ರಾಜಕೀಯರಾಜ್ಯ

ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Drinking water supply network inaugurated by CM Siddaramaiah

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಕೋಲಾರ: ಕೋಲಾರ ನಗರ, ಬಂಗಾರಪೇಟೆ ಹಾಗೂ ಮಾಲೂರು ಪಟ್ಟಣಗಳ ಜನತೆಗೆ ಕುಡಿಯುವ ನೀರು ಒದಗಿಸುವ ಯರಗೋಳ್ ಅಣೆಕಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ  ಕೋಲಾರ ಜಿಲ್ಲೆಯ ಒಟ್ಟು 2,197 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಸಚಿವರಾದ ಡಾ.  ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಸಂಸದರಾದ ಮುನಿಸ್ವಾಮಿ, ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ವೈ.ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಮಾರ್ಕಂಡೇಯ ಜಲಾಶಯದಿಂದ ತಮಿಳುನಾಡಿಗೆ ವ್ಯರ್ಥವಾಗಿ ಹೋಗುತ್ತಿದ್ದ ನೀರನ್ನು ತಡೆಗಟ್ಟಲು ಯರಗೋಳ್ ಗ್ರಾಮದ ಬಳಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ಕುಡಿಯುವ ನೀರಿಗೆ ಮೀಸಲಾದ ಜಿಲ್ಲೆಯ ಏಕೈಕ ಯೋಜನೆ ಇದಾಗಿದೆ.

2006ರಲ್ಲಿ ಜೆಡಿಎಸ್- ಬಿಜೆಪಿ ಸರ್ಕಾರದಲ್ಲಿ ಯೋಜನೆಗೆ ಅನುಮೋದನೆ ಸಿಕ್ಕಿತ್ತು. ಆದರೆ, ಸಿದ್ದರಾಮಯ್ಯ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ 2013ರ ಸೆಪ್ಟೆಂಬರ್ ನಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ನಂತರ ಅಣೆಕಟ್ಟು ನಿರ್ಮಾಣ ಕಾಮಗಾರಿ ಆರಂಭವಾಗಿ 2020ರಲ್ಲಿ ಪೂರ್ಣಗೊಂಡಿತ್ತು.

ಇದನ್ನೂ ಓದಿ...

Back to top button
>