ರಾಜಕೀಯರಾಜ್ಯ

ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ: ಸಿಎಂ ಸಿದ್ದರಾಮಯ್ಯ

Whoever comes to our party is welcome: CM Siddaramaiah

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ ಎಂದಿರುವ ಸಿಎಂ ಸಿದ್ದರಾಮಯ್ಯ, ಇದೇ ವೇಳೆ ಪ್ರತಿಪಕ್ಷ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ನೂರು ದಿನ ಕಳೆದರೂ ಪ್ರತಿಪಕ್ಷ ನಾಯಕನ ಆಯ್ಕೆ ಆಗದಿರುವುದಕ್ಕೆ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಮೈಸೂರು: ”ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲ, ನಮ್ಮ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತಿಸುತ್ತೇವೆ. ಆದರೆ, ಅವರು ನಮ್ಮ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು ಬರಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೂರು ದಿನಗಳ ಮೈಸೂರು ಜಿಲ್ಲಾ ಪ್ರವಾಸಕ್ಕೆ ಆಗಮಿಸಿದ ಅವರು, ನಗರದ ಸರ್ಕಾರಿ ಅತಿಥಿ ಗೃಹದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಕಾಂಗ್ರೆಸ್​ ಪಕ್ಷಕ್ಕೆ ಯಾರೇ ಬಂದರೂ ಸ್ವಾಗತ, ನಮ್ಮ ಪಕ್ಷದಿಂದ ಹೋದವರು ಮಾತ್ರವಲ್ಲದೇ, ನಮ್ಮ ಪಕ್ಷದ ಸಿದ್ದಾಂತವನ್ನು ಒಪ್ಪಿ ಯಾರಾದರೂ ಬರಬಹುದು, ಅಂತವರಿಗೆ ಸ್ವಾಗತಿಸಲಾಗುವುದು” ಎಂದರು.

ನೂರು ದಿನ ಕಳೆದರೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ: ರಾಜ್ಯದಲ್ಲಿ ಬಿಜೆಪಿ ಪಕ್ಷ ಎಲ್ಲಿದೆ? ರಾಜ್ಯದ ಬಿಜೆಪಿ ದಿವಾಳಿ ಹೋಗಿದೆ. ಸರ್ಕಾರ ಬಂದು ನೂರು ದಿನಗಳಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು. ರಾಜ್ಯದ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮೋದಿಯವರೇ ಈ ನಾಯಕರನ್ನು ಬರಬೇಡಿ ಅಂತ ಹೇಳಿದ್ದರಂತೆ ಎಂದು ವ್ಯಂಗ್ಯವಾಡಿದರು.

ಮೋಡ ಬಿತ್ತನೆಯಿಂದ ಪ್ರಯೋಜನವಿಲ್ಲ- ಸಿದ್ದರಾಮಯ್ಯ: ”ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ”ಬರ ಪೀಡಿತ ಪ್ರದೇಶಗಳ ಘೋಷಣೆ ಆದ ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳುಲಾಗುವುದು. ಬರಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಮೋಡ ಭಿತ್ತನೆ ಕಾರ್ಯ ಯಾವಾಗಲೂ ಯಶಸ್ವಿ ಆಗಿಲ್ಲ. ಮೋಡ ಬಿತ್ತನೆಯಿಂದ ಯಾವುದೇ ಪ್ರಯೋಜನ ಇಲ್ಲ” ಎಂದು ಸ್ಪಷ್ಟ ಪಡಿಸಿದರು.

ಗೃಹ ಲಕ್ಷ್ಮಿ ಯೋಜನೆಗೆ 30ಕ್ಕೆ ಚಾಲನೆ: ಸರ್ಕಾರದ ನಾಲ್ಕನೇ ಗ್ಯಾರಂಟಿ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 30 ರಂದು ಚಾಲನೆ ನೀಡಲಾಗುವುದು. ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ 1 ಲಕ್ಷಕ್ಕೂ ಹೆಚ್ಚು ಜನ ಫಲಾನುಭವಿಗಳು ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆ ವಹಿಸುವರು. ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸುವ ನಿರೀಕ್ಷೆಯಿದೆ. ಜೊತೆಗೆ ಆಗಸ್ಟ್ 30 ರಂದು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ವಿವರಿಸಿದರು.

ಇದನ್ನೂ ಓದಿ...

Back to top button
>