ಸಿನಿಮಾಸಿನಿಮಾ ಸುದ್ದಿ

‘ಡೆವಿಲ್’ ಚಿತ್ರದ ಬಗ್ಗೆ ವದಂತಿ ಹಬ್ಬಿಸಬೇಡಿ, ಎಲ್ಲದಕ್ಕೂ ಫೆ.16 ದರ್ಶನ್ ಹುಟ್ಟುಹಬ್ಬ ದಿನ ಉತ್ತರ ಕೊಡುತ್ತೇವೆ: ನಿರ್ದೇಶಕ ಮಿಲನ ಪ್ರಕಾಶ್

Don't spread rumors about the film 'Devil', we will answer everything on February 16, Darshan's birthday: Director Milana Prakash

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಕಾಟೇರ ಚಿತ್ರದ ಯಶಸ್ಸಿನ ನಂತರ ‘ಚಾಲೆಂಜಿಂಗ್ ಸ್ಟಾರ್’ ದರ್ಶನ್​ ನಟನೆಯ ಮುಂಬರುವ ಸಿನಿಮಾಗಳ ಮೇಲೆ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ‘ಮಿಲನ’ ಚಿತ್ರದ ಖ್ಯಾತಿಯ ನಿರ್ದೇಶಕ ಪ್ರಕಾಶ್​ ವೀರ್​ ಅವರು ದರ್ಶನ್​ ಜೊತೆ ಹೊಸ ಸಿನಿಮಾ ಮಾಡುತ್ತಿದ್ದು, ಅದರ ಶೀರ್ಷಿಕೆ ‘ಡೆವಿಲ್​’ ಎಂದು ಇಡಲಾಗಿದೆ.

ಈ ಮಧ್ಯೆ ಚಿತ್ರದ ನಾಯಕಿಯಾಗಿ ತುಳು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ರಚನಾ ರೈ ಡೆವಿಲ್;‌ ದಿ ಹೀರೋ ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಸದ್ದು ಮಾಡಿತ್ತು. ಇದೀಗ ಈ ನಾಯಕಿ ಆಯ್ಕೆ ವಿಚಾರ ಮತ್ತು ಡೆವಿಲ್‌ ಸಿನಿಮಾ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳಲ್ಲೆ ಸುಳ್ಳು ಎಂದು ನಿರ್ದೇಶಕರು ಅಧಿಕೃತವಾಗಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ನಿರ್ದೇಶಕ ಪ್ರಕಾಶ್‌ ವೀರ್‌ ಸುಳ್ಳು ವದಂತಿ ಹಬ್ಬಿಸಬೇಡಿ. ‘ಡೆವಿಲ್ ಸಿನಿಮಾದ ಬಗ್ಗೆ ಶೀಘ್ರದಲ್ಲಿ ನಾವೇ ಅಧಿಕೃತವಾಗಿ ಮಾಹಿತಿ ನೀಡುತ್ತೇವೆ. ಅಲ್ಲಿಯ ತನಕ ಬೇರೆ ಯಾವುದನ್ನೂ ನಂಬಬೇಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಪ್ರಕಾಶ್ ವೀರ್ ಮತ್ತು ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಈ ಸಿನಿಮಾಗೆ 2 ತಿಂಗಳ ಹಿಂದೆ ಸಿಂಪಲ್​ ಆಗಿ ಸ್ಕ್ರಿಪ್ಟ್ ಪೂಜೆ ಮಾಡಲಾಗಿತ್ತು. ಸದ್ಯಕ್ಕೆ ‘ಡೆವಿಲ್’ ಚಿತ್ರತಂಡದವರು ಯಾವುದೇ ಪ್ರಚಾರ ಕಾರ್ಯ ಆರಂಭಿಸಿಲ್ಲ.

ಡೆವಿಲ್‌ ನಿರ್ದೇಶಕರ ಸ್ಪಷ್ಟನೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸುತ್ತಿರುವ “ಡೆವಿಲ್” ಚಿತ್ರದ ಸ್ಕ್ರಿಪ್ಟ್ ಪೂಜೆ ಎರಡು ತಿಂಗಳ ಹಿಂದೆ ಸರಳವಾಗಿ ನೆರವೇರಿತ್ತು. ಆದರೆ ಡೆವಿಲ್ ಚಿತ್ರದ ಕುರಿತಂತೆ ಇನ್ನು ಯಾವುದೇ ಪ್ರಚಾರ ಕಾರ್ಯ ಆರಂಭ ಮಾಡಿಲ್ಲ. ಮೊದಮೊದಲು ಕೆಲವರು ಸೋಷಿಯಲ್‌ ಮೀಡಿಯಾದಲ್ಲಿ ಯಾವುದೋ ಪೋಸ್ಟರ್ ಹಾಕಿ ಡೆವಿಲ್ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅಂತ ಹೇಳಿಕೊಂಡಿದ್ದರು.

ಈಗ ಈ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದ್ದಾರೆ ಎಂಬ ವಿಷಯವನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದಾರೆ. ಈ ಮೇಲ್ಕಂಡ ಯಾವುದೇ ವಿಷಯಗಳು ಚಿತ್ರತಂಡದ ಅಧಿಕೃತ ಮಾಹಿತಿ ಆಗಿರುವುದಿಲ್ಲ. ಖಂಡಿತವಾಗಿಯೂ ಕನ್ನಡದ ಹುಡುಗಿಯನ್ನೇ ನಾಯಕಿಯಾಗಿ ಆಯ್ಕೆ ಮಾಡುತ್ತೇವೆ. ಆದರೆ ನಿಮ್ಮೆಲ್ಲರ ಸಂದೇಹಕ್ಕೆ ದರ್ಶನ್ ಅವರ ಹುಟ್ಟುಹಬ್ಬ ಫೆಬ್ರವರಿ 16ರಂದು ಉತ್ತರ ಕೊಡುತ್ತೇವೆ. ಸದ್ಯದಲ್ಲೇ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ‌. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ” ಎಂದಿದ್ದಾರೆ ನಿರ್ದೇಶಕ ಪ್ರಕಾಶ್ ವೀರ್.

ದರ್ಶನ್​ ಮತ್ತು ಪ್ರಕಾಶ್​ ಅವರು ‘ತಾರಕ್​’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. ಆ ಸಿನಿಮಾ 2017ರಲ್ಲಿ ಬಿಡುಗಡೆಯಾಗಿ ಫ್ಯಾಮಿಲಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು. ಈಗ ಅವರಿಬ್ಬರ ಕಾಂಬಿನೇಷನ್​ನಲ್ಲಿ ‘ಡೆವಿಲ್​’ ಸಿನಿಮಾ ಸಿದ್ಧವಾಗುತ್ತಿದ್ದು ದರ್ಶನ್ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಾಗಿದೆ.

ಇದನ್ನೂ ಓದಿ...

Back to top button
>