ರಾಜಕೀಯರಾಜ್ಯ

ಡಾ. ಮಂಜುನಾಥ್‌ ಗೆಲುವಿಗೆ ಹರಕೆ ಹೊತ್ತ ಪತ್ನಿ; ಮಾ. 28ಕ್ಕೆ ಡಿಕೆಸು ನಾಮಪತ್ರ ಸಲ್ಲಿಕೆ

Dr. Manjunath's wife is eager for victory; Ma. Submission of DKSU nomination paper on 28th

ವರದಿ: ಪ್ರಿಯಲಚ್ಛಿ ಗಂಧನಹಳ್ಳಿ

ಮಂಡ್ಯ / ರಾಮನಗರ: ಲೋಕಸಭಾ ಚುನಾವಣಾ  ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಈ ಬಾರಿ ಕೆಲವು ಅಚ್ಚರಿಯ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಅವರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಡಾ. ಸಿ.ಎನ್. ಮಂಜುನಾಥ್‌‌  ಕೂಡ ಒಬ್ಬರು. ಈಗ ಅವರ ಗೆಲುವಿಗಾಗಿ ಪತ್ನಿ ಮನೆ ದೇವರಲ್ಲಿ ಹರಕೆ ಹೊತ್ತಿದ್ದಾರೆ. ವಿಶೇಷ ಪೂಜೆಯನ್ನೂ ಮಾಡಿಸಿದ್ದಾರೆ. ಇನ್ನೊಂದು ಕಡೆ ಕಾಂಗ್ರೆಸ್‌ ಅಭ್ಯರ್ಥಿ, ಹಾಲಿ ಸಂಸದ‌ ಡಿ.ಕೆ. ಸುರೇಶ್  ಅವರು ಮಾರ್ಚ್‌ 28ರಂದು ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ಅವರು ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಲೋಕಸಭಾ ಚುನಾವಣೆ  ಗೆಲುವಿಗಾಗಿ ಬೆಂಗಳೂರು ಗ್ರಾಮಾಂತರದ ಮೈತ್ರಿ ಅಭ್ಯರ್ಥಿಯಾಗಿ ಬಿಜೆಪಿಯಿಂದ ಕಣಕ್ಕಿಳಿದಿರುವ ಡಾ. ಸಿ.ಎನ್.‌ ಮಂಜುನಾಥ್‌, ಮನೆ ದೇವರ ಹೋಗಿದ್ದಾರೆ. ಡಾ. ಮಂಜುನಾಥ್ ಅವರು ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಚಿಕ್ಕತಾರಹಳ್ಳಿಯ ಕೋಡಿ ಮಾರಮ್ಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಸಮೇತರಾಗಿ ಮನೆ ದೇವರ ದರ್ಶನ ಪಡೆದುಕೊಂಡಿದ್ದಾರೆ.

ಲೋಕಸಭೆಯಲ್ಲಿ ಗೆಲುವಿಗಾಗಿ ಹರಕೆ ಹೊತ್ತ ಪತ್ನಿ

ಡಾ. ಮಂಜುನಾಥ್‌ ಅವರ ಪತ್ನಿ ಅನಸೂಯ ಅವರು ಮನೆ ದೇವರಲ್ಲಿ ಪತಿಯ ಗೆಲುವಿಗೆ ಹರಕೆ ಹೊತ್ತರು. ಪತಿಯನ್ನು ಗೆಲ್ಲಿಸುವಂತೆ ದೇವರ ಮೊರೆ ಹೋದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಡಾ. ಸಿ.ಎನ್.‌ ಮಂಜುನಾಥ್‌, ರಾಜ್ಯದ ಒಳಿತಿಗಾಗಿ ಹಾಗೂ ಮಳೆ ಬೆಳೆ ಆಗಲೆಂದು ಪೂಜೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಮಾರ್ಚ್ 28ಕ್ಕೆ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆ

ಮಾರ್ಚ್ 28ರಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂಬಂಧ ಡಿ.ಕೆ. ಸುರೇಶ್‌ ಅವರು ಅಧಿಕೃತ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ...

Back to top button
>