ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ನವದೆಹಲಿ: ದೇಶದಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಇಂದು ಭಾನುವಾರ ವರ್ಚ್ ವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಈ ಮೂಲಕ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 508 ರೈಲು ನಿಲ್ದಾಣಗಳು ಮೇಲ್ದರ್ಜೆಗೇರಲಿವೆ.
ಇಂದು ರೈಲ್ವೆ ವಲಯಕ್ಕೆ ಒಂದು ಹೆಗ್ಗುರುತು ದಿನ. ಐತಿಹಾಸಿಕ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಅಡಿಪಾಯ ಹಾಕಲಾಗುತ್ತದೆ. ಸುಮಾರು 25,000 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೊಳ್ಳಲಾಗುವ ಯೋಜನೆ ಇದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.