ರಾಜ್ಯರಾಷ್ಟ್ರೀಯ

ಕಾವೇರಿ ನೀರು ಬಿಡುವಂತೆ ತಮಿಳುನಾಡು ಮತ್ತೆ ಖ್ಯಾತೆ: ಸಿದ್ದರಾಮಯ್ಯ ಹೇಳಿದ್ದೇನು?

Tamil Nadu is again famous for releasing Cauvery water: What did Siddaramaiah say?

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಮೈಸೂರು: ತಮಿಳುನಾಡು ಕಾವೇರಿ ನೀರು ಬಿಡುವಂತೆ ಮತ್ತೆ ಖ್ಯಾತೆ ಆರಂಭಿಸಿದೆ.ಈ ಬಾರಿ ನೀರಿಕ್ಷಿತ ಮಟ್ಟದ ಮಳೆಯಾಗಿಲ್ಲ, ಹೀಗಾಗಿ ಸಂಕಷ್ಟದ ಸೂತ್ರವನ್ನು ಎರೆಡು ರಾಜ್ಯಗಳು ಪಾಲಿಸಬೇಕಿದೆ. ಆದರೂ ತಮಿಳುನಾಡು ನೀರು ಬಿಡುವಂತೆ ಖ್ಯಾತೆ ಶುರು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಈ ಕುರಿತು ಶನಿವಾರ ಮೈಸೂರಿನಲ್ಲಿ ಗುತ್ತಿಗೆದಾರರ ಬಿಲ್ ಬಾಕಿ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 40% ಕಮಿಷನ್ ಬಗ್ಗೆ ತನಿಖೆಯಾಗದೇ ಬಿಲ್ ಬಿಡುಗಡೆ ಮಾಡಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ ಅವರು, ಇದೀಗ ತನಿಖೆ ಪ್ರಗತಿಯಲ್ಲಿದೆ. ತಪ್ಪು ಮಾಡದೇ ಇರುವವರಿಗೆ ಬಿಲ್ ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ತಪ್ಪು ಮಾಡಿರುವವರಿಗೆ ಆ ಬಗ್ಗೆ ಭಯ ಇರುತ್ತದೆ. ಬಿಜೆಪಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಬಿಜೆಪಿಯವರಿಗೆ ಏನು ವಿಚಾರ ಇಲ್ಲದೇ ಇರುವುದರಿಂದ ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಎಂದು ಹೇಳಿದರು.

 

40% ಕಮಿಷನ್ ಗಾಗಿಯೇ ಜನರು ಅವರನ್ನು ತಿರಸ್ಕರಿಸಿದ್ದಾರೆ. ಅಂದು ನಾವು ಮಾಡಿರುವ ಆರೋಪವನ್ನು ಈಗ ಸಾಬೀತು ಮಾಡಬೇಕಿದೆ, ಇದೇ ಕಾರಣದಿಂದ ನಾಲ್ಕು ಟೀಂ ತನಿಖೆ ಮಾಡುತ್ತಿವೆ.
ನಡೆದಿರುವ ಕಾಮಗಾರಿಗಳೆಲ್ಲಾ ಮೂರು ವರ್ಷದ ಹಿಂದೆ ಮುಕ್ತಾಯವಾಗಿವೆ. ಈಗ ಬಿಲ್ ಗಾಗಿ ಆತುರ ಪಟ್ಟರೆ ಹೇಗೆ ಎಂದು ಕೇಳಿದರು.

ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಬಿದ್ದ ಪ್ರಕರಣದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದೇನೆ. 40% ಗಿಂತ ಕಡಿಮೆ ಗಾಯವಾಗಿರುವವರಿಗೆ ತೊಂದರೆ ಇಲ್ಲ. ಒಬ್ಬರಿಗೆ 40% ಗಿಂತ ಹೆಚ್ಚು ಗಾಯವಾಗಿದೆ. ಎಲ್ಲಾ ಗಾಯಾಳುಗಳಿಗೂ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

 

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಮಾತನಾಡಿ, ಇದಕ್ಕಾಗಿ ಒಂದು ಸಮಿತಿ ಮಾಡಿದ್ದೇವೆ. ಶಾಸಕರಿಗೂ ಇದರಲ್ಲಿ ಸ್ಥಾನ ಕೊಡಬೇಕಿದೆ, ಯಾವ ಅನುಪಾತದಲ್ಲಿ ಇದನ್ನು ಹಂಚಿಕೆ ಮಾಡಬೇಕು ಎಂಬ ಬಗ್ಗೆ ಸಮಿತಿ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

 

ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ವಿಚಾರವಾಗಿ ಮಾತನಾಡಿ, ವಾರ್ಡ್‌ಗಳ ಪುನರ್ ವಿಂಗಡಣೆ ವಿಚಾರದಲ್ಲಿ ನ್ಯಾಯಾಲಯ ಗಡುವು ನೀಡಿದೆ. ಆ ಗಡುವಿನೊಳಗೆ ವರದಿಗಳು ಸಿದ್ಧವಾಗಲಿವೆ, ಅದನ್ನು ಕೋರ್ಟಿಗೆ ನಾವು ನೀಡುತ್ತೇವೆ. ಚುನಾವಣೆ ವಿಚಾರದಲ್ಲಿ ನಾವು ಯಾವುತ್ತೂ ಹಿಂದೆ ಬಿದ್ದಿಲ್ಲ, ಬಿಜೆಪಿಯವರು ಚುನಾವಣೆಗಳನ್ನು ಮುಂದೂಡುತ್ತಿದ್ದರು. ನಾವು ಆ ರೀತಿ ಮಾಡುವುದಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ನಡೆಯುತ್ತೇವೆ ಎಂದು ಹೇಳಿದರು.ಕೇಂದ್ರ ಸರ್ಕಾರದಿಂದ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿ ವಿಚಾರವಾಗಿ ಮಾತನಾಡಿ, ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಜಾರಿಗೆ ನಮ್ಮ ವಿರೋಧವಿದೆ. ಕೇರಳದಲ್ಲೂ ಈಗಾಗಲೇ ಇದಕ್ಕೆ ವಿರೋಧ ವ್ಯಕ್ತಪಡಿಸಲಾಗಿದೆ. ನಾವೂ ಸಹ ಇದಕ್ಕೆ ವಿರೋಧ ಇದ್ದೇವೆ ಎಂದು ಹೇಳಿದರು.

 

ಹುಟ್ಟಹಬ್ಬ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಆಗಸ್ಟ್ 3, ಆಗಸ್ಟ್ 12 ಎರಡೂ ಕೂಡ ತಪ್ಪು ದಿನಾಂಕಗಳು. ಒಂದು ನನ್ನ ಮೇಷ್ಟ್ರು ಬರೆಸಿರೋದು.ಇನ್ನೊಂದು ನಮ್ಮ ಅಪ್ಪ ಯಾವುದೋ ಒಂದು ಡೇಟ್ ಬರೆಸಿರೋದು. ಹೀಗಾಗಿ ಎರಡೂ ದಿನಾಂಕಗಳು ತಪ್ಪು. ನನ್ನ ಜನ್ಮ ದಿನಾಂಕ ನನಗೇ ಸರಿಯಾಗಿ ಗೊತ್ತಿಲ್ಲ, ಹೀಗಾಗಿ ನನಗೆ ಯಾವ ಆಸಕ್ತಿಯೂ ಇಲ್ಲ ಎಂದು ತಿಳಿಸಿದರು.

ಇದನ್ನೂ ಓದಿ...

Back to top button
>