ರಾಜಕೀಯರಾಜ್ಯ

ಡಿಸೆಂಬರ್​ ನಲ್ಲಿ ಬಿಬಿಎಂಪಿ ಚುನಾವಣೆ; ವಾರ್ಡ್ ವಿಂಗಡಣೆ ಅಧಿಕಾರಿಗಳದ್ದೇ ಅಂತಿಮ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ

BBMP elections in December; Ward Allocation Officers' Final Decision: Minister Ramalingareddy

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಗೆ ಕರ್ನಾಟಕ ಸರ್ಕಾರ ಹೊಸ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದ ಒಂದು ದಿನದ ನಂತರ ರಾಮಲಿಂಗಾ ರೆಡ್ಡಿ ಈ ಹೇಳಿಕೆ ನೀಡಿದ್ದಾರೆ.

ಸರ್ಕಾರದ ಕೋರಿಕೆಯ ಮೇರೆಗೆ ವಾರ್ಡ್ ವಿಂಗಡಣೆಯನ್ನು ಮರುಪರಿಶೀಲಿಸಲು ಜೂನ್ 19ರಂದು ಹೈಕೋರ್ಟ್ 12 ವಾರಗಳ ಕಾಲಾವಕಾಶವನ್ನು ನೀಡಿತ್ತು. ಹೈಕೋರ್ಟ್ ಆದೇಶದ ನಂತರ ಸರ್ಕಾರ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಆಯೋಗ ರಚಿಸಿ ಆದೇಶ ಹೊರಡಿಸಿತ್ತು. ಬಿಡಿಎ ಆಯುಕ್ತರು, ಬೆಂಗಳೂರು ಉಪ ಆಯುಕ್ತರು ಮತ್ತು ಬಿಬಿಎಂಪಿ ವಿಶೇಷ ಆಯುಕ್ತರು(ಕಂದಾಯ) ಸಮಿತಿಯ ಸದಸ್ಯರಾಗಿದ್ದಾರೆ.

ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಬಿಜೆಪಿ ಸರ್ಕಾರ ಅವರ ಇಚ್ಛೆಯಂತೆ ವಾರ್ಡ್‌ ವಿಂಗಡಣೆ ಮಾಡಿತ್ತು. ಈಗ ನಾವು ಸಮಿತಿ ರಚಿಸಿದ್ದೇವೆ ಮತ್ತು ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡುತ್ತಾರೆ. ನಾವು ಅದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಹೊಸ ಬಿಬಿಎಂಪಿ ಕಾಯ್ದೆ ಪ್ರಕಾರ 243 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ...

Back to top button
>