ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು: ಹೆಚ್ಚುವರಿ ಆಸ್ತಿ ತೆರಿಗೆ ವಸೂಲಿಗೆ ಮುಂದಾಗಿರುವ ಬಿಬಿಎಂಪಿಗೆ ನಾಗರೀಕರು ಹಿಡಿಶಾಪ ಹಾಕುತ್ತಿದ್ದು, ನಾಗರೀಕರಿಗೆ ರಾಜಕೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸುತ್ತಿವೆ.
ತೆರಿಗೆ ಸಂಗ್ರಹ ಹೆಸರಲ್ಲಿ ಬಿಬಿಎಂಪಿಗೆ ಜನರಿಗೆ ತೊಂದರೆ ಕೊಡುತ್ತಿದ್ದು, ಇದು ಅವೈಜ್ಞಾನಿಕ ಮತ್ತು ಅನ್ಯಾಯ ಎಂದು ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕರು ಹೇಳಿದ್ದಾರೆ.
ಸಕಾಲದಲ್ಲಿ ಆಸ್ತಿ ತೆರಿಗೆ ಪಾವತಿಸಿದ್ದರೂ ಬಿಬಿಎಂಪಿ ಕಿರುಕುಳ ನೀಡುತ್ತಿದೆ. ಆಸ್ತಿ ತೆರಿಗೆಯನ್ನು ಸರಿಯಾಗಿ ಪಾವತಿಸುತ್ತಿದ್ದರು, ಅನ್ಯಾಯದ ರೀತಿಯಲ್ಲಿ ದಂಡದ ಬೆದರಿಕೆ ಹಾಕಲಾಗುತ್ತಿದ್ದಾರೆ. ಇದು ಕಿರುಕುಳಕ್ಕಿಂತ ಕಡಿಮೆಯಿಲ್ಲ ಎಂದು ಲೋಗನಾಥನ್ ಅವರು ಹೇಳಿದ್ದಾರೆ.
ಜಯನಗರ ಶಾಸಕ ಸಿಕೆ ರಾಮಮೂರ್ತಿ ಅವರು ಮಾತನಾಡಿ, ಬಿಬಿಎಂಪಿ ಕ್ರಮ ಅವೈಜ್ಞಾನಿಕವಾಗಿದೆ. ಕೂಡಲೇ ಬಿಬಿಎಂಪಿ ತನ್ನ ಕ್ರಮದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದರೆ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
40,000 ರೂ. ತೆರಿಗೆ ಕಟ್ಟಬೇಕಾಗಿರುವ ಕೆಲವರು 1 ಲಕ್ಷಕ್ಕಿಂತ ಹೆಚ್ಚು ತೆರಿಗೆ ಕಟ್ಟುವಂತೆ ಒತ್ತಾಯಿಸಲಾಗುತ್ತಿದೆ. ಹೆಚ್ಚುವರಿ ತೆರಿಗೆ ಕಟ್ಟದವರ ಕಟ್ಟಡಗಳ ಸೀಲ್ ಮಾಡುವುದಾಗಿ ಬೆದರಿಸುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ಮಾಧ್ಯಮ ಉಸ್ತುವಾರಿ ಜಗದೀಶ್ ವಿ ಸದಾಂ ಅವರು ಮಾತನಾಡಿ, ನಗರವಾಸಿಗಳ ಬೆಂಬಲಕ್ಕೆ ಆಪ್ ನಿಲ್ಲಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು ನವನಿರ್ಮಾಣ ಪಕ್ಷ (ಬಿಎನ್‌ಪಿ) ಪೂಂಗೊತೈ ಪರಮಶಿವಂ ಅವರು ಮಾತನಾಡಿ, ಬಿಬಿಎಂಪಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.