ನಟ ದ್ವಾರಕೀಶ ವಿಧಿವಶ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ನಾಳೆ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ
Actor Dwarkeesa Vidhiwasa: Arrangements for final darshan at Rabindra Kalakshetra, cremation tomorrow in Bengaluru
- ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ನಡೆಯಲಿದೆ.
ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದ್ದು, ಗಣ್ಯರ ಮತ್ತು ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್ಮೀಲ್ ಚಿತಾಗಾರಕ್ಕೆ ತರಲಾಗುತ್ತದೆ. ಇಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.