- ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಂಗಳೂರು: ತೇಜಸ್ವಿ ಸೂರ್ಯ ಪ್ರಬಲ ವಾಗ್ಮಿ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಆದರೂ, ಬೆಂಗಳೂರು ದಕ್ಷಿಣ ಸಂಸದರು ಇದುವರೆಗೂ ತಮ್ಮ ಕ್ಷೇತ್ರ ಬಿಟ್ಟು ಬೇರೆಡೆ ಪ್ರಚಾರ ಮಾಡಿಲ್ಲ, ಏಕೆಂದರೆ ಈ ಬಾರಿ ಅವರಿಗೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ. ತೇಜಸ್ವಿ ಸೂರ್ಯ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ, ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ.
ಈ ಪ್ರತಿಷ್ಠಿತ ಕ್ಷೇತ್ರದಲ್ಲಿ ಹವಾಲಾ ಹಣ ನೀರಿನಂತೆ ಹರಿಯುತ್ತಿದೆ ಎಂಬ ಊಹಾಪೋಹ ದಟ್ಟವಾಗಿದೆ. ಚುನಾವಣಾ ಆಯೋಗದ ಅಧಿಕಾರಿಗಳು ಇತ್ತೀಚೆಗೆ ಕಾರಿನಲ್ಲಿ 1.4 ಕೋಟಿ ರೂ.ಗಳನ್ನು ವಶಪಡಿಸಿಕೊಂಡಾಗ, ಸೌಮ್ಯಾ ರೆಡ್ಡಿ ಬಿಜೆಪಿ ವಿರುದ್ಧ ಬೊಟ್ಟು ಮಾಡಿದ್ದರು. ತೇಜಸ್ವಿ ಸೂರ್ಯ (33) ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಬೌನ್ಸ್ ಬ್ಯಾಕ್ ಮಾಡಿದ್ದರು.
ರಾಮಲಿಂಗಾರೆಡ್ಡಿ ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಸೌಮ್ಯಾ ರೆಡ್ಡಿ 2018 ರಲ್ಲಿ ಜಯನಗರ ಶಾಸಕರಾಗಿ ಆಯ್ಕೆಯಾದರು, ಆದರೆ 2023 ರಲ್ಲಿ ಅದನ್ನು ಉಳಿಸಿಕೊಳ್ಳಲು ವಿಫಲರಾಗಿದ್ದರು. ಈ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಐದು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಮೂವರು ಶಾಸಕರಿದ್ದಾರೆ. ಹೀಗಾಗಿ ತೇಜಸ್ವಿ ಸೂರ್ಯ ಸ್ವಲ್ಪ ಗಲಿಬಿಲಿಯಾಗಿದ್ದಾರೆ. ಕರ್ನಾಟಕವು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ರಾಜ್ಯವಾಗಿರುವುದರಿಂದ, ಸಾಧ್ಯವಾದಷ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲಲು ಪಕ್ಷವು ಎಲ್ಲಾ ತಂತ್ರಗಳನ್ನು ಹೆಣೆಯುತ್ತಿದೆ. ಹೀಗಾಗಿ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರನ್ನು ಅಭ್ಯರ್ಥಿಯನ್ನಾಗಿಸಿದೆ.