Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರೈತರ ಬೇಡಿಕೆಗೆ ತಕ್ಕಂತೆ ಹಣ ಕೊಡುವುದು ಕಷ್ಟ, ರಾಜ್ಯ ಸರ್ಕಾರ ನೆರವು ನೀಡಲಿ
Politics Latest News

ರೈತರ ಬೇಡಿಕೆಗೆ ತಕ್ಕಂತೆ ಹಣ ಕೊಡುವುದು ಕಷ್ಟ, ರಾಜ್ಯ ಸರ್ಕಾರ ನೆರವು ನೀಡಲಿ

Sambrama Prabha NewsBy Sambrama Prabha NewsNovember 7, 2025No Comments3 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ರೈತರ ಬೇಡಿಕೆಗೆ ತಕ್ಕಂತೆ ಹಣ ಕೊಡುವುದು ನಮಗೆ ಕಷ್ಟ ಆಗುತ್ತದೆ. ರಾಜ್ಯ ಸರ್ಕಾರ ನೆರವು ನೀಡಲಿ ಎಂದು ಸಕ್ಕರೆ ಕಾರ್ಖಾನೆ ಮಾಲೀಕರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.

ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮೊದಲ ಸುತ್ತಿನ ಸಭೆ ನಡೆಸಿದರು. ಈ ವೇಳೆ ಕಾರ್ಖಾನೆ ಮಾಲೀಕರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.

“ಸಕ್ಕರೆ ಕಾರ್ಖಾನೆ ನಡೆಸುವುದು ಬಹಳ ಕ್ಲಿಷ್ಟಕರವಾಗಿದೆ. ಸಕ್ಕರೆ, ಎಥೆನಾಲ್, ವಿದ್ಯುತ್ ಉತ್ಪಾದನೆ ಮಾಡಿದರೂ ನಾವು ಸಂಕಷ್ಟದಲ್ಲಿದ್ದೇವೆ. ಜೊತೆಗೆ ರೈತರಿಂದ ಕೆಟ್ಟ ಬೈಗುಳ ತಿನ್ನುತ್ತಿದ್ದೇವೆ. ನಾವು ಉದ್ಯೋಗ ಸೃಷ್ಟಿಸಿ ಗ್ರಾಮೀಣ ಆರ್ಥಿಕತೆಗೆ ಅಪಾರ ಕೊಡುಗೆ ನೀಡುತ್ತಿದ್ದೇವೆ. ಆದರೂ ಕೇಂದ್ರದ ನೀತಿಗಳಿಂದಲೂ ನಮಗೆ ನಷ್ಟ ಆಗುತ್ತಿದೆ. ರೈತರಿಂದಲೂ ಒತ್ತಡ ಇದೆ. ಹೀಗಾದಾಗ ನಾವು ಕಾರ್ಖಾನೆ ನಡೆಸುವುದೇ ಕಷ್ಟ ಆಗ್ತಿದೆ. ಬೇಕಿದ್ದರೆ ಸರ್ಕಾರವೇ ನಮ್ಮ ಕಾರ್ಖಾನೆಗಳನ್ನು ನಡೆಸಲಿ ಎಂದು ಕಾರ್ಖಾನೆ ಮಾಲೀಕರು ಹೇಳಿದರು.

ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ: ಸಿಎಂ ಸಿದ್ದರಾಮಯ್ಯ ಮಾತನಾಡಿ, ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್​ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ 2025ರ ಮೇ 6 ರಂದು ಎಫ್ಆರ್​ಪಿ ನಿಗದಿಪಡಿಸಿದೆ. ಈ ಎಫ್ಆರ್​ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್​ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಹೇಳಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಫಡ್ನವೀಸ್ ಅವರು ಕೇಂದ್ರ ಸರ್ಕಾರಕ್ಕೆ “MSP ದರ ಹೆಚ್ಚಿಸುವಂತೆ ಒತ್ತಾಯಿಸಿ” ಬರೆದ ಪತ್ರ ಪ್ರದರ್ಶಿಸಿದ ಮುಖ್ಯಮಂತ್ರಿ, ಈ ಪತ್ರದಂತೆ ಪ್ರಧಾನಿಯವರನ್ನು MSP ಹೆಚ್ಚಿಸಲು ಒತ್ತಾಯಿಸೋಣ. ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್​ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರುಪರಿಶೀಲಿಸಲಾಗುವುದು. ನಾವು ರೈತರ ಪರವಾಗಿ ನಿಲ್ಲುತ್ತೇವೆ. ರೈತರ ಸಮಸ್ಯೆ ಬಗೆಹರಿಸಲು ನೀವೂ ಸಿದ್ದರಿರಬೇಕು. ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ ಎಂದು ಸಿಎಂ ಭರವಸೆ ನೀಡಿದರು.

ಸಕ್ಕರೆ ಕಾರ್ಖಾನೆ ಮಾಲೀಕರ ಪರವಾಗಿ ಮುರುಗೇಶ್ ನಿರಾಣಿ ಮಾತನಾಡಿ, ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರೆಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್​ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್​ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿಮೀ ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥೆನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರಸ್ತುತ ರೈತರಿಗೆ ಎಫ್ಆರ್ಪಿ ಪ್ರಕಾರ ದರ ನೀಡಲಾಗುವುದು. ಹೆಚ್ವುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದರು.

ಎಥೆನಾಲ್ ಎಂಎಸ್​ಪಿ ಹೆಚ್ಚಳ ಕುರಿತು ಕೇಂದ್ರಕ್ಕೆ ಮನವಿ ಮಾಡಿದರೂ ಇದುವರೆಗೆ ಹೆಚ್ಚಳ ಮಾಡಿಲ್ಲ. ಇದರಿಂದ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ. ಇದೇ ರೀತಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10 ಲಕ್ಷ ಮೆ. ಟನ್ ಮಾತ್ರ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಸಹ ಪರಿಷ್ಕರಿಸಿಲ್ಲ. ಆದರೆ, ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಾ ಹೋಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳಿಗೆ ಈಗ ಎಫ್ಆರ್​ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟ ಪಡಬೇಕಾದ ಪರಿಸ್ಥಿತಿಯಿದೆ. ಆದರೆ ಈ ದರ ಕಾನೂನಾತ್ಮಕವಾಗಿ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಪಾವತಿಸುತ್ತಿವೆ ಎಂದು ಸಕ್ಕರೆ ಕಾರ್ಖಾನೆ ಮಾಲೀಕರ ಸಂಘದ ಅಧ್ಯಕ್ಷರು ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಸಕ್ಕರೆ ಕಾರ್ಖಾನೆ ನಡೆಸುವುದು ನೀವು ಹೇಳುವಷ್ಟೇ ಕಷ್ಟ ಆಗಿದ್ದರೆ ಒಂದು ಕಾರ್ಖಾನೆ ಇದ್ದವರು ಎರಡು, ಮೂರು ಕಾರ್ಖಾನೆ ಮಾಲೀಕರಾಗಿದ್ದು ಹೇಗೆ ಎನ್ನುವ ರೈತರ ಪ್ರಶ್ನೆಗೆ ಏನು ಉತ್ತರ ಹೇಳ್ತೀರಿ ಎಂದು ಪ್ರಶ್ನಿಸಿದರು. ಸಕ್ಕರೆ MSP ದರ ಹೆಚ್ಚಿಸುವಂತೆ ಬಹಳ ಹಿಂದೆಯೇ ಕೇಂದ್ರಕ್ಕೆ, ಪ್ರಧಾನಮಂತ್ರಿಗೆ ಪತ್ರ ಬರೆದಿದ್ದೇನೆ. ಇಲ್ಲಿಯವರೆಗೂ ಕೇಂದ್ರ ಸರ್ಕಾರ MSP ಹೆಚ್ಚಿಸಿಲ್ಲ. ರಾಜ್ಯ ಪ್ರತಿ‌ನಿಧಿಸುವ ಕೇಂದ್ರ ಮಂತ್ರಿಗಳೂ ಕಬ್ಬು ಬೆಳೆಗಾರರಿಗೆ MSP ದರ ಹೆಚ್ಚಿಸುವುದಕ್ಕೆ ಸಹಕರಿಸಲಿಲ್ಲ. ಪ್ರಧಾನಿ ಅವರ ಜೊತೆ ಮಾತಾಡುತ್ತಿಲ್ಲ. ಏನು ಮಾಡೋದು? ಎಂದು ಕೇಳಿದರು.

ಸಕ್ಕರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಸಿದ್ದವಿದೆ. ಪ್ರಸ್ತುತ ಕಬ್ಬು ಬೆಳೆಗಾರರು ಬೀದಿಗಿಳಿದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ರೂ. 3200 ನಿಗದಿಪಡಿಸಿದ್ದು, (ಕಟಾವು ಮತ್ತು ಸಾಗಾಟ ಹೊರತುಪಡಿಸಿ) ಇದಕ್ಕೆ ಕಾರ್ಖಾನೆಗಳು ಒಪ್ಪಿಕೊಂಡರೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬಹುದಾಗಿದೆ. ಆಯಾ ಪ್ರದೇಶದ ಇಳುವರಿ ರಿಕವರಿ ಪ್ರಮಾಣದ ಆಧಾರದಲ್ಲಿ ದರವನ್ನು ಹೆಚ್ಚಳ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಿ. ಸಹಕಾರಿ ರಂಗದ ಇಐಡಿ ಪ್ಯಾರಿ ಶುಗರ್ ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ ಪ್ರಸ್ತುತ ರೂ. 3211 ಪಾವತಿಸುತ್ತಿದ್ದಾರೆ. ಇದೇ ಮಾದರಿಯಲ್ಲಿ ಉಳಿದ ಕಾರ್ಖಾನೆಗಳಿಗೆ ಯಾಕೆ ಪಾವತಿ ಸಾಧ್ಯವಿಲ್ಲ? ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಸಿಎಂ ತುಮಕೂರು ಪ್ರವಾಸ ರದ್ದು: ಕಬ್ಬು ಬೆಳೆಗಾರರ ಪ್ರತಿಭಟನೆ ಬಿಕ್ಕಟ್ಟು ಸಂಬಂಧ ಸಿಎಂ ಸಿದ್ದರಾಮಯ್ಯ ರೈತರು, ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸರಣಿ ಸಭೆ ನಡೆಸುತ್ತಿರುವ ಹಿನ್ನೆಲೆ ತುಮಕೂರು ಪ್ರವಾಸ ರದ್ದು ಮಾಡಿದ್ದಾರೆ.‌

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರು ಜೊತೆ ಸುದೀರ್ಘ ಸಭೆ ನಡೆಸುತ್ತಿದ್ದಾರೆ. ಹೀಗಾಗಿ ಸಂಜೆ 2 ಗಂಟೆಗೆ ತೆರಳಬೇಕಾಗಿದ್ದ ತುಮಕೂರು ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ರದ್ದು ಪಡಿಸಿದ್ದಾರೆ. ಆ ಮೂಲಕ ರಾಜಕೀಯವಾಗಿ ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಸಚಿವ ಕೆ.ಎನ್.ರಾಜಣ್ಣನ ಮನೆಯಲ್ಲಿ ಲಂಚ್ ಮಿಟೀಂಗ್ ಕೂಡ ರದ್ದಾಗಿದೆ.

ಕೆ.ಎನ್.ರಾಜಣ್ಣರ ತುಮಕೂರು ಮನೆಯಲ್ಲಿ ಏರ್ಪಡಿಸಲಾಗಿದ್ದ ಔತಣಕೂಟ ಸಾಕಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ‌ನವೆಂಬರ್ ಕ್ರಾಂತಿಯ ಕಿಚ್ಚು ಹುಟ್ಟು ಹಾಕಿದ್ದ ಕೆ.ಎನ್.ರಾಜಣ್ಣ ಮನೆಯಲ್ಲಿ ಸಿಎಂ ಔತಣಕೂಟದಲ್ಲಿ ಪಾಲ್ಗೊಳ್ಳುತ್ತಿರುವುದು ಹಲವು ಪ್ರಶ್ನೆಗಳನ್ನು ಮೂಡಿಸಿತ್ತು. ಸಂಪುಟದಿಂದ ವಜಾಗೊಂಡಿದ್ದ ಕೆ.ಎನ್.ರಾಜಣ್ಣ ನವೆಂಬರ್ ಕ್ರಾಂತಿ ಎಂಬ ಬಾಂಬ್ ಸಿಡಿಸಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ರಾಜ್ಯ ಸರ್ಕಾರ ರೈತರ ಬೇಡಿಕೆ
Add as Preferred on Google Follow on Google News
Share. WhatsApp Facebook Twitter Telegram
Previous Articleಆನೆ, ಚಿರತೆ, ಹುಲಿ, ಆಯ್ತು ಈಗ ಹಂದಿ ಕಾಟ: ಕಾಡು ಹಂದಿ ದಾಳಿಗೆ ರೈತ ಬಲಿ
Next Article ಶನಿವಾರದ ಪಂಚಾಂಗ, ರಾಶಿ ಭವಿಷ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

August 29, 2026

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

August 27, 2026

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.