BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ಸೇನೆಯನ್ನು ಎಳೆದು ತರುತ್ತಿರುವುದು ರಾಜಕೀಯ ಕುತಂತ್ರ

Author Picture
Published On: November 8, 2025

—Advertisement—

Updated By: Priyalachhi

ನವದೆಹಲಿ: ಭಾರತೀಯ ಸೇನೆಯ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಸೇನೆಯನ್ನು ರಾಜಕೀಯಕ್ಕೆ ಎಳೆಯಬೇಡಿ ಎಂದು ಎಚ್ಚರಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದರ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ʻಶೇ. 10 ಇರುವ ಜನರು ಸೇನೆಯನ್ನ ನಿಯಂತ್ರಿಸುತ್ತಿದ್ದಾರೆʼ ಎಂಬ ರಾಹುಲ್‌ ಗಾಂಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸಿದರು. ಇದು ರಾಹುಲ್‌ ಗಾಂಧಿ ಅವರ ಬೇಜವಾಬ್ದಾರಿ ತನದ ಹೇಳಿಕೆ. ಜಾತಿ ರಾಜಕೀಯಕ್ಕೆ ಸೇನೆಯನ್ನು ಎಳೆದು ತರುತ್ತಿರುವುದು ವಿಭಜಿಸುವ ರಾಜಕೀಯ ಕುತಂತ್ರ ಎಂದು ವಾಗ್ದಾಳಿ ನಡೆಸಿದರು.

ರಾಹುಲ್‌ ಗಾಂಧಿ ಅಭಿವೃದ್ಧಿ ಮೂಲಕ ಮತ್ತು ತಮ್ಮ ಕೆಲಸಗಳ ಮೂಲಕ ಸಾರ್ವಜನಿಕರ ನಂಬಿಕೆಯನ್ನು ಗಳಿಸಲು ಸಾಧ್ಯವಿಲ್ಲ. ಅದಕ್ಕಾಗಿ ಜನರ ದಾರಿ ತಪ್ಪಿಸುವ, ಆಧಾರ ರಹಿತ ಹೇಳಿಕೆಗಳನ್ನ ನೀಡುವುದು ಅಭ್ಯಾಸ ಆಗಿಬಿಟ್ಟಿದೆ. ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಆದ್ರೆ ಆರೋಗ್ಯಕರ ರಾಜಕೀಯ ಎಂದಿಗೂ ದಾರಿ ತಪ್ಪಲ್ಲ ಎಂದು ಕುಟುಕಿದರು.

ಸಶಸ್ತ್ರ ಪಡೆಗಳಲ್ಲಿ ಎಲ್ಲಾ, ಜಾತಿ, ಧರ್ಮ, ಪಂಗಡಗಳ ಜನರು ಇದ್ದಾರೆ. ಪ್ರತಿಯೊಬ್ಬರೂ ತಮ್ಮದೇ ಆದ ಧರ್ಮ ಮತ್ತು ಧಾರ್ಮಿಕ ಆಚರಣೆಗಳನ್ನ ಅನುಸರಿಸುತ್ತಾರೆ. ಆ ಆಚರಣೆಗಳನ್ನು ನಿರ್ವಹಿಸುವ ಪುರೋಹಿತರೂ ಅಲ್ಲಿ ಉಪಸ್ಥಿತರಿರುತ್ತಾರೆ. ಆದ್ರೆ ಸೇನೆಯಲ್ಲಿ ಯಾವುದೇ ರೀತಿಯ ತಾರತಮ್ಯವಿಲ್ಲ. ಜಾತಿವಾದವಿಲ್ಲ, ಕೋಮು ದ್ವೇಷ, ಪಕ್ಷಪಾತವಾಗಲಿ ಇಲ್ಲ. ದೇಶ ಅಂತ ಬಂದಾಗ ಅವರೆಲ್ಲರೂ ಭಾರತೀಯರಾಗಿದ್ದಾರೆ. ಮಿಲಿಟರಿ ಕರ್ತವ್ಯ ನಿರ್ವಹಿಸುವುದೇ ಅವರ ಗುರಿಯಾಗಿದೆ. ಹಾಗಾಗಿ ನಮ್ಮ ಸಶಸ್ತ್ರ ಪಡೆಗಳನ್ನ ರಾಜಕೀಯಕ್ಕೆ ಎಳೆದು ತರೋದು ಸರಿಯಲ್ಲ ಎಂದು ರಾಹುಲ್‌ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದರು.

ಸೈನಿಕರಿಗೆ ಒಂದೇ ಧರ್ಮವಿದೆ, ಅದು ಸೈನ್ಯ ಧರ್ಮ ಎಂದು ಹೇಳಿದ್ದಾರೆ. ಅಲ್ಲದೆ, ದೇಶವು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ, ಸೈನಿಕರು ಶೌರ್ಯದ ಮೂಲಕ ಭಾರತದ ತಲೆಯನ್ನು ಎತ್ತರಕ್ಕೆ ಏರಿಸಿದ್ದಾರೆ ಎಂದು ರಕ್ಷಣಾ ಸಚಿವ ಪ್ರತಿಪಾದಿಸಿದ್ದಾರೆ.

ಮುಂದುವರೆದು ಮಾತನಾಡಿದ ಸಿಂಗ್​, ಮೀಸಲಾತಿ ಇರಬೇಕು. ಬಿಜೆಪಿ ಕೂಡ ಮೀಸಲಾತಿಯ ಬೆಂಬಲಿಗರಾಗಿದ್ದೇವೆ. ನಾವು ಬಡವರಿಗೆ ಮೀಸಲಾತಿ ನೀಡಿದ್ದೇವೆ. ಆದರೆ ಸೇನೆಯ ಬಗ್ಗೆ? ನಮ್ಮ ಸೇನಾ ಸೈನಿಕರಿಗೆ ಒಂದೇ ಧರ್ಮವಿದೆ. ಆ ಧರ್ಮ ಸೈನ್ಯ ಧರ್ಮ. ಅದನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮವಿಲ್ಲ. ನಮ್ಮ ಸೇನೆಯನ್ನು ರಾಜಕೀಯಕ್ಕೆ ಎಳೆಯಬೇಡಿ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಜಾತಿ, ಪಂಥ ಮತ್ತು ಧರ್ಮದ ಈ ರಾಜಕೀಯವು ದೇಶಕ್ಕೆ ದೊಡ್ಡ ಹಾನಿಯನ್ನು ಉಂಟುಮಾಡಿದೆ. ಸಮಾಜದ ಎಲ್ಲಾ ವರ್ಗಗಳನ್ನು ಮೇಲಕ್ಕೆತ್ತಬೇಕು ಎಂಬುದು ನಮ್ಮ ಚಿಂತನೆಯಾಗಿದೆ. ನಾವು ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದ್ದೇವೆ. ಅಲ್ಲದೆ, ಜಾತಿ, ಪಂಥ ಅಥವಾ ಧರ್ಮದ ಆಧಾರದ ಮೇಲೆ ನಾವು ತಾರತಮ್ಯ ಮಾಡಲು ಬಯಸುವುದಿಲ್ಲ. ನಮ್ಮ ದೇಶದ ಋಷಿಮುನಿಗಳು ಮತ್ತು ಜನರು ಇದರ ಬಗ್ಗೆ ಎಂದಿಗೂ ಯೋಚಿಸಿಲ್ಲ ಎಂದು ರಕ್ಷಣಾ ಸಚಿವರು ತಿಳಿಸಿದ್ದಾರೆ.

ಮಂಗಳವಾರ ನಡೆದ ಬಿಹಾರ ಚುನಾವಣಾ ಪ್ರಚಾರ ವೇಳೆ ಮಾತನಾಡಿ ರಾಹುಲ್, ಭಾರತೀಯ ಸೇನೆಯು ದೇಶದ ಜನಸಂಖ್ಯೆಯ ಶೇ.10 ರಷ್ಟು ಜನರ ನಿಯಂತ್ರಣದಲ್ಲಿದೆ ಎಂದು ಹೇಳಿದ್ದರು. ಇದು ಸಂಸ್ಥೆಯಲ್ಲಿ ಮೇಲ್ಜಾತಿಗಳ ಪ್ರಾಬಲ್ಯವನ್ನು ಉಲ್ಲೇಖಿಸುತ್ತದೆ ಎಂದು ರಾಹುಲ್​ ವಿವಾದತ್ಮಕ ಹೇಳಿಕೆ ನೀಡಿದ್ದಾರೆ.

ಭಾರತದಲ್ಲಿನ ಆರ್ಥಿಕ ಅಸಮಾನತೆಯ ಸಮಸ್ಯೆಯನ್ನು ಅವರು ಎತ್ತಿ ಗಾಂಧಿ, ದೇಶದಲ್ಲಿ ಜನಸಂಖ್ಯೆಯ ಶೇ. 90 ರಷ್ಟು ದಲಿತರು, ಮಹಾದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಅಂಚಿನಲ್ಲಿರುವ ಸಮುದಾಯಗಳಿಗೆ ಸೇರಿದವರಾಗಿದ್ದರೂ, ಕಾರ್ಪೊರೇಟ್ ಭಾರತ, ಅಧಿಕಾರಶಾಹಿ, ನ್ಯಾಯಾಂಗ ಮತ್ತು ಇತರ ಪ್ರಮುಖ ಸಂಸ್ಥೆಗಳಲ್ಲಿ ಕಡಿಮೆ ಪ್ರಾತಿನಿಧ್ಯವಿದೆ ಎಂದು ಹೇಳಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp