• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ

Sambrama Prabha News by Sambrama Prabha News
November 10, 2025
in Home, Latest News
0
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ

Updated By: Priyalachhi

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.

ಪರಪ್ಪನ ಅಗ್ರಹಾರ ಕೈದಿಗಳಿಗೆ ನಿಯಮ ಮೀರಿ ವಿಶೇಷ ಸವಲತ್ತು ನೀಡಿರುವ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಸಚಿವ ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಪರಮೇಶ್ವರ್ ಅವರು, ಕಾರಾಗೃಹದ ಮುಖ್ಯ ಅಧೀಕ್ಷಕ ಸುರೇಶ್‌, ಜೈಲು ಅಧೀಕ್ಷಕ ಮ್ಯಾಗೇರಿ, ಸಹಾಯಕ ಅಧೀಕ್ಷಕ ಅಶೋಕ್‌ ಭಜಂತ್ರಿ ಅವರನ್ನು ಅಮಾನತುಗೊಳಿಸಿದ್ದಾರೆ.

ಅಲ್ಲದೆ, ಇನ್ನು ಮುಂದೆ ಈ ರೀತಿ ಪ್ರಕರಣ ಮರುಕಳಿಸದೇ ಇರಲು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು, ಎಸ್‌ಪಿ ಇರಲಿದ್ದಾರೆ.

Tags: ಕೇಂದ್ರ ಕಾರಾಗೃಹಪರಪ್ಪನ ಅಗ್ರಹಾರ
Previous Post

360 ಕೆಜಿ ಸ್ಫೋಟಕ, ಶಸ್ತ್ರಾಸ್ತ್ರಗಳು ಪತ್ತೆ ಪ್ರಕರಣ

Next Post

ಫರಿದಾಬಾದ್‌ನ ಮನೆಯಲ್ಲಿತ್ತು 360 ಕೆ.ಜಿ ಅಮೋನಿಯಂ ನೈಟ್ರೇಟ್​, ಅಪಾರ ಪ್ರಮಾಣದ ಶಸ್ತ್ರಾಸ್ತ್ರ!

Next Post
ಫರಿದಾಬಾದ್‌ನ ಮನೆಯಲ್ಲಿತ್ತು 360 ಕೆ.ಜಿ ಅಮೋನಿಯಂ ನೈಟ್ರೇಟ್​, ಅಪಾರ ಪ್ರಮಾಣದ ಶಸ್ತ್ರಾಸ್ತ್ರ!

ಫರಿದಾಬಾದ್‌ನ ಮನೆಯಲ್ಲಿತ್ತು 360 ಕೆ.ಜಿ ಅಮೋನಿಯಂ ನೈಟ್ರೇಟ್​, ಅಪಾರ ಪ್ರಮಾಣದ ಶಸ್ತ್ರಾಸ್ತ್ರ!

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.