ರಾಜಕೀಯರಾಜ್ಯ

ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಮೈಸೂರು ಜಿಲ್ಲೆ ಪ್ರವಾಸ: ಆ.30ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

CM Siddaramaiah to visit Mysore district for three days from today: Grilahakshmi Yojana to be launched on August 30

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭಾನುವಾರದಿಂದ ಮೂರು ದಿನ ತಮ್ಮ ತವರು ಜಿಲ್ಲೆ ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಗ್ಗೆ ಮೈಸೂರಿಗೆ ತೆರಳಿರುವ ಅವರು ಇಂದು ಬೆಳಗ್ಗೆ 11 ಗಂಟೆಗೆ ಜಿ.ಪಂ. ಸಭಾಂಗಣದ ಲ್ಲಿ ಆಯೋಜಿಸಿರುವ ಕೆ .ಡಿ.ಪಿ..ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್ ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ನಾಳೆ ಬೆಳಗ್ಗೆ 10,30 ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1,45ಕ್ಕೆ ಕೆ.ಆರ್ ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ,ಸಂಜೆ 6 ಗಂಟೆಗೆ ವಕೀಲರುಗಳ ಸಂಘದ ಕಛೇರಿಗೆ ಭೇಟಿ ನೀಡುವರು.

ಗೃಹಲಕ್ಷ್ಮಿ ಯೋಜನೆಗೆ ಚಾಲನೆ: ಆಗಸ್ಟ್ 30ರಂದು ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಬಹಳ ಮುಖ್ಯವಾದ ಗೃಹಲಕ್ಷ್ಮಿ ಯೋಜನೆಯ ಚಾಲನಾ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಪತ್ರ ವಿತರಿಸಲಿದ್ದಾರೆ.

ಕಾರ್ಯಕ್ರಮ ಯಶಸ್ಸಿಗೆ ತಯಾರಿ: ಆಗಸ್ಟ್​​ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಚಾಲನಾ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮತ್ತು ಸಚಿವ ಹೆಚ್​.ಸಿ.ಮಹದೇವಪ್ಪ ಮೈಸೂರಿನಲ್ಲೇ ವಾಸ್ತವ್ಯ ಹೂಡಿದ್ದಾರೆ. ‘ಗೃಹಲಕ್ಷ್ಮೀ’ ಯೋಜನೆ ಕಾರ್ಯಕ್ರಮದ ಯಶಸ್ವಿಗಾಗಿ ಅಧಿಕಾರಿಗಳು, ಕಾರ್ಯಕರ್ತರ ಜೊತೆ ಸಭೆ ಸರಣಿ ಸಭೆ ನಡೆಸುತ್ತಿದ್ದಾರೆ.

ಇದನ್ನೂ ಓದಿ...

Back to top button
>