ರಾಜ್ಯ

ಜೂನ್ 27 ರಿಂದ ‘ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Application submission for 'Grihalakshmi' scheme starts from June 27: Minister Lakshmi Hebbalkar

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಮೈಸೂರು : ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.

ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಮತದಾರರಿಗೆ 5 ‘ಗ್ಯಾರಂಟಿ’ ಯೋಜನೆಗಳನ್ನು ಘೋಷಣೆಗಳನ್ನು ಮಾಡಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಒಂದೊಂದೇ ಯೋಜನೆಗಳ ಜಾರಿಗೆ ಕ್ರಮ ಕೈಗೊಳ್ಳುತ್ತಿದೆ.ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿ ಕೊಡುವ ‘ಶಕ್ತಿ’ ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು, ಪ್ರತಿನಿತ್ಯ ಲಕ್ಷಾಂತರ ಮಂದಿ ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
ಇದೀಗ ಮತ್ತೊಂದು ಪ್ರಮುಖ ಯೋಜನೆ ‘ಗೃಹಲಕ್ಷ್ಮಿ’ ಅನುಷ್ಠಾನಕ್ಕೆ ಸಿದ್ಧತೆಗಳ ನಡೆಯುತ್ತಿದ್ದು, ಇದು ಆಗಸ್ಟ್ ತಿಂಗಳಿನಿಂದ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು.
ಯಾವೆಲ್ಲಾ ದಾಖಲೆಗಳು ಬೇಕು..?
1) ರೇಷನ್ ಕಾರ್ಡ್
2. ಬ್ಯಾಂಕ್ ಪಾಸ್ಬುಕ್
3. ಆಧಾರ್ ಕಾರ್ಡ್
4. ಯಾವುದಾದರೂ ಗುರುತಿನ ಚೀಟಿ

ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಪಡೆಯಲು ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ಇರಲೇಬೇಕು. ಲಾಭ ಪಡೆಯಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಿರಲೇಬೇಕು. ಯೋಜನೆಯ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ

ಇದನ್ನೂ ಓದಿ...

Back to top button
>