Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಟ್ರಂಪ್​ ಹೇಳಿಕೆ ಬೆನ್ನಲ್ಲೇ ಪರಮಾಣು ಪರೀಕ್ಷೆ ಮತ್ತೆ ಆರಂಭಿಸಲು ಸಜ್ಜಾದ ರಷ್ಯಾ
Nation News Exclusive international

ಟ್ರಂಪ್​ ಹೇಳಿಕೆ ಬೆನ್ನಲ್ಲೇ ಪರಮಾಣು ಪರೀಕ್ಷೆ ಮತ್ತೆ ಆರಂಭಿಸಲು ಸಜ್ಜಾದ ರಷ್ಯಾ

Sambrama Prabha NewsBy Sambrama Prabha NewsNovember 6, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಮಾಸ್ಕೋ (ರಷ್ಯಾ): ಅಮೆರಿಕ ಪರಮಾಣು ಪರೀಕ್ಷೆಗಳನ್ನು ಪ್ರಾರಂಭಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​, ಪರಮಾಣು ಪರೀಕ್ಷೆಗಳನ್ನು ಪುನಾರಂಭಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಮ್ಮ ಭದ್ರತಾ ಮಂಡಳಿಯೊಂದಿಗಿನ ಸಭೆಯಲ್ಲಿ ಮಾತನಾಡಿದ ಪುಟಿನ್, ಅಮೆರಿಕ ಮೊದಲು ಪರಮಾಣು ಪರೀಕ್ಷೆಗಳನ್ನು ಆರಂಭಿಸಿದರೆ ಮಾತ್ರ ಮಾಸ್ಕೋ ಪರಮಾಣು ಪರೀಕ್ಷೆಗಳನ್ನು ಪುನಾರಂಭಿಸುತ್ತದೆ ಎಂದು ಹೇಳಿದರು. ಆದರೆ, ವಾಷಿಂಗ್ಟನ್‌ನ ಉದ್ದೇಶಗಳನ್ನು ವಿಶ್ಲೇಷಿಸಲು, ರಕ್ಷಣಾ ಮತ್ತು ವಿದೇಶಾಂಗ ಸಚಿವಾಲಯಗಳು ಮತ್ತು ಇತರ ಸರ್ಕಾರಿ ಸಂಸ್ಥೆಗಳಿಗೆ ಮತ್ತು ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಗಳನ್ನು ಪುನಾರಂಭಿಸುವ ಪ್ರಸ್ತಾಪಗಳನ್ನು ರೂಪಿಸಲು ನಿರ್ದೇಶಿಸಿದ್ದಾರೆ.

ಇತ್ತೀಚಿಗೆ ರಷ್ಯಾ ಪರಮಾಣು ಚಾಲಿತ ಮತ್ತು ಪರಮಾಣು ಸಾಮರ್ಥ್ಯದ ಕ್ರೂಸ್ ಕ್ಷಿಪಣಿ ಮತ್ತು ನೀರೊಳಗಿನ ಡ್ರೋನ್‌ನ ಯಶಸ್ವಿ ಪರೀಕ್ಷೆ ನಡೆಸಿತ್ತು. ಇದರ ಬೆನ್ನಲ್ಲೇ ಟ್ರಂಪ್ ಸಾಮಾಜಿಕ ಮಾಧ್ಯಮದ ಮೂಲಕ ಅಮೆರಿಕ ಕೂಡ ಪರಮಾಣು ಪರೀಕ್ಷೆಗೆ ಮುಂದಾಗುವುದಾಗಿ ತಿಳಿಸಿದ್ದರು. ಜೊತೆಗೆ ಉಕ್ರೇನ್‌ನಲ್ಲಿನ ಸಂಘರ್ಷವನ್ನು ಅಂತಿಮಗೊಳಿಸುವ ಬಗ್ಗೆ ಟ್ರಂಪ್‌ಗೆ ಮತ್ತೊಂದು ಸಂದೇಶ ರವಾನಿಸಿದ್ದರು.

ಟ್ರಂಪ್ ಮೂರು ದಶಕಗಳ ಬಳಿಕ ಮೊದಲ ಬಾರಿಗೆ ಅಮೆರಿಕ ಪರಮಾಣು ಶಸ್ತ್ರಾಸ್ತ್ರಗಳ ಪರೀಕ್ಷೆಯನ್ನು ಪುನಾರಂಭಿಸಲಿದೆ ಎಂದಿದ್ದರು. ಟ್ರಂಪ್ ಆದೇಶ ಯುಎಸ್ ಪರಮಾಣು ಶಸ್ತ್ರಾಸ್ತ್ರ ವ್ಯವಸ್ಥೆಯ ಹೊಸ ಪರೀಕ್ಷೆಗಳು ಪರಮಾಣು ಸ್ಫೋಟಗಳನ್ನು ಒಳಗೊಂಡಿರುವುದಿಲ್ಲ ಎಂದು ಯುಎಸ್ ಇಂಧನ ಕಾರ್ಯದರ್ಶಿ ಕ್ರಿಸ್ ರೈಟ್ ಭಾನುವಾರ ಸ್ಪಷ್ಟಪಡಿಸಿದ್ದರು.

ಭದ್ರತಾ ಮಂಡಳಿ ಸಭೆಯಲ್ಲಿ, ರಕ್ಷಣಾ ಸಚಿವ ಆಂಡ್ರೇ ಬೆಲೌಸೊವ್, ವಾಷಿಂಗ್ಟನ್‌ನಿಂದ ಪರಮಾಣು ಪರೀಕ್ಷೆಗಳ ಪುನಾರಂಭವು ರಷ್ಯಾಕ್ಕೆ ಮಿಲಿಟರಿ ಬೆದರಿಕೆಗಳ ಮಟ್ಟವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.

ಆರ್ಕ್ಟಿಕ್ ನೊವಾಯಾ ಜೆಮ್ಲ್ಯಾ ದ್ವೀಪ ಸಮೂಹದಲ್ಲಿ ಪರಮಾಣು ಪರೀಕ್ಷೆಗಳಿಗೆ ಮಾಸ್ಕೋ ತಕ್ಷಣ ಸಿದ್ಧತೆಗಳನ್ನು ಪ್ರಾರಂಭಿಸಬೇಕು. 1990 ರಲ್ಲಿ ಸೋವಿಯತ್ ಒಕ್ಕೂಟವು ಕೊನೆಯದಾಗಿ ಪರಮಾಣು ಶಸ್ತ್ರಾಸ್ತ್ರವನ್ನು ಪರೀಕ್ಷಿಸಿದ ಸ್ಥಳವು ಇದೀಗ ಮತ್ತೆ ತ್ವರಿತವಾಗಿ ಪುನಾರಂಭಿಸಲು ಸಿದ್ಧವಾಗಿದೆ ಎಂದು ತಿಳಿಸಿದರು.

ಮಿಲಿಟರಿಯ ಜನರಲ್ ಸ್ಟಾಫ್ ಮುಖ್ಯಸ್ಥ ಜನರಲ್ ವ್ಯಾಲೆರಿ ಗೆರಾಸಿಮೊವ್ ಕೂಡ ಪರೀಕ್ಷೆಗಳಿಗೆ ಸಿದ್ಧತೆಗಳನ್ನು ತ್ವರಿತವಾಗಿ ಪ್ರಾರಂಭಿಸುವುದಾಗಿ ಹೇಳಿದರು.

ಪುಟಿನ್ ಸರ್ಕಾರಿ ಸಂಸ್ಥೆಗಳಿಗೆ ಈ ವಿಷಯದ ಕುರಿತು ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸಲು, ಭದ್ರತಾ ಮಂಡಳಿಯ ಚೌಕಟ್ಟಿನೊಳಗೆ ಅದನ್ನು ವಿಶ್ಲೇಷಿಸಲು ಮತ್ತು ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆಗಳ ಸಿದ್ಧತೆಗಳ ಕುರಿತು ಕೆಲಸದ ಸಂಭವನೀಯ ಆರಂಭದ ಕುರಿತು ಸಂಘಟಿತ ಪ್ರಸ್ತಾಪಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Russia Trump's
Add as Preferred on Google Follow on Google News
Share. WhatsApp Facebook Twitter Telegram
Previous Articleಕ್ಯಾನ್ಸರ್​ ವಿರುದ್ಧ ಹೋರಾಡುತ್ತಿದ್ದ ಹರೀಶ್​ ರಾಯ್ ನಿಧನ!
Next Article ಕುಕ್ಕೆ ಸುಬ್ರಹ್ಮಣ್ಯಕ್ಕೆ ಉದ್ಯಮಿಯಿಂದ 2 ಕೋಟಿ ರೂ. ಬೆಲೆಯ ಬೆಳ್ಳಿ ರಥ ಕಾಣಿಕೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

August 31, 2026

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.