- ವರದಿ: ಪ್ರಿಯಲಚ್ಛಿ ಗಂಧನಹಳ್ಳಿ
ಬೆಳಗಾವಿ: ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಬಿಜೆಪಿಯ ಕಟ್ಟಾ ನಾಯಕ ಮತ್ತು ಆರ್‌ಎಸ್‌ಎಸ್‌ಗೆ ನಿಕಟವಾಗಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಕಳೆದ ವರ್ಷ ಕಾಂಗ್ರೆಸ್ ಸೇರ್ಪಡೆಯಾದರು, ರಾಜ್ಯ ಬಿಜೆಪಿಯಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹವು ಕೊತ ಕೊತ ಕುದಿಯುತ್ತಿದ್ದು ಲೋಕಸಭೆ ಚುನಾವಣೆಯ ನಂತರ ಸ್ಫೋಟಗೊಳ್ಳಲಿದೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ
ಚಿಕ್ಕೋಡಿಯಲ್ಲಿ ಬಿರುಸಿನ ಚುನಾವಣಾ ಪ್ರಚಾರದಲ್ಲಿರುವ ಸವದಿ ಶುಕ್ರವಾರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದರು. ಬಿಜೆಪಿಯಲ್ಲಿ ಭಾರೀ ಆಂತರಿಕ ಕಲಹ ನಡೆಯುತ್ತಿದೆ ಎಂಬುದು ನಿಮಗೆ ತಿಳಿದಿರಬೇಕು. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಪುತ್ರ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಅವರನ್ನು ಸೋಲಿಸುವ ಉದ್ದೇಶದಿಂದ ಕೆಎಸ್ ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ (ಸ್ವತಂತ್ರವಾಗಿ) ಸ್ಪರ್ಧಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿಯ ಪ್ರಲ್ಹಾದ್ ಜೋಶಿ ಅವರನ್ನು ಸೋಲಿಸುವ ಏಕೈಕ ಗುರಿಯೊಂದಿಗೆ ದಿಂಗಾಲೇಶ್ವರ ಸ್ವಾಮಿ (ಸ್ವತಂತ್ರ) ಸ್ಪರ್ಧಿಸಿದ್ದಾರೆ. ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮಿ ಸ್ಪರ್ಧಿಸಲು ಶೆಟ್ಟರ್ ಮತ್ತು ಯಡಿಯೂರಪ್ಪ ಅವರೇ ಕಾರಣ ಎಂದು ಪುನರುಚ್ಚರಿಸಿದರು. ಬಿಜೆಪಿಯಲ್ಲಿನ ಆಂತರಿಕ ಕಲಹ ವ್ಯಾಪಕವಾಗಿ ಹರಡುತ್ತಿದ್ದು, ಮುಂಬರುವ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಸೋಲಿಸಲು ಕೇಸರಿ ಪಕ್ಷದೊಳಗೆ ಪ್ರಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.