ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಳಗಾವಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಆ.28 ಅಥವಾ 30ಚಾಲನೆ ನೀಡಲಾಗುತ್ತಿದೆ.
ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಜವಾಬ್ದಾರಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಹಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗೀಯ ಮಟ್ಟದ 7 ಜಿಲ್ಲೆಗಳಿಂದ 1 ಲಕ್ಷ ಜನರು ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಭಾಗವಹಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿದ್ಧತೆಗಳನ್ನು ಪರಿಳೀನೆ ನಡೆಸಿದರು.
ಗೃಹ ಲಕ್ಷ್ಮಿ ಯೋಜನೆಗಾಗಿ, ರಾಜ್ಯದಲ್ಲಿ ಅದರ ಪ್ರಯೋಜನಗಳನ್ನು ಪಡೆಯಲು ಇದುವರೆಗೆ 1.6 ಕೋಟಿಗೂ ಹೆಚ್ಚು ಮಹಿಳೆಯರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ ಮತ್ತು ನೋಂದಣಿ ಪ್ರಕ್ರಿಯೆಯನ್ನು ನಿಯಮಿತ ಮಧ್ಯಂತರದಲ್ಲಿ ಉಚಿತವಾಗಿ ಮಾಡಲಾಗುತ್ತಿದೆ.
ಈ ಹಿಂದೆ ಸರ್ಕಾರವು ಬೆಳಗಾವಿಯ ಸಿಪಿಇಡ್ ಮೈದಾನದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ಮುಂದಾಗಿತ್ತು. ಆದರೆ, ವಿವಿಧ ಕಾರಣಗಳಿಂದಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲು ನಿರ್ಧರಿಸಿತು ಎಂದು ಮೂಲಗಳು ತಿಳಿಸಿವೆ.
ಕಾರ್ಯಕ್ರಮದ ಕುರಿತು ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಈ ಕಾರ್ಯಕ್ರಮವನ್ನು ಸರ್ಕಾರವು ಆಯೋಜಿಸುವ ಅತಿದೊಡ್ಡ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಗೃಹ ಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಅಪಾರ ಸ್ಪಂದನೆ ದೊರೆತಿದ್ದು, ಯೋಜನೆಯು ಬಡ ಮಹಿಳೆಯರ ಜೀವನ ಸುಧಾರಿಸಲು ಸಹಾಯ ಮಾಡುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
1.6 ಕೋಟಿ ಮಹಿಳೆಯರ ನೋಂದಣಿ
ಈ ನಡುವೆ ಯೋಜನೆಗೆ ಇದೂವರೆಗೆ 1.6 ಕೋಟಿಗೂ ಹೆಚ್ಚು ಜನರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆಂದು ತಿಳಿದುಬಂದಿದೆ, ನೋಂದಣಿ ಪ್ರಕ್ರಿಯೆ ಉಚಿತವಾಗಿ ಮಾಡಲಾಗುತ್ತಿದೆ
ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ನ ನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಭಾಗವಹಿಸುವ ಸಾಧ್ಯತೆಗಳಿವ ಎಂದು ಹೇಳಲಾಗುತ್ತಿದೆ.