ರಾಜಕೀಯರಾಜ್ಯ

ಹಿಂದಿನ ಸರ್ಕಾರಕ್ಕಿಂತ ನಮ್ಮ ಸರ್ಕಾರ 1.5 ಪಟ್ಟು ಉದ್ಯೋಗಗಳ ಸೃಷ್ಟಿಸಿದೆ: ಪ್ರಧಾನಿ ಮೋದಿ

Our government has created 1.5 times more jobs than the previous government: PM Modi

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ನವದೆಹಲಿ: ಬಿಜೆಪಿ ಸರ್ಕಾರವು ತನ್ನ ದಶಕದ ಆಡಳಿತದಲ್ಲಿ ಹಿಂದಿನ ಸರ್ಕಾರಕ್ಕಿಂತ 10 ವರ್ಷಗಳಲ್ಲಿ ಸುಮಾರು 1.5 ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ರೋಜಗಾರ್ ಮೇಳದ(ಉದ್ಯೋಗ ಮೇಳ) ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಒಂದು ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಉದ್ಯೋಗ ನೇಮಕಾತಿಯಲ್ಲಿ ಪಾರದರ್ಶಕತೆ ತಂದಿದೆ. ಕಾಲಮಿತೊಯಲ್ಲಿ ಉದ್ಯೋಗಕ್ಕೆ ನೇಮಕಾತಿ ಖಚಿತಪಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ಹೇಳಿದರು.

ಹಿಂದಿನ ಸರ್ಕಾರಗಳು ನೇಮಕಾತಿ ನಡೆಸಲು ಬಹಳ ಸಮಯ ತೆಗೆದುಕೊಳ್ಳುತ್ತಿದ್ದವು, ಆದರೆ, ಬಿಜೆಪಿ ಸರ್ಕಾರವು ತನ್ನ ದಶಕದ ಆಡಳಿತದಲ್ಲಿ ಹಿಂದಿನ ಸರ್ಕಾರಕ್ಕಿಂತ 10 ವರ್ಷಗಳಲ್ಲಿ ಸುಮಾರು 1.5 ಪಟ್ಟು ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಒದಗಿಸಿದೆ. ಹಿಂದಿನ ಸರ್ಕಾರಗಳಲ್ಲಿ, ಉದ್ಯೋಗ ಜಾಹೀರಾತಿನ ಸಮಸ್ಯೆಯಿಂದ ನೇಮಕಾತಿ ಪತ್ರಗಳ ವಿತರಣೆ ಮಾಡಲು ಬಹಳ ಸಮಯ ತೆಗೆದುಕೊಳ್ಳುತ್ತಿತ್ತು. ಈ ವಿಳಂಬದ ನೆಪದಲ್ಲಿ ಲಾಭವನ್ನು ಪಡೆದು ಹಣ ಮಾಡಿಕೊಳ್ಳುತ್ತಿದ್ದರು. ಆದರೆ, ಇದೀಗ ನಮ್ಮ ಸರ್ಕಾರ 10 ವರ್ಷದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕಗೊಳಿಸಿದ್ದೇವೆ ಎಂದು ಟೀಕಿಸಿದರು.

ನಮ್ಮ ಸರ್ಕಾರ ನಿಗದಿತ ಸಮಯದ ಚೌಕಟ್ಟಿನೊಳಗೆ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಾವು ಪ್ರಯತ್ನಿಸುತ್ತೇವೆ. ಇದರಿಂದ ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಗಳನ್ನು ಪ್ರದರ್ಶಿಸಲು ಸಮಾನ ಅವಕಾಶವನ್ನು ನೀಡುತ್ತಿದೆ ಎಂದು ತಿಳಿಸಿದರು.

ಇನ್ನು ರೋಜ್‌ಗಾರ್ ಮೇಳದ ಅಡಿಯಲ್ಲಿ ಆಯ್ಕೆಯಾದ ಸಿಬ್ಬಂದಿಗಳನ್ನು ಕಂದಾಯ, ಗೃಹ, ಉನ್ನತ ಶಿಕ್ಷಣ, ಅಣುಶಕ್ತಿ, ರಕ್ಷಣೆ, ಹಣಕಾಸು ಸೇವೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಬುಡಕಟ್ಟು ವ್ಯವಹಾರಗಳು, ರೈಲ್ವೆಯಂತಹ ವಿವಿಧ ಸಚಿವಾಲಯಗಳಲ್ಲಿ ಮರುಸೇರ್ಪಡೆಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿಯೊಬ್ಬ ಯುವಕನು ಕಠಿಣ ಪರಿಶ್ರಮ ಮತ್ತು ಪ್ರತಿಭೆಯ ಆಧಾರದ ಮೇಲೆ ತನ್ನ ಸ್ಥಾನವನ್ನು ಗಳಿಸಬಹುದು. 2014ರಿಂದ ಯುವಜನರನ್ನು ಭಾರತ ಸರ್ಕಾರದೊಂದಿಗೆ ಸಂಪರ್ಕಿಸುವ ಮೂಲಕ ರಾಷ್ಟ್ರ ನಿರ್ಮಾಣದ ಪಯಣದಲ್ಲಿ ತೊಡಗಿಸಿಕೊಳ್ಳುವುದು ಬಿಜೆಪಿ ಸರ್ಕಾರದ ಪ್ರಯತ್ನವಾಗಿದೆ.

ಇನ್ನು ‘ಕರ್ಮಯೋಗಿ ಭವನ’ದ ಮೂಲಕ ಹೊಸದಾಗಿ ನೇಮಕಗೊಂಡ ಸಿಬ್ಬಂದಿಗೆ iGOT ಕರ್ಮಯೋಗಿ ಪೋರ್ಟಲ್‌ನಲ್ಲಿ ಆನ್‌ಲೈನ್ ಮಾಡ್ಯೂಲ್ ‘ಕರ್ಮಯೋಗಿ ಪ್ರಾರಂಭ’ ಮೂಲಕ ತರಬೇತಿ ನೀಡಲಾಗುತ್ತಿದೆ. iGOT ಕರ್ಮಯೋಗಿ ಪೋರ್ಟಲ್‌ನಲ್ಲಿ 800 ಕ್ಕೂ ಹೆಚ್ಚು ಇ-ಲರ್ನಿಂಗ್ ಕೋರ್ಸ್‌ಗಳನ್ನು ಒದಗಿಸಲಾಗಿದೆ ಎಂದರು.

ಇದನ್ನೂ ಓದಿ...

Back to top button
>