ರಾಜಕೀಯರಾಜ್ಯ

ಹಾಸನ ಕ್ಷೇತ್ರ ಜೆಡಿಎಸ್ ಗೆ ಬೇಕಾದರೆ ಮಂಡ್ಯವನ್ನು ಸುಮಲತಾಗೆ ಬಿಟ್ಟು ಕೊಡಲಿ: ಬಿಜೆಪಿ ನಾಯಕರ ಬಿಗಿಪಟ್ಟು!

If JDS wants Hassan's constituency, let Mandya be left to Sumalta: BJP leaders are tight!

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಮಂಡ್ಯ: ಹಾಸನದಲ್ಲಿ ಜೆಡಿಎಸ್ ಸಂಸದರು ಇದ್ದಾರೆ. ಹೀಗಾಗಿ ಕ್ಷೇತ್ರ ಬಿಟ್ಟುಕೊಡುವಂತೆ ಜೆಡಿಎಸ್ ಕೇಳುತ್ತಿದೆ. ಹಾಗಾದರೆ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾ ಅವರು ಸಂಸದರು,  ಹೀಗಾಗಿ ಮಂಡ್ಯ ಕ್ಷೇತ್ರವನ್ನು ಸುಮಲತಾ ಅವರಿಗೆ ಬಿಟ್ಟುಕೊಡಲಿ ಎಂದು ಪ್ರೀತಂ ಗೌಡ ಠಕ್ಕರ್‌ ಕೊಟ್ಟಿದ್ದಾರೆ.

ಪಾಂಡವಪುರದಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್​​ನವರು ಮಂಡ್ಯ, ಹಾಸನ ಕ್ಷೇತ್ರ ಕೇಳುತ್ತಿರುವುದು ಸತ್ಯ. ಹಾಸನದಲ್ಲಿ ಜೆಡಿಎಸ್ ಸಂಸದ ಇದ್ದಾರೆ ಅಂತ ಅಲ್ಲಿಯ ಟಿಕೆಟ್ ಕೇಳಬಾರದು. ಸುಮಲತಾ ಅಂಬರೀಶ್ ಅವರು​ ಮಂಡ್ಯ ಸಂಸದೆ. ಅವರು ಎನ್‌ಡಿಎ ಒಕ್ಕೂಟದಲ್ಲಿದ್ದಾರೆ. ಈಗ ನಾವು ಸುಮಲತಾಗೆ ಟಿಕೆಟ್ ಎಂದು‌ ಕೇಳುವುದಕ್ಕೆ ಆಗುತ್ತಾ? ಎರಡು ಪಕ್ಷದ ಕಾರ್ಯಕರ್ತರ ಒಪ್ಪಿಗೆಯಿಂದ ಅಭ್ಯರ್ಥಿ ಆಯ್ಕೆಯಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನವನ್ನು ಬಿಜೆಪಿ ಗೆದ್ದಿರಲಿಲ್ಲ. ಕೆ.ಆರ್‌.ಪೇಟೆಯಲ್ಲಿ ನಾರಾಯಣಗೌಡ ಮೊದಲ ಬಾರಿಗೆ ಗೆದ್ದರು. ಜಿಲ್ಲೆಯ ಪ್ರತಿ ಗ್ರಾಮದಲ್ಲೂ ಬಿಜೆಪಿ ಪಕ್ಷ ಕಟ್ಟೋಣ. ಮೈತ್ರಿಯಾಗಿದೆ ಟಿಕೆಟ್ ಬಿಟ್ಟುಕೊಡಬೇಕು ಎಂದು ಕಾರ್ಯಕರ್ತರು ಕುಂದುವ ಅವಶ್ಯಕತೆ ಇಲ್ಲ. ಬಿಜೆಪಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತದೆ ಎಂಬುವುದರ ಬಗ್ಗೆ ತೀರ್ಮಾನವಾಗಿಲ್ಲ ಎಂದರು.  ಹಾಸನ ಕ್ಷೇತ್ರವನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಪ್ರೀತಂ ಗೌಡ ಒತ್ತಾಯಿಸಿದ್ದಾರೆ. ಇತ್ತ ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳಲು ಮಾಜಿ ಸಚಿವ ನಾರಾಯಣ ಗೌಡರಿಂದ ಆಗ್ರಹ ಕೇಳಿಬಂದಿದೆ.

ಹಾಸನ, ಮಂಡ್ಯ ಸೇರಿ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. ಹೀಗಾಗಿ ನಮ್ಮ ಕಾರ್ಯಕರ್ತರು ಮಂಡ್ಯ ಕ್ಷೇತ್ರವನ್ನು ಕೇಳುತ್ತಿದ್ದಾರೆ. ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅವರ ಅಭಿಪ್ರಾಯ ಸಂಗ್ರಹಿಸಿ ನಾಯಕರಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

ಜೆಡಿಎಸ್ ಕಣ್ಣಿಟ್ಟ ಕ್ಷೇತ್ರಗಳನ್ನು ಬಿಟ್ಟುಕೊಡಲು ಸ್ಥಳೀಯ ಬಿಜೆಪಿ ಮುಖಂಡರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯ, ಹಾಸನ ಕ್ಷೇತ್ರಗಳನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳುವಂತೆ ಸ್ಥಳೀಯ ಕಮಲ ಮುಖಂಡರಿಂದ ಆಗ್ರಹ ವ್ಯಕ್ತವಾಗಿದೆ.

ಇದನ್ನೂ ಓದಿ...

Back to top button
>