada elected as the new mayor

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಆಗಿ ಬಿಜೆಪಿಯ ವೀಣಾ ಭರದ್ವಾಡ ಆಯ್ಕೆಯಾದರು. ನೂತನ ಮೇಯರ್​ಗೆ ಸಂಸದ ಪಲ್ಹಾದ್ ಜೋಶಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಶುಭ ಹಾರೈಸುತ್ತಿದ್ದಾರೆ.

ಹು-ಧಾ ಮೇಯರ್ ಆಗಿ ಆಯ್ಕೆಗೊಂಡ ಬಳಿಕ ವೀಣಾ ಭರದ್ವಾಡ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡುತ್ತಾ, ಮೇಯರ್ ಆಗಿ ನನ್ನನ್ನು ಆಯ್ಕೆ ಮಾಡಿರುವುದು ತುಂಬಾ ಸಂತಸ ತಂದಿದೆ.

ಅವಳಿ ನಗರದ ಜನತೆ ನಮ್ಮಿಂದ ಸಾಕಷ್ಟು ಅಭಿವೃದ್ದಿ ನಿರೀಕ್ಷೆ ಮಾಡಿದ್ದು, ಉತ್ತಮ ಆಭಿವೃದ್ಧಿ ನಿರೀಕ್ಷೆ ಮಾಡಿದ್ದಾರೆ. ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಸಾಕಷ್ಟು ಸವಾಲುಗಳಿವೆ. ಪ್ರಮುಖವಾಗಿ ಅಭಿವೃದ್ದಿ ಕಾರ್ಯಗಳತ್ತ ಗಮನ ಹರಿಸುತ್ತೇನೆ. ಕುಂಠಿತಗೊಂಡ ಅಭಿವೃದ್ದಿ ಕಾರ್ಯಗಳು ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಹೇಳಿದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಟ್ಟು 82 ಸದಸ್ಯರ ಬಲ ಹೊಂದಿದ್ದು, ಅಧಿಕಾರ ಪಡೆದುಕೊಳ್ಳಲು 46 ಸಂಖ್ಯಾಬಲ ಬೇಕಿತ್ತು. ಬಿಜೆಪಿ ಕಾರ್ಪೊರೇಟರ್​ಗಳ ಸಂಖ್ಯೆ 39 ಇದ್ದು, ಕಾಂಗ್ರೆಸ್​​​​ 33, ಪಕ್ಷೇತರ 6, AIMIM 3, ಜೆಡಿಎಸ್ 1 ಸ್ಥಾನ ಹೊಂದಿದೆ. ಇನ್ನು 8 ಜನಪ್ರತಿನಿಧಿಗಳು, 4 ಶಾಸಕರು, 1 ಸಂಸದ, 3 ಎಂಎಲ್​ಸಿ ಪಾಲಿಕೆ ವ್ಯಾಪ್ತಿಯ ಜನಪ್ರತಿನಿಧಿಗಳು ಸೇರಿಸಿ ಒಟ್ಟು 90 ಮತಗಳಿದ್ದವು.

3 ಕೋಟಿ ಪ್ಯಾಕೇಜ್ ಗಿಟ್ಟಿಸಿದ ಎಲ್‌ಪಿಯು ಪದವೀಧರ!
ಬಿಜೆಪಿ ಮೇಯರ್ ಅಭ್ಯರ್ಥಿ ಪರ 46 ಮತಗಳು ಚಲಾವಣೆಯಾಗಿದ್ದರೆ, ಕಾಂಗ್ರೆಸ್​ನ ಸುವರ್ಣ ಅವರು 37 ಮತ ಪಡೆಯುವುರೊಂದಿಗೆ ಸೋಲು ಕಂಡರು. ಇದರೊಂದಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಜೆಪಿ ಪಾಲಾಗಿದೆ. ಸತೀಶ ಹಾನಗಲ್ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಹಾರೈಸಿದ ಪ್ರಲ್ಹಾದ ಜೋಶಿ
ಅವಳಿನಗರದ ಜನತೆಗೆ ನಮ್ಮ ಆಡಳಿತದ ಮೇಲೆ ಅಪಾರ ವಿಶ್ವಾಸ ಹಾಗೂ ನಂಬಿಕೆ ಇದೆ. ಅವರ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಬೇಕಿದೆ. ಸಾರ್ವಜನಿಕರ ನಿರೀಕ್ಷೆಗಳನ್ನು ಪೂರೈಸಲು ತಮ್ಮನ್ನು ತಾವು ಸಮರ್ಪಿಸಿಕೊಳ್ಳಲಿದ್ದೀರಿ ಎಂಬ ನಂಬಿಕೆ ಇದೆ. ಅತ್ಯಂತ ಯಶಸ್ವಿ ಅವಧಿ ನಿಮ್ಮದಾಗಿಲಿ ನೂತನ ಮೇಯರ್ ಹಾಗೂ ಉಪಮೇಯರ್​ಗೆ ಸಂಸದ ಪ್ರಲ್ಹಾದ ಜೋಶಿ ಹಾರೈಸಿದ್ದಾರೆ.

ಇದನ್ನೂ ಓದಿ...

Back to top button
>