ರಾಜಕೀಯರಾಜ್ಯ

ನಟ ಶಿವ ರಾಜ್‌ಕುಮಾರ್‌ ಸಿನಿಮಾ, ಜಾಹೀರಾತು ನಿಷೇಧಿಸಿ; ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

Actor Shiva Rajkumar movie, ban advertisement; BJP complaint to Election Commission

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಬೆಂಗಳೂರು: ನಟ ಶಿವ ರಾಜ್‌ಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ. ಪತ್ನಿ ಗೀತಾ ಶಿವರಾಜ್‌ಕುಮಾರ್ ಪರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಭಾಗಿಯಾಗಿದ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್  ಅವರ ಸಿನಿಮಾ, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಒಬಿಸಿ ಮೋರ್ಚಾ ದೂರು ಸಲ್ಲಿಸಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ಪ್ರಚಾರ ಆರಂಭಿಸಿದ್ದಾರೆ. ಹೀಗಾಗಿ ಪತ್ನಿಯ ಚುನಾವಣಾ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ಕೂಡ ಸಾಥ್ ನೀಡಿದ್ದಾರೆ. ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ರೋಡ್‌ ಶೋ, ಬೃಹತ್ ಕಾಂಗ್ರೆಸ್‌ ಸಮಾವೇಶ ನಡೆದಿತ್ತು. ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಶಾಸಕರಾದ ಬಿ.ಕೆ. ಸಂಗಮೇಶ್ವರ್, ಬೇಳೂರು ಗೋಪಾಲಕೃಷ್ಣ ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು.

ಶಿವ ರಾಜ್‌ಕುಮಾರ್‌ ಜನಪ್ರಿಯ ನಟರಾಗಿದ್ದು, ಚುನಾವಣೆ ವೇಳೆ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಅದೇ ರೀತಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪತ್ನಿ ಪರ ಪ್ರಚಾರ ಮಾಡುತ್ತಿರುವ ಶಿವ ರಾಜ್‌ಕುಮಾರ್‌ ಅವರ ಭಾವಚಿತ್ರವುಳ್ಳ ಫ್ಲೆಕ್ಸ್‌, ಸಿನಿಮಾಗಳು, ಪೋಸ್ಟರ್‌, ಜಾಹೀರಾತುಗಳನ್ನು ನಿಷೇಧ ಮಾಡಬೇಕು ಎಂದು ಚುನಾವಣಾ ಆಯೋಗಕ್ಕ ದೂರು ನೀಡಲಾಗಿದೆ.

ಇದನ್ನೂ ಓದಿ...

Back to top button
>